Nisha Yogeshwar: ಡಿ ಕೆ ಶಿವಕುಮಾರ್ ಅವರೇ ನನ್ನ ಸಿಡಿ ನಿಮ್ಮ ಬಳಿ ಇದ್ರೆ ರಿಲೀಸ್ ಮಾಡಿ: ನಿಶಾ ಯೋಗೇಶ್ವರ್
ಬೆಂಗಳೂರು, ಅಕ್ಟೋಬರ್ 26: ರಾಜ್ಯದಲ್ಲಿ ಉಪಚುನಾವಣೆ ಕಾವು ರಾಜ್ಯ ರಾಜಕೀಯದಲ್ಲಿ ಜೋರಾಗಿದೆ. ಸಿ ಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಸೇರ್ಪಡೆ ಹಿಂದೆ ಡಿ ಕೆ ಶಿವಕುಮಾರ್ ಸಿಡಿ ರಹಸ್ಯದ ಇದೆ ಎನ್ನುವ ಆರೋಪ ಕೇಳಿ ಬಂದಿದೆ.
ಈ ಕುರಿತು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಡಿ ಕೆ ಶಿವಕುಮಾರ್ ಸರ್.. ನನ್ನ ಸಿಡಿ ನಿಮ್ಮ ಬಳಿ ಇದ್ದರೆ ಯಾವುದೇ ಯೋಚನೆ ಮಾಡದೇ ರಿಲೀಸ್ ಮಾಡಿ ಎಂದು ಹೇಳಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯಲ್ಲಿ ಸಿ ಡಿ ವಿಚಾರವಾಗಿ ಪ್ರಸ್ತಾಪವಾಗಿದ್ದು, ಪುತ್ರಿಯ ರಕ್ಷಣೆಗಾಗಿ ಸಿ ಪಿ ಯೋಗೇಶ್ವರ್ ಅವರು ಪಕ್ಷಾಂತರದ ನಿರ್ಧಾರ ತೆಗೆದುಕೊಂಡ್ರಾ ಎಂಬ ಬಗ್ಗೆ ಚರ್ಚೆಯಾಗಿದೆ. ಮಗಳ ಸಿಡಿ ಬಳಿಸಿಕೊಂಡು ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸಿ ಪಿ ಯೋಗೇಶ್ವರ್ ಅವರನ್ನ ಕರೆ ತಂದಿದ್ದಾರೆ ಎಂದು ಡಿ ಕೆ ಶಿವಕುಮಾರ್ ಮೇಲೆ ಆರೋಪ ಇದೆ ಎಂದು ನಿಶಾ ಯೋಗೇಶ್ವರ್ ಅವರು ಹೇಳಿದ್ದಾರೆ.
ಡಿ ಕೆ ಶಿವಕುಮಾರ್ ಸರ್ ನಿಮ್ಮ ಮೇಲೆ ಈ ರೀತಿಯಾದ ಆರೋಪ ಇದೆ. ನೀವು ನನ್ನ ಸಿಡಿ ಇಟ್ಟುಕೊಂಡು ನನ್ನ ತಂದೆಯನ್ನ ನಿಮ್ಮ ಪಕ್ಷಕ್ಕೆ ಎನ್ನುವ ಆರೋಪ ಇದೆ. ಡಿ ಕೆ ಶಿವಕುಮಾರ್ ಸರ್ ನೀವು ಯಾವುದಕ್ಕೂ ಹೆದರುವುದು ಬೇಡ, ನಿಮ್ಮ ಬಳಿ ಸಿಡಿ ಇದ್ರೆ ಹಿಂಜರಿಯದೇ ಸಿಡಿ ಬಿಡುಗಡೆ ಮಾಡಿ ಸರ್ ಎಂದು ನಿಶಾ ಯೋಗೇಶ್ವರ್ ಮನವಿ ಮಾಡಿದ್ದಾರೆ.
ನನ್ನ ಅಗ್ನಿ ಪರೀಕ್ಷೆ ನಡೆಯುತ್ತಿದೆ. ಆ ಸಿಡಿ ಇಲ್ಲ ಎನ್ನುವುದಾದ್ರೆ ಅದನ್ನು ಸಹ ಜನರಿಗೆ ಬಂದು ತಿಳಿಸಿ ಸರ್. ಇದು ದೊಡ್ಡ ಆರೋಪ ನಿಮ್ಮ ಮೇಲಿದೆ. ನೀವು ದೊಡ್ಡವರು ಸರ್, ನಿಮ್ಮಲ್ಲಿ ಸಿಡಿ ವಿಷಯ ಮಾಮೂಲಿ, ಆದರೆ ನೀವು ಹೆಣ್ಣು ಮಕ್ಕಳನ್ನು ಇಂತಹ ವಿಷಯನ್ನ ಎಳೆಯುತ್ತಿದೀರಾ ಎಂದು ನನಗೆ ಶಾಕ್ ಆಗುತ್ತಿದೆ.
ಡಿ ಕೆ ಶಿವಕುಮಾರ್ ಸರ್, ನೀವು ಒಬ್ರು ತಂದೆ. ನಿಮಗೂ ಹೆಣ್ಣು ಮಕ್ಕಳಿದ್ದಾರೆ. ಸರ್, ನಮ್ಮ ಪೀಳಿಗೆಗೆ ಸ್ಪಷ್ಟತೆ ಬೇಕು. ಆ ಸ್ಪಷ್ಟತೆಯನ್ನ ನೀವೇ ಕೊಡಿ ಸರ್. ನನ್ನ ಸಿಡಿ ನಿಜವಾಗಿಯೂ ನಿಮ್ಮ ಬಳಿ ಇದ್ರೆ, ಯಾವುದೇ ಯೋಚನೆ ಮಾಡದೇ ಬಿಡುಗಡೆ ಮಾಡಿ. ನಿಮ್ಮ ಉತ್ತರಕ್ಕೆ ನಾನು ಕಾಯುತ್ತಿರುತ್ತೇನೆ ಎಂದು ನಿಶಾ ಯೋಗೇಶ್ವರ್ ಹೇಳಿದ್ದಾರೆ.
ಪ್ರತಿಷ್ಠೆಯಾದ ಚನ್ನಪಟ್ಟಣ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್ ನಿಂದ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಕಣಕ್ಕಿಳಿದಿದ್ದು, ಎನ್ ಡಿ ಎ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ನಡೆಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ಡಿ ಕೆ ಬ್ರದರ್ಸ್ ಈ ಚುನಾವಣೆಯಲ್ಲಿ ಗೆಲ್ಲುವ ಮೂಲಕ ದಳಪತಿಗಳಿಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಸಿ ಪಿ ಯೋಗೇಶ್ವರ್ ಅವರನ್ನ ಕಣಕ್ಕಿಳಿಸಿದ್ದಾರೆ.
-
ಕರ್ನಾಟಕದ ನೀರಾವರಿ ಯೋಜನೆಗೆ ಆಂಧ್ರ ಅಡ್ಡಗಾಲು: ಸಿಡಿದೆದ್ದ ಡಿಸಿಎಂ ಡಿ.ಕೆ.ಶಿವಕುಮಾರ್ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ












Click it and Unblock the Notifications