ರಾಜ್ಯದ ಹೆದ್ದಾರಿಗಳಿಗೆ ಅನುದಾನ ಘೋಷಿಸಿದ ಗಡ್ಕರಿ: ಎಷ್ಟು ಕೋಟಿ, ಯಾವ ಮಾರ್ಗ, ಎಲ್ಲೆಲ್ಲಿ ಅಗಲೀಕರಣ? ತಿಳಿಯಿರಿ
ರಾಜ್ಯದ ವಿವಿಧ ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ನಿತಿನ್ ಗಡ್ಕರಿ ಅವರು ಅನುದಾನವನ್ನು ಘೋಷಿಸಿದ್ದಾರೆ. ಹಾಗೆಯೇ ಯಾವ ಮಾರ್ಗಕ್ಕೆ ಹೆಚ್ಚಾಗಿ ಅನುದಾನ ಘೋಷಿಸಿದ್ದಾರೆ ಅನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು, ಫೆಬ್ರವರಿ, 08: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಅಭಿವೃದ್ಧಿ ಹೊಂದುತ್ತಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆಗಳು ಕೂಡ ಬರುತ್ತವೆ. ಹಾಗೆಯೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹಲವು ರಾಷ್ಟ್ರೀಯ ಹೆದ್ದಾರಿ ಯೋಜನೆ ಕಾಮಗಾರಿಗಳಿಗೆ ಅನುಮೋದನೆ ನೀಡುತ್ತಾ ಬಂದಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯದ ಹಲವು ರಾಷ್ಟ್ರೀಯ ಹೆದ್ದಾರಿಗಳಿಗೆ ಅನುದಾನನ್ನು ಕೂಡ ಘೋಷಣೆ ಮಾಡಿದ್ದಾರೆ. ಯಾವ ಮಾರ್ಗಗಳ ಹೆದ್ದಾರಿಗೆ ಎಷ್ಟು ಅನುದಾನ ನೀಡಿದ್ದಾರೆ ಅನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಈಗಾಗಲೇ ಕರ್ನಾಟಕದಲ್ಲಿ ತುಂಬಾ ಹೆದ್ದಾರಿ ಯೋಜನೆಗಳಿಗೆ ಅನುದಾನ ಕೊಡಲಾಗಿದೆ. ಹಾಗೆಯೇ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬುಧಾವಾರ (ಫೆಬ್ರವರಿ 08) ಕರ್ನಾಟಕದ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆ ಕಾಮಗಾರಿಗಳಿಗೆ ಅನುದಾನವನ್ನು ಘೋಷಿಸಿದ್ದಾರೆ. ಈ ಪೈಕಿ ಬಿಜಾರಪುದ ಮಹಾರಾಷ್ಟ್ರ ಗಡಿಭಾಗದ ಕನಮಡಿ-ಬಿಜ್ಜರಗಿ-ತಿಕೋಟ ಸೆಕ್ಷನ್ನಲ್ಲಿ ದ್ವಿಪಥ ರಸ್ತೆಯ ಅಗಲೀಕರಣಕ್ಕೆ 196 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಮ್ಮ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
|
ಬಸವರಾಜ ಬೊಮ್ಮಾಯಿ ಹೇಳಿದ್ದೇನು?
ಹಾಗೆಯೇ ಇದಕ್ಕೆ ತಮ್ಮ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಶ್ವದರ್ಜೆಯ ಇನ್ಫ್ರಾಸ್ಟ್ರಕ್ಚರ್ ಅನ್ನು ಒದಗಿಸಿರುವುದಕ್ಕೆ ಧನ್ಯವಾದ ಎಂದು ತಿಳಿಸಿದ್ದಾರೆ.
|
ಹೆದ್ದಾರಿ ಕಾಮಗಾರಿ; ಅನುದಾನದ ವಿವರ
ಕನಮಡಿ ಬಿಜ್ಜರಗಿ ಟಿಕೋಟಾ ಸೆಕ್ಷನ್ನಲ್ಲಿ (ಬಿಜಾಪುರ) ದ್ವಿಪಥ ರಸ್ತೆಯ ಅಗಲೀಕರಣಕ್ಕೆ 196.05 ಕೋಟಿ ರೂಪಾಯಿ ಘೋಷಿಸಿದ್ದಾರೆ. ವಿಜಯಪುರ ಕಲಬುರ್ಗಿಯ ಮಹಾರಾಷ್ಟ್ರ ಗಡಿಭಾಗದ ರಾಹೆ-548ಬಿಗೆ ಸೇರುವ ಮುರುಂನಿಂದ ಐಬಿ ಸರ್ಕಲ್ವರೆಗಿನ ದ್ವಿಪಥ ರಸ್ತೆಯ ಅಗಲೀಕರಣ ಯೋಜನೆಗೆ 957.09 ಕೋಟಿ ರೂಪಾಯಿ ಅನುಮೋದನೆ ನೀಡಿದ್ದಾರೆ.

ಸುಸಜ್ಜಿತ ಹೆದ್ದಾರಿ ಅಗಲೀಕರಣಕ್ಕೆ ಪ್ಲಾನ್
ಕೊಪ್ಪಳ ಮತ್ತು ಗದಗದಲ್ಲಿ ರಾಷ್ಟ್ರೀಯ ಹೆದ್ದಾರಿ-367ರ ಗಡ್ಡನಕೇರಿ ಸೆಕ್ಷನ್ನಲ್ಲಿ ಕುಕುನೂರ, ಯಲಬುರ್ಗ, ಗಜೇಂದ್ರಗಡದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಯೋಜನೆಗೆ 333.96 ಕೋಟಿ ರೂಪಾಯಿ ಅನುಮೋದನೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಎನ್‌ಎಚ್-367ರ ಭಾನಾಪುರದಿಂದ ಗದ್ದನಕೇರಿ ವಿಭಾಗದ ಸರ್ಜಾಪುರದಿಂದ ಪಟ್ಟದಕಲವರೆಗೆ ಸುಸಜ್ಜಿತ ದ್ವಿಪಥ ಹೆದ್ದಾರಿ ಅಗಲೀಕರಣಕ್ಕಾಗಿ 445.62 ಕೋಟಿ ರೂಪಾಯಿ ಘೋಷಿಸಿದ್ದಾರೆ.

909.86 ಕೋಟಿ ರೂಪಾಯಿ ಘೋಷಿಸಿದ ಗಡ್ಕರಿ
ಮೈಸೂರು ಜಿಲ್ಲೆಯ ಕುಶಾಲನಗರ ಬೈಪಾಸ್‌ನ ಪ್ರಾರಂಭದಲ್ಲಿ ಗುಡ್ಡೆಹೊಸೂರು ಬಳಿಯ ರಾಷ್ಟ್ರೀಯ ಹೆದ್ದಾರಿ-275ರ ಕುಶಾಲನಗರ ಭಾಗದವರೆಗೆ, ಹಾಗೆಯೇ ಮೈಸೂರಿನಿಂದ ಸುಸಜ್ಜಿತ ಹೆದ್ದಾರಿ ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಇಲ್ಲಿ ಪ್ರವೇಶ ನಿಯಂತ್ರಿತ ಚತುಷ್ಪಥ ಲೇನ್‌ಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದು, ಇದಕ್ಕಾಗಿ 909.86 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

4 ಲೇನ್‌ಗಳನ್ನ ನಿರ್ಮಿಸುವುದಾಗಿ ಘೋಷಣೆ
ಹೆಚ್ಚುವರಿಯಾಗಿ 739.39 ಕೋಟಿ ರೂಪಾಯಿ ಬಜೆಟ್‌ನಲ್ಲಿ ಯಲವಾಲ-ಕೆಆರ್ ನಗರ ರಸ್ತೆ ಜಂಕ್ಷನ್ ಬಳಿಯ ಯಲಚೇನಹಳ್ಳಿ- ಶ್ರೀರಂಗ ಪಟ್ಟಣ ಬೈಪಾಸ್‌ನಿಂದ ಸುಸಜ್ಜಿತ ನಾಲ್ಕು ಲೇನ್‌ಗಳನ್ನು ನಿರ್ಮಿಸಲಾಗುವುದು. ಎನ್‌ಎಚ್-275ರ ಮೈಸೂರಿನಿಂದ ಕುಶಾಲನಗರದವರೆಗೆ ಸುಸಜ್ಜಿತ ಪ್ರವೇಶ ನಿಯಂತ್ರಿತ ನಾಲ್ಕು ಲೇನ್‌ಗಳನ್ನು ನಿರ್ಮಿಸುವುದಾಗಿ ಘೋಷಿಸಿದರು.

ಮನವಿ ಮಾಡಿದ್ದ ಪ್ರತಾಪ್ ಸಿಂಹ
ಈ ಹಿಂದೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಮೈಸೂರು-ಕುಶಾಲನಗರ ಹೆದ್ದಾರಿಗೆ ₹4,000 ಕೋಟಿ ವೆಚ್ಚದ ಅನುದಾನ ನೀಡುವಂತೆ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಹಲವು ಬಾರಿ ಮನವಿ ಮಾಡಿದ್ದರು. ಇದೀಗ ಕೇಂದ್ರ ಸಚಿವರು ಪ್ರತಾಪ್ ಸಿಂಹ ಅವರ ಮನವಿಗೆ ಸ್ಪಂದಿಸುವ ಮೂಲಕ ಹಲವು ಹೆದ್ದಾರಿಗಳಿಗೆ ಅನುದಾನವನ್ನು ಘೋಷಿಸಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Highways: ದೇಶದ 40,000 ಕಿಮೀ ಹೆದ್ದಾರಿಗೆ AI ಟಚ್, ನಿರ್ವಹಣೆ ಮತ್ತಷ್ಟು ಸುಲಭ, ಇಲ್ಲಿದೆ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications