ನಿತಿನ್ ಗಡ್ಕರಿ ಜೀವ ಬೆದರಿಕೆ: ತನಿಖೆಯ ಭರವಸೆ ನೀಡಿದ ಬೊಮ್ಮಾಯಿ
ಹುಬ್ಬಳ್ಳಿ, ಜನವರಿ 16: ಬೆಳಗಾವಿಯ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬಂದ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸರ್ಕಾರವು ಕೂಲಂಕುಷವಾಗಿ ತನಿಖೆ ನಡೆಸಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.
ಕರೆ ಮಾಡಿದವನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ಗಡ್ಕರಿ ಅವರ ನಾಗ್ಪುರ ಕಚೇರಿಗೆ ಬೆದರಿಕೆ ಕರೆಗಳನ್ನು ಮಾಡಿ ₹ 100 ಕೋಟಿಗೆ ಬೇಡಿಕೆ ಇಟ್ಟಿದ್ದರು.
ಕರೆ ಮಾಡಿದ ಆರೋಪಿ ಜಯೇಶ್ ಪೂಜಾರಿ ಎಂಬಾತ ಹಿಂಡಲಗಾ ಜೈಲಿನ ಕೈದಿಯಾಗಿದ್ದು, ಈ ಹಿಂದೆ ಕೊಲೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಜಯೇಶ್ ಪೂಜಾರಿ ತಾನು ದಾವೂದ್ ಇಬ್ರಾಹಿಂ ಗ್ಯಾಂಗ್ ಸದಸ್ಯ ಎಂದು ಹೇಳಿಕೊಂಡಿದ್ದಾನೆ.

ಹಿಂಡಲಗಾ ಜೈಲಿನಿಂದ ಕರೆ ಮಾಡಲಾಗಿದೆ. ನಾವು ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ. ನಾವು ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಕರೆ ಮಾಡಿದ ವ್ಯಕ್ತಿಯ ಹಿನ್ನೆಲೆ ಪರಿಶೀಲನೆ ನಡೆಸುವುದಾಗಿಯೂ ಮುಖ್ಯಮಂತ್ರಿ ಹೇಳಿದ್ದಾರೆ. ಕೊಲೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಜಯೇಶ್ ಪೂಜಾರಿ 2016ರಲ್ಲಿ ಜೈಲಿನಿಂದ ಪರಾರಿಯಾಗಿದ್ದರು. ಆದರೆ ನಂತರ ಕರ್ನಾಟಕ ಪೊಲೀಸರು ಬಂಧಿಸಿದ್ದರು.

ಹೆದ್ದಾರಿ ನಿತಿನ್ ಗಡ್ಕರಿ ಅವರ ನಾಗಪುರದ ಕಚೇರಿಗೆ ಕರೆ ಮಾಡಿದ್ದ ಆರೋಪಿ ಜಯೇಶ್ ಪೂಜಾರಿ ತಾನು ಅಂಡರ್ ವರ್ಲ್ಡ್ ಡಾನ್ ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡು ಜೀವ ಬೆದರಿಕೆ ಹಾಕಿದ್ದನು. ಬಾಂಬ್ ಬ್ಲಾಸ್ಟ್ ಮೂಲಕ ಜೀವ ತೆಗೆಯುವ ಬಗ್ಗೆಯು ಬೆದರಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೇ 100 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾರೆ ಎಂಬ ಸತ್ಯ ವಿಚಾರಣೆಯಿಂದ ಬಯಲಾಗಿದೆ ಎಂದು ನಾಗಪುರದ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದರು.












Click it and Unblock the Notifications