Karnataka National Highways: ರಾಜ್ಯದಲ್ಲಿನ 93 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು: ಗಡ್ಕರಿ ಮಹತ್ವದ ಮಾಹಿತಿ
Karnataka National Highways: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಹಾಗೂ ನಿರ್ಮಾಣದಲ್ಲಿ ಬಹುದೊಡ್ಡ ಕ್ರಾಂತಿ ಆಗುತ್ತಿದೆ. ಇದೀಗ ಅನುಷ್ಠಾನದ ಹಂತದಲ್ಲಿರುವ ಕರ್ನಾಟಕ ರಾಜ್ಯದಲ್ಲಿನ 93 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಮಹತ್ವದ ಮಾಹಿತಿಯೊಂದನ್ನು ಕೇಂದ್ರ ನಿತಿನ್ ಗಡ್ಕರಿ ಅವರು ಬಿಚ್ಚಿಟ್ಟಿದ್ದಾರೆ. ಅಲ್ಲದೆ, ಇದೇ ವೇಳೆ ಅವರು ಯೋಜನೆಗಳನ್ನು ಎಲ್ಲೆಲ್ಲಿ ಕೈಗೊಳ್ಳಲಾಗಿದೆ? ಉದ್ದ ಹಾಗೂ ಎಷ್ಟು ಎನ್ನುವ ಸಂಪೂರ್ಣ ವಿವರವನ್ನು ಕೂಡ ನೀಡಿದ್ದಾರೆ.
ಇದೀಗ ರಾಜ್ಯದಲ್ಲಿ ಹಲವು ಹೆದ್ದಾರಿಗಳು ನಿರ್ಮಾಣ ಹಂತದಲ್ಲಿದ್ದರೆ, ಇನ್ನೂ ಕೆಲವು ಮುಕ್ತಾಯದ ಹಂತದಲ್ಲಿವೆ. ಈಗಾಗಲೇ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇ ಉದ್ಘಾಟನೆಗೊಂಡು ವಾಹನಗಳು ಕೂಡ ಸಂಚಾರ ಮಾಡುತ್ತಿವೆ. ಅಲ್ಲದೆ, ಟೋಲ್ ವಿಚಾರವಾಗಿ ಈ ಹೆದ್ದಾರಿ ಆಗಾಗ ಸುದ್ದಿಯಲ್ಲಿರುತ್ತದೆ. ಮತ್ತೊಂದೆಡೆ ಬಹುನಿರೀಕ್ಷಿತ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಉದ್ಘಾಟನೆ ಹಂತದಲ್ಲಿದೆ.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ ಕರ್ನಾಟಕ ಭಾಗದಲ್ಲಿ ಸಂಪೂರ್ಣ ಮುಕ್ತಾಯವಾಗಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಆದರೆ, ಉದ್ಘಾನೆಯೊಂದೇ ಬಾಕಿ ಉಳಿದಿರುವುದು. ಇದಕ್ಕೆ ಕಾರಣವೂ ಇದೆ. ಆಂಧ್ರಪ್ರದೇಶ ಹಾಗೂ ತಮಿಳುನಾಡು ಭಾಗದಲ್ಲಿ ಕಾಮಗಾರಿ ಪೂರ್ಣಗೊಳ್ಳದ ಕಾರಣ ಉದ್ಘಾಟನೆ ದಿನಾಂಕ ಮುಂದೂಡಿಕೆ ಆಗುತ್ತಲಿದ್ದು, ಇದು ಈ ವರ್ಷದ ಅಂತ್ಯದಲ್ಲಿ ಇಲ್ಲ, ಮುಂದಿನ ವರ್ಷ 2026ರಲ್ಲಿ ನೆರವೇರಲಿದೆ ಎನ್ನುವ ಮಾಹಿತಿ ಇದೆ. ಈ ನಡುವೆಯೇ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅಪ್ಡೇಟ್ ಮಾಹಿತಿಯೊಂದು ಲಭ್ಯವಾಗಿದೆ.
ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಸುಮಾರು 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ ಮೀಟರ್ ಉದ್ದದ ಒಟ್ಟು 93 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ ಎಂದು ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ನಾರಾಯಣಸಾ ಕೆ.ಭಾಂಡ್ಗೆ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಡ್ಡಾ ಅವರು, ಯೋಜನೆಯ ಅವಶ್ಯಕತೆಗಳ ಆಧಾರದ ಮೇಲೆ ಹಣವನ್ನು ಹಂಚಿಕೆ ಮಾಡಲಾಗುತ್ತದೆ ಹಾಗೂ ಕೆಲಸದ ಪ್ರಗತಿಗೆ ಅನುಗುಣವಾಗಿ ಬಿಡುಗಡೆ ಮಾಡಲಾಗುತ್ತದೆ. ಸಕಾಲಿಕ ಅನುಷ್ಠಾನವನ್ನ ಖಚಿತಪಡಿಸಿಕೊಳ್ಳಲು ತುಂಬಾ ಹಣ ಲಭ್ಯವಿದೆ ಎಂದು ಹೇಳಿದರು.
ರಾಷ್ಟ್ರೀಯ ಹೆದ್ದಾರಿ-52ರ ವಿಜಯಪುರ-ಹುಬ್ಬಳ್ಳಿ ವಿಭಾಗದ ಚತುಷ್ಪಥ ರಸ್ತೆಗಾಗಿ ಡಿಪಿಆರ್ ಸಿದ್ಧಪಡಿಸುವುದನ್ನು ಪ್ರಸಕ್ತ ವರ್ಷದ ವಾರ್ಷಿಕ ಯೋಜನೆ 2025-26 ರಲ್ಲಿ ಸೇರಿಸಲಾಗಿದೆ ಎಂದು ಉತ್ತರಿಸಿದರು. ಅಲ್ಲದೆ, NH 52, NH -367, NH -50 ಮತ್ತು NH-748ಎ ಈ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಮೇಲೆ ಹಾದುಹೋಗುತ್ತವೆ ಎಂದು ಹೇಳಿದರು.
ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಪರಿಶೀಲನೆ ಮಾಡಲು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಸಮಿತಿ ಅಸ್ತಿತ್ವದಲ್ಲಿ ಇದೆ. ಅಷ್ಟೇ ಅಲ್ಲದೆ, ರಸ್ತೆ ಮೂಲಸೌಕರ್ಯ ಯೋಜನೆಗಳ ಸಕಾಲಿಕ ಅನುಷ್ಠಾನಕ್ಕಾಗಿ ಪರಿಣಾಮಕಾರಿ ಸಮನ್ವಯವನ್ನ ಖಚಿತಪಡಿಸಿಕೊಳ್ಳಲು ವಿವಿಧ ಹಂತಗಳಲ್ಲಿ ಪರಿಶೀಲನಾ ಸಭೆಗಳನ್ನ ನಡೆಸಲಾಗುತ್ತದೆ ಎಂದು ಹೇಳಿದರು. ಒಟ್ಟಿನಲ್ಲಿ ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಹಾಗೂ ವಿಸ್ತರಣೆಯಲ್ಲಿ ಅಭಿವೃದ್ಧಿ ಕ್ರಾಂತಿ ಆಗುತ್ತಿದ್ದಿ, ಇದರಿಂದ ಪ್ರವಾಸೋದ್ಯಮ ಕ್ಷೇತ್ರ, ಆರ್ಥಿಕತೆ ಸೇರಿದಂತೆ ಹಲವು ವಲಯಗಳಲ್ಲಿ ಅಭಿವೃದ್ಧಿಯಾಗುತ್ತಿವೆ. ಅಲ್ಲದೆ ಆಸ್ತಿ ದರ ಗಗನಕ್ಕೇರುತ್ತಿದ್ದು, ಇದರಿಂದ ಹೆದ್ದಾರಿ ಅಕ್ಕಪಕ್ಕದ ಭೂಮಿ ಹೊಂದಿರುವವರು ಕೊಟ್ಯಾಧಿಪತಿಗಳಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಹೆದ್ದಾರಿ ಅಕ್ಕಪಕ್ಕದ ಭೂಮಿ ಬೆಲೆ ದುಪ್ಪಟ್ಟಾಗುತ್ತಿದ್ದು, ರೈತರಿಗೆ ಬಂಪರ್ ಲಾಟರಿ ಹೊಡೆದಂತಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications