Adjustment Politics: ಲೋಕಸಭಾ ಚುನಾವಣೆ ಹಿನ್ನಡೆಗೆ ಹೊಂದಾಣಿಕೆ ರಾಜಕಾರಣ ಆರೋಪ : ಡಿ.ಕೆ.ಶಿವಕುಮಾರ್ ಏನಂದ್ರು?
ಬೆಂಗಳೂರು, ಜುಲೈ 12: ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣದಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ ಎಂಬ ಆರೋಪ ಸುಳ್ಳು ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕೆಲವು ಕ್ಷೇತ್ರಗಳಲ್ಲಿ ನಡೆದ ಅಡ್ಜಸ್ಟ್‌ಮೆಂಟ್ ರಾಜಕೀಯ ಸೋಲಿಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ಮುಂದೆ ಹಿರಿಯ ನಾಯಕರು ದೂರಿದ್ದರು. ಆದರೆ ಇದನ್ನು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ನಿರಾಕರಿಸಿದ್ದಾರೆ. ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ. ಎಲ್ಲವೂ ಸುಳ್ಳು. ರಾಜ್ಯದಲ್ಲಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ. ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ. ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಒಂದಷ್ಟು ಜನ ಮಂತ್ರಿಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು. ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ. ಒಂದಷ್ಟು ಜನ ಸೋತಿದ್ದಾರೆ. ಮುಂದಕ್ಕೆ ಇವರುಗಳು ಪಕ್ಷಕ್ಕೆ ದೊಡ್ಡ ಆಸ್ತಿಯಾಗಲಿದ್ದಾರೆ, ಬೆಳೆಯುತ್ತಾರೆ ಎಂದು ಹೇಳಿದ್ದಾರೆ.
ಎಲ್ಲಾ ಕಾರ್ಯಕರ್ತರು, ಮುಖಂಡರು, ಗೆದ್ದವರು, ಸೋತವರು ಎಲ್ಲರು ಸೇರಿ ಎಐಸಿಸಿ ಸತ್ಯಶೋದನಾ ಸಮಿತಿಗೆ ಪರಿಸ್ಥಿತಿ ಅರಿಯಲು ಅಹವಾಲು ಸಲ್ಲಿಸಿದ್ದೆವು. ಅದರಂತೆ ಎಲ್ಲರು ಸಮಿತಿಯ ಮುಂದೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಮುಂದಕ್ಕೆ ಯಾವ ರೀತಿ ಕಾರ್ಯನಿರ್ವಹಿಸಬೇಕು ಎನ್ನುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
ಇನ್ನೂ ಮುಡಾ ಹಗರಣದ ವಿರುದ್ದ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ವಿಧಾನಸಭಾ ಕಲಾಪ ಬರುತ್ತಿರುವ ಕಾರಣ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಮಾಡಿರುವ ದರಿದ್ರವನ್ನು ಅವರೇ ಬಯಲು ಮಾಡುತ್ತಿದ್ದಾರೆ. ಇದಕ್ಕೆ ಸದನದಲ್ಲಿ ಏನು ಉತ್ತರ ಕೊಡಬೇಕೊ ಅದನ್ನು ಕೊಡುತ್ತೇವೆ ಎಂದು ಡಿ ಕೆ ಶಿವಕುಮಾರ್ ಅವರು ಖಾರವಾಗಿ ಉತ್ತರಿಸಿದರು.












Click it and Unblock the Notifications