ಉಪ ಚುನಾವಣೆಗೆ ಸ್ಪರ್ಧೆ, ಹೊಂದಾಣಿಕೆ ಇಲ್ಲ : ದೇವೇಗೌಡ

ಬೆಂಗಳೂರು, ಜು. 31 : ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಮತ್ತು ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಎಚ್.ಡಿ.ದೇವೇಗೌಡರು, ಶಿಕಾರಿಪುರ, ಬಳ್ಳಾರಿ ಗ್ರಾಮಾಂತರ ಮತ್ತು ಚಿಕ್ಕೋಡಿ-ಸದಲಗಾ ಕ್ಷೇತ್ರಗಳ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಘೋಷಿಸಿದರು.

HD Deve Gowda

ಕಳೆದ ಲೋಕಸಭೆ ಚುನಾವಣೆಯಲ್ಲಿಯೂ ಪಕ್ಷಕ್ಕೆ ಹಿನ್ನಡೆ ಉಂಟಾಗಿದೆ. ಎಚ್.ಡಿ.ಕುಮಾರಸ್ವಾಮಿ ಮತ್ತು ನಾನು ಸಂಘಟಿತ ಹೋರಾಟ ನಡೆಸಿದರೂ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ದೊರೆಯಲಿಲ್ಲ. ಸದ್ಯ ಪಕ್ಷವನ್ನು ಪಂಚಾಯಿತಿ ಮಟ್ಟದಿಂದ ಸಂಘಟಿಸಬೇಕಾಗಿದೆ. ಆದ್ದರಿಂದ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದರು. [ಉಪ ಚುನಾವಣೆಗೆ ಜೆಡಿಎಸ್ ಸ್ಪರ್ಧೆ ಇಲ್ಲ?]

ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಉಪ ಚುನಾವಣೆಗೆ ಸಾಕಷ್ಟು ಹಣ ಖರ್ಚು ಮಾಡುತ್ತದೆ. ಈ ಚುನಾವಣೆ ಫಲಿತಾಂಶದಿಂದ ಮಹತ್ವದ ರಾಜಕೀಯ ಬದಲಾವಣೆಗಳು ಆಗುವುದಿಲ್ಲ. ಆದ್ದರಿಂದ ಪಕ್ಷದ ಅಭ್ಯರ್ಥಿಗಳನ್ನು ಚುನಾವಣೆಗೆ ಕಣಕ್ಕೆ ಇಳಿಸಿದೆ, ಪಕ್ಷ ಸಂಘಟನೆ ಬಗ್ಗೆ ಪಕ್ಷ ಹೆಚ್ಚು ಗಮನಹರಿಸಲಿದೆ ಎಂದು ದೇವೇಗೌಡರು ಹೇಳಿದರು. [ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿಗಳು ಅಂತಿಮ]

ಹೊಂದಾಣಿಕೆ ಇಲ್ಲ : ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದರೆ ಅದು ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡುಕೊಳ್ಳುತ್ತದೆ ಎಂದು ಭಾವಿಸುವುದು ಬೇಡ. ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷದೊಂದಿಗೂ ಉಪ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+