ಪರಿಷತ್ ಚುನಾವಣೆಯಲ್ಲಿ ಮೈತ್ರಿ ಇಲ್ಲ ಅಂದ್ರು ಗೌಡರು
ಬೆಂಗಳೂರು, ಡಿಸೆಂಬರ್ 02 : 'ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷದ ಎಲ್ಲಾ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ' ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದ ಶಾಸಕರ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ದೇವೇಗೌಡರು, 'ವಿಧಾನಪರಿತ್ ಚುನಾವಣೆಗೆ ಎಲ್ಲಾ 25 ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ' ಎಂದರು. [ಎಚ್ಡಿಕೆ 'ಕಾಂಗ್ರೆಸ್ ಏಜೆಂಟ್' ಹೇಳಿಕೆ ವಿರೋಧಿಸಿದ ಬಾಲಕೃಷ್ಣ]

'ಪಕ್ಷದ ಎಲ್ಲಾ ನಾಯಕರು ಒಟ್ಟಾಗಿ ಚುನಾವಣೆಯನ್ನು ಎದುರಿಸುತ್ತೇವೆ. ಪಕ್ಷದ ಶಾಸಕರು, ಜಿಲ್ಲಾಧ್ಯಕ್ಷರು ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ. ಶಾಸಕರ ಅಭಿಪ್ರಾಯ ಪಡೆದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ' ಎಂದು ತಿಳಿಸಿದರು. [ಕುಮಾರಸ್ವಾಮಿಯನ್ನು ಚರ್ಚೆಗೆ ಆಹ್ವಾನಿಸಿದ ಜಮೀರ್!]
ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದೇವೆ : ಪಕ್ಷದಲ್ಲಿನ ಭಿನ್ನಮತದ ಬಗ್ಗೆ ಮಾತನಾಡಿದ ದೇವೇಗೌಡರು 'ಎಲ್ಲಾ ಶಾಸಕರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಗುರುವಾರ ನಡೆಯುವ ಕಾರ್ಯಕಾರಣಿಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುತ್ತದೆ' ಎಂದು ಹೇಳಿದರು. [ಪರಿಷತ್ ಚುನಾವಣೆ ಬಗ್ಗೆ ಓದಿ]
ಶಿಸ್ತು ಸಮತಿ ರಚನೆ : ಪಕ್ಷದಲ್ಲಿ ಶಿಸ್ತು ಸಮತಿಯನ್ನು ರಚನೆ ಮಾಡಲು ನಿರ್ಧರಿಸಲಾಗಿದೆ. ಕಾರ್ಯಕಾರಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.












Click it and Unblock the Notifications