ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಡಿಎಸ್ ಜತೆ ಮೈತ್ರಿ ಇಲ್ಲ: ಸ್ಪಷ್ಟಪಡಿಸಿದ ಅಮಿತ್ ಶಾ

By ದೀಪಿಕಾ
|
Google Oneindia Kannada News

ದಾವಣಗೆರೆ, ಮಾರ್ಚ್ 27: ಬಿಜೆಪಿ ಕರ್ನಾಟಕದಲ್ಲಿ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದು ಹೇಳಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, 'ಯಾವುದೇ ಕಾರಣಕ್ಕೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎಲ್ಲಾ ಸ್ಥಾನಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ' ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ರಾಹುಲ್ ಗಾಂಧಿ ಎಲ್ಲಾ ಧರ್ಮಗಳ ಏಕತೆ ಬಗ್ಗೆ ಮಾತನಾಡುತ್ತಾರೆ. ಆದರೆ ಕರ್ನಾಟಕದ ಮುಖ್ಯಮಂತ್ರಿ ಮಾಡಿದ್ದೇನು? ಅವರು ಹಿಂದೂಗಳನ್ನೇ ಒಡೆದಿದ್ದಾರೆ," ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭ್ರಷ್ಟಾಚಾರದ ಸ್ಪರ್ಧೆ ನಡೆದರೆ ಯಡಿಯೂರಪ್ಪ ನಂ. 1: ಅಮಿತ್ ಶಾ!ಭ್ರಷ್ಟಾಚಾರದ ಸ್ಪರ್ಧೆ ನಡೆದರೆ ಯಡಿಯೂರಪ್ಪ ನಂ. 1: ಅಮಿತ್ ಶಾ!

"ಪ್ರಧಾನಿ ನರೇಂದ್ರ ಮೋದಿ ರೈತರ ಶ್ರೇಯೋಭಿವೃದ್ಧಿಗೆ ಜಾರಿಗೆ ತಂದಿರುವಷ್ಟು ಯೋಜನೆಗಳನ್ನು ಯಾರೂ ಜಾರಿಗೆ ತಂದಿಲ್ಲ. ರೈತರ ಭವಿಷ್ಯದ ದೃಷ್ಟಿಯಿಂದ ಅವರು ಜಾರಿಗೆ ತಂದಿರುವ ಯೋಜನೆಗಳು ನಿರ್ಣಾಯಕವಾಗಿವೆ," ಎಂದು ಅವರು ಹೇಳಿದ್ದಾರೆ.

No alliance with JD(S), will fight independently on every seat, says Amit Shah

"ಗುಜರಾತ್, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢದಲ್ಲಿ ಕಳೆದ 15 ವರ್ಷಗಳಿಂದ ಬಿಜೆಪಿ ಸರಕಾರವಿದೆ. ಈ ರಾಜ್ಯಗಳಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಕಡಿಮೆ ಇದೆ. ದಾಖಲಾಗಿರುವ ರೈತರ ಆತ್ಮಹತ್ಯೆಗಳೂ ಖಿನ್ನತೆ ಮತ್ತು ವೈಯಕ್ತಿಕ ಕಾರಣಗಳಿಗೆ ಆದವು," ಎಂದವರು ಹೇಳಿದ್ದಾರೆ.

ಇನ್ನು ಜೆಡಿಎಸ್ ಜತೆಗಿನ ಸಾಂಭಾವ್ಯ ಮೈತ್ರಿ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.

English summary
BJP Chief Amit Shah on Tuesday expressed confidence that the BJP will win Karnataka assembly elections handsomely and said that the party will not go for an alliance with JD(S) but contest independently in all the seats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X