ಶ್ರೀಗಳಿಗೆ ಭಾರತ ರತ್ನವಿಲ್ಲ, ಎಚ್.ಡಿ.ಕುಮಾರಸ್ವಾಮಿ ಟ್ವೀಟ್

ಬೆಂಗಳೂರು, ಜನವರಿ 26 : ತುಮಕೂರಿನ ಸಿದ್ದಗಂಗಾ ಮಠದ ದಿ.ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ಸಿಗಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.

ಕೇಂದ್ರ ಸರ್ಕಾರ ಶುಕ್ರವಾರ 2019ನೇ ಸಾಲಿನ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಗಾಯಕ ಭೂಪೇನ್ ಹಜಾರಿಕಾ ಹಾಗೂ ನಾನಾಜಿ ದೇಶ್‌ ಮುಖ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ.

ಕರ್ನಾಟಕ ವಿವಿಧ ಪಕ್ಷಗಳ ರಾಜಕೀಯ ನಾಯಕರು, ಕೋಟ್ಯಾಂತರ ಜನರು ತುಮಕೂರಿನ ಸಿದ್ದಗಂಗಾಮಠದ ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದರು. ಕರ್ನಾಟಕ ಸರ್ಕಾರವೂ ಭಾರತ ರತ್ನ ನೀಡುವಂತೆ ಶಿಫಾರಸು ಮಾಡಿತ್ತು.

kumaraswamy

ಶಿವಕುಮಾರ ಶ್ರೀಗಳ ಆರೋಗ್ಯ ಹದಗೆಟ್ಟ ದಿನದಿಂದ ಅವರಿಗೆ ಭಾರತ ರತ್ನ ನೀಡಬೇಕು ಎಂಬ ಕೂಗು ಬಲವಾಗಿ ಕೇಳಿಬಂದಿತ್ತು. ಜನವರಿ 21ರಂದು ಶ್ರೀಗಳು ಲಿಂಗೈಕ್ಯರಾದ ಬಳಿಕ ಭಾರತ ರತ್ನ ಸಿಗಲಿಗೆ ಎಂಬ ಸುದ್ದಿಗಳು ಬಲವಾಗಿ ಹಬ್ಬಿದ್ದವು.

ಆದರೆ, ಕೇಂದ್ರ ಸರ್ಕಾರ ಶಿವಕುಮಾರ ಶ್ರೀಗಳಿಗೆ ಭಾರತ ರತ್ನವನ್ನು ನೀಡಿಲ್ಲ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಟ್ವೀಟ್ ಮಾಡಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+