ಶಿವಕುಮಾರ ಶ್ರೀಗಳಿಗೆ ಭಾರತ ರತ್ನವಿಲ್ಲ, ಕಾಂಗ್ರೆಸ್ ಅಸಮಾಧಾನ
Recommended Video

ಬೆಂಗಳೂರು, ಜನವರಿ 25 : 2019ನೇ ಸಾಲಿನ ಭಾರತ ರತ್ನ ಪಶಸ್ತಿ ಘೋಷಣೆಯಾಗಿದೆ. ತುಮಕೂರಿನ ಸಿದ್ದಗಂಗಾ ಮಠದ ದಿ.ಶಿವಕುಮಾರ ಶ್ರೀಗಳಿಗೆ ಪ್ರಶಸ್ತಿ ಸಿಗಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ.
ಶುಕ್ರವಾರ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ಕರ್ನಾಟಕ ವಿವಿಧ ರಾಜಕೀಯ ಮುಖಂಡರು, ಕೋಟ್ಯಾಂತರ ಜನರ ನಿರೀಕ್ಷೆ ಹುಸಿಯಾಗಿದ್ದು, ನಡೆದಾಡುವ ದೇವರು ಎಂದು ಖ್ಯಾತರಾಗಿದ್ದ ಶಿವಕುಮಾರ ಶ್ರೀಗಳಿಗೆ ಪ್ರಶಸ್ತಿ ಸಿಕ್ಕಿಲ್ಲ.
ಶ್ರೀಗಳ ಆರೋಗ್ಯ ಹದಗೆಟ್ಟ ದಿನದಿಂದ ಅವರಿಗೆ ಭಾರತ ರತ್ನ ನೀಡಬೇಕು ಎಂಬ ಕೂಗು ಬಲವಾಗಿ ಕೇಳಿಬಂದಿತ್ತು. ದಶಕಗಳ ಕಾಲ ಶ್ರೀಗಳು ನಡೆಸಿದ ನಿಸ್ವಾರ್ಥ ಸೇವೆಗೆ ಭಾರತ ರತ್ನ ನೀಡಬೇಕು ಎಂದು ಕೇಂದ್ರವನ್ನು ಒತ್ತಾಯಿಸಲಾಗಿತ್ತು.
ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡದಿರುವುದಕ್ಕೆ ಕರ್ನಾಟಕ ಕಾಂಗ್ರೆಸ್ ಅಸಮಧಾನ ವ್ಯಕ್ತಪಡಿಸಿದೆ. ಈ ಕುರಿತು ಕರ್ನಾಟಕ ಕಾಂಗ್ರೆಸ್ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಲಾಗಿದೆ. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದಕ್ಕೆ ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ.
|
ಶಿಫಾರಸನ್ನು ಪರಿಗಣಿಸಿಲ್ಲ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ. ರಾಜ್ಯ ಸರ್ಕಾರ ಪದೇ ಪದೇ ಮಾಡಿದ ಶಿಫಾರಸನ್ನು ಪರಿಗಣಿಸಿಲ್ಲ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.
|
ಶ್ರೀಗಳಿಗೆ ಭಾರತ ರತ್ನ
ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಸಿದ್ದರಾಮಯ್ಯ ಅವರು ಶಿಫಾರಸು ಮಾಡಿದ್ದರು. ಕಾಂಗ್ರೆಸ್-ಜೆಡಿಎಸ್ ಸರ್ಕಾರವೂ ಪ್ರಶಸ್ತಿಗೆ ಶಿಫಾರಸು ಮಾಡಿತ್ತು.
|
ಶ್ರೀಗಳ ಸೇವೆಯನ್ನು ಗುರುತಿಸಿಲ್ಲ
ಶ್ರೀಗಳಿಗೆ ಭಾರತ ರತ್ನನೀಡಬೇಕು ಎಂಬ ಕೂಗಿಗೆ ಬಿಜೆಪಿ ನಾಯಕರು ಧ್ವನಿ ಗೂಡಿಸಿದ್ದರು. ಆದರೆ, ಕೇಂದ್ರ ಸರ್ಕಾರ ಶ್ರೀಗಳ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿಲ್ಲ.
|
ಪ್ರಣಬ್ ಮುಖರ್ಜಿ ಅವರಿಗೆ ಭಾರತ ರತ್ನ
ಮಾಜಿ ರಾಷ್ಟ್ರಪತಿ ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ. ಕರ್ನಾಟಕ ಕಾಂಗ್ರೆಸ್ ಪ್ರಣಬ್ ಮುಖರ್ಜಿ ಅವರಿಗೆ ಅಭಿನಂದನೆ ಸಲ್ಲಿಸಿದೆ.
|
ಸಾಲುಮರದ ತಿಮ್ಮಕ್ಕನಿಗೆ ಅಭಿನಂದನೆ
ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಸಾಲು ಮರದ ತಿಮ್ಮಕ್ಕನಿಗೆ ಕರ್ನಾಟಕ ಕಾಂಗ್ರೆಸ್ ಅಭಿನಂದನೆ ಸಲ್ಲಿಸಿದೆ.












Click it and Unblock the Notifications