ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ ತಿಂಗಳು ಪಿಯು ವಿದ್ಯಾರ್ಥಿಗಳು ಬಸ್‌ಪಾಸ್‌ ಇಲ್ಲದೆ ಪ್ರಯಾಣಿಸಬೇಕು!

By Nayana
|
Google Oneindia Kannada News

ಬೆಂಗಳೂರು, ಮೇ.3: ಈ ಬಾರಿ ದ್ವಿತೀಯ ಪಿಯುಸಿ ತರಗತಿಗಳು ಒಂದು ತಿಂಗಳ ಮೊದಲೇ ಆರಂಭವಾಗಿದೆ. ಆದರೆ ಮಕ್ಕಳಿಗೆ ಉಚಿತ ಬಸ್‌ಪಾಸ್ ನೀಡಲು ಕೆಎಸ್‌ಆರ್ ಟಿಸಿ ನಿರಾಕರಿಸಿದೆ.

ಪ್ರತಿ ವರ್ಷದಂತೆ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿರುವ ಜೂನ್‌ನಿಂದ ಬಸ್‌ಪಾಸ್ ವಿತರಿಸುವುದಾಗಿ ತಿಳಿಸಿದೆ. ಮೇ.2ರ ಬುಧವಾರದಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿದೆ. ಪ್ರಸಕ್ತ ವರ್ಷದ ಆಯವ್ಯಯದಲ್ಲಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವುದಾಗಿ ಸರ್ಕಾರ ಘೋಷಿಸಿದೆ.

ದ್ವಿತೀಯ ಪಿಯು ಫಲಿತಾಂಶ ಪ್ರಕಟ, ದಕ್ಷಿಣ ಕನ್ನಡ ಪ್ರಥಮ ದ್ವಿತೀಯ ಪಿಯು ಫಲಿತಾಂಶ ಪ್ರಕಟ, ದಕ್ಷಿಣ ಕನ್ನಡ ಪ್ರಥಮ

ಆದ್ದರಿಂದ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಅನುಕೂಲ ಕಲ್ಪಿಸುವ ಸಲುವಾಗಿ ಮೇ ತಿಂಗಳಿಂದಲೇ ಉಚಿತ ಬಸ್ ಪಾಸ್ ವಿತರಣೆ ಮಾಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಕೆಎಸ್‌ಅರ್‌ಟಿಸಿಗೆ ಪತ್ರ ಬರೆದಿದ್ದರು.

No bus pass for pu students this month!

ಈ ಬಗ್ಗೆ ಪರಿಶೀಲನೆ ನಡೆಸಿದ ಸಾರಿಗೆ ನಿಗಮ ಬಜೆಟ್‌ನಲ್ಲಿ ಘೋಷಿಸಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವ ಸಂಬಂಧ ಇದುವರೆಗೆ ರಾಜ್ಯ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ. ಸರ್ಕಾರದ ಆದೇಶವಿಲ್ಲದೆ ಉಚಿತ ಬಸ್‌ಪಾಸ್ ನೀಡಲು ಸಾಧ್ಯವಿಲ್ಲ ಎಂದಿದೆ.

ಈ ಬಗ್ಗೆ ಸೂಕ್ತ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಈಗಾಘಲೇ ಪತ್ರ ಬರೆಯಲಾಗಿದೆ. ಸರ್ಕಾರ ಬಸ್‌ ಪಾಸುಗಳನ್ನು ಮುದ್ರಿಸಿ ವಿತರಿಸಲು ಸುಮಾರು ಒಂದು ತಿಂಗಳ ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಮೇಢ ತಿಂಗಳಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ವಿತರಣೆ ಕಷ್ಟಸಸಾಧ್ಯ ಎಂದು ಇಲಾಖೆಯ ನಿರ್ದೇಶಕರಿಗೆ ತಿಳಿಸಿದೆ.

English summary
Department pf pre university has many resumed classes for pu students from may 2 only. But KSRTC has denied nus pass for students those wanted to attend classes this month. The KSRTC has said that no budgetary allocation was made to provide bus passs for students in the month of may since it was only from June 1.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X