ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ, ಕೇರಳದಿಂದ ಬಸ್‌ ಸಂಚಾರ; ಸಾರಿಗೆ ಸಚಿವರ ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 26: ನೆರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅಂತರರಾಜ್ಯ ಬಸ್ ಸಂಚಾರದ (ಮಹಾರಾಷ್ಟ್ರ, ಕೇರಳ) ಕುರಿತು ರಾಜ್ಯ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕ ಪ್ರವೇಶಿಸುವ ಯಾವುದೇ ಬಸ್‌ಗಳನ್ನು ತಡೆಯುವಂತಿಲ್ಲ. ಆದರೆ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ತಮ್ಮೊಂದಿಗೆ ಕೊರೊನಾ ಪರೀಕ್ಷಾ ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಪ್ರಯಾಣಿಕರು ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದಿದ್ದಾರೆ.

ಕೇರಳ ಗಡಿ ಬಂದ್; ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ಕೇರಳ ಗಡಿ ಬಂದ್; ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಮಹಾರಾಷ್ಟ್ರ, ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾದ ಹಿನ್ನೆಲೆ ಈಚೆಗೆ ಕರ್ನಾಟಕ-ಕೇರಳ ಗಡಿ ಬಂದ್ ಮಾಡಿದ್ದ ಸಂಗತಿ ಆಕ್ಷೇಪಕ್ಕೆ ಕಾರಣವಾಗಿತ್ತು. ಗಡಿಗಳನ್ನು ಬಂದ್ ಮಾಡಿ, ವಾಹನಗಳಿಗೆ ನಿರ್ಬಂಧ ಹೇರಿರುವುದಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಕ್ಷೇಪ ವ್ಯಕ್ತಪಡಿಸಿದ್ದರು. ಕರ್ನಾಟಕ ಸರ್ಕಾರ ಕೇಂದ್ರ ಗೃಹ ಇಲಾಖೆ ಮಾರ್ಗಸೂಚಿ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿದ್ದರು.

 No Bus Will Be Stopped From Entering Karnataka Clarified Laxman Savadi

Recommended Video

ಬೆಲೆ ಏರಿಕೆ ಖಂಡಿಸಿ ಭಾರತ ಬಂದ್-ದೇಶದ 1,500 ಪಟ್ಟಣಗಳಲ್ಲಿ ನಡೆಯುತ್ತಿರುವ ಬಂದ್ | Oneindia Kannada

ಕಾಸರಗೋಡು ಮೂಲದ ವಕೀಲ ಬಿ. ಸುಬ್ಬಯ್ಯ ಈ ಕುರಿತು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ಪೀಠ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.

English summary
No bus will be stopped from entering Karnataka. The passengers will need COVID-19 negative certificates said Karnataka Transport Minister & Deputy Chief Minister Laxman Savadi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X