ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್. ಆರ್. ನಗರ, ಮಸ್ಕಿ ಕ್ಷೇತ್ರದ ಉಪ ಚುನಾವಣೆ ಸದ್ಯಕ್ಕಿಲ್ಲ

|
Google Oneindia Kannada News

ಬೆಂಗಳೂರು, ಜುಲೈ 23 : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರು ಇಲ್ಲದೆ ಒಂದು ವರುಷ ಕಳೆಯುತ್ತಾ ಬಂದಿದೆ. ಉಪ ಚುನನಾವಣೆ ನಡೆಸಲು ಹಲವು ಅಡೆ-ತಡೆಗಳಿವೆ. ಈಗ ಕೇಂದ್ರ ಚುನಾವಣಾ ಆಯೋಗದ ಸೂಚನೆ ಅನ್ವಯ ಸದ್ಯಕ್ಕೆ ಉಪ ಚುನಾವಣೆ ನಡೆಯುವುದಿಲ್ಲ.

Recommended Video

Sonu Sood : ವಲಸೆ ಕಾರ್ಮಿಕರಿಗಾಗಿ ಹೊಸ ಯೋಜನೆ ರೂಪಿಸಿದ ಬಾಲಿವುಡ್ ಸ್ಟಾರ್ | Oneindia Kannada

ಸೆಪ್ಟೆಂಬರ್ 7ರ ತನಕ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಉಪ ಚುನಾವಣೆಗಳನ್ನು ನಡೆಸುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಗುರುವಾರ ಹೇಳಿದೆ. ಇದರಿಂದಾಗಿ ಕರ್ನಾಟಕದ 2 ಕ್ಷೇತ್ರಗಳಿಗೂ ಸೆಪ್ಟೆಂಬರ್ ತನಕ ಉಪ ಚುನಾವಣೆ ಇಲ್ಲ.

ಆರ್. ಆರ್. ನಗರ ಉಪ ಚುನಾವಣೆ; ಜೆಡಿಎಸ್ ಮಹತ್ವದ ಘೋಷಣೆಆರ್. ಆರ್. ನಗರ ಉಪ ಚುನಾವಣೆ; ಜೆಡಿಎಸ್ ಮಹತ್ವದ ಘೋಷಣೆ

ಕೋವಿಡ್ -19 ಪರಿಸ್ಥಿತಿ, ವಿವಿಧ ರಾಜ್ಯಗಳಲ್ಲಿನ ಪ್ರವಾಹ ಪರಿಸ್ಥಿತಿ ಹಿನ್ನಲೆಯಲ್ಲಿ ಸದ್ಯಕ್ಕೆ ಯಾವುದೇ ಉಪ ಚುನಾವಣೆ ನಡೆಸುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಸೆಪ್ಟೆಂಬರ್ 7ರ ಬಳಿಕ ಪರಿಸ್ಥಿತಿ ಸುಧಾರಿಸಿದರೆ ಉಪ ಚುನಾವಣೆ ನಡೆಸಲಾಗುತ್ತದೆ ಎಂದು ಹೇಳಿದೆ.

ಆರ್.ಆರ್ ನಗರ, ಮಸ್ಕಿ ಕ್ಷೇತ್ರದಲ್ಲಿ ಉಪಚುನಾವಣೆ ಇಲ್ಲ: ಕಾರಣವೇನು?ಆರ್.ಆರ್ ನಗರ, ಮಸ್ಕಿ ಕ್ಷೇತ್ರದಲ್ಲಿ ಉಪಚುನಾವಣೆ ಇಲ್ಲ: ಕಾರಣವೇನು?

ಕರ್ನಾಟಕದ ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ಮಸ್ಕಿ ಕ್ಷೇತ್ರಗಳ ಉಪ ಚುನಾವಣೆ ನಡೆಯಬೇಕಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಬ್ಬರು ಶಾಸಕರನ್ನು ಅನರ್ಹಗೊಳಿಸಲಾಗಿತ್ತು. ಇದರಿಂದಾಗಿ ಈ ಎರಡೂ ಕ್ಷೇತ್ರಗಳಿಗೆ ಸದ್ಯ ಶಾಸಕರು ಇಲ್ಲ.

ಮುನಿರಾಜು ಗೌಡ ವಿರುದ್ಧ ಮುನಿರತ್ನ ಅಸಮಾಧಾನಮುನಿರಾಜು ಗೌಡ ವಿರುದ್ಧ ಮುನಿರತ್ನ ಅಸಮಾಧಾನ

ಉಪ ಚುನಾವಣೆ ಏಕೆ?

ಉಪ ಚುನಾವಣೆ ಏಕೆ?

2018ರ ವಿಧಾನಸಭೆ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಮುನಿರತ್ನ ಮತ್ತು ಮಸ್ಕಿ ಕ್ಷೇತ್ರದಿಂದ ಪ್ರತಾಪ್ ಗೌಡ ಪಾಟೀಲ್ ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ರಾಜ್ಯದಲ್ಲಿ ಇದ್ದಾಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಬ್ಬರನ್ನು ಸ್ಪೀಕರ್ ಅನರ್ಹಗೊಳಿಸಿದ್ದರು.

ಉಪ ಚುನಾವಣೆ ನಡೆಯಿತು

ಉಪ ಚುನಾವಣೆ ನಡೆಯಿತು

ಸ್ಪೀಕರ್ ಆದೇಶ ಪ್ರಶ್ನಿಸಿ ಅನರ್ಹಗೊಂಡ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋದರು. ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಎಲ್ಲರಿಗೂ ಅವಕಾಶ ನೀಡಲಾಯಿತು. 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಿತು. ಅನರ್ಹಗೊಂಡಿದ್ದ ಶಾಸಕರು ಬಿಜೆಪಿ ಟಿಕೆಟ್‌ನಿಂದ ಗೆದ್ದು ಬಂದು ಸಚಿವರಾಗಿದ್ದಾರೆ.

2 ಕ್ಷೇತ್ರದ ಚುನಾವಣೆ ನಡೆದಿಲ್ಲ

2 ಕ್ಷೇತ್ರದ ಚುನಾವಣೆ ನಡೆದಿಲ್ಲ

2018ರಲ್ಲಿ ನಡೆದ ರಾಜರಾಜೇಶ್ವರಿ ನಗರ ಮತ್ತು ಮಸ್ಕಿ ಕ್ಷೇತ್ರಗಳ ಚುನಾವಣೆ ಫಲಿತಾಂಶದ ಬಗ್ಗೆ ತರಕಾರು ಅರ್ಜಿಗಳು ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದೆ. ಈ ಅರ್ಜಿಗಳು ಇತ್ಯರ್ಥವಾಗುವ ತನಕ ಉಪ ಚುನಾವಣೆ ನಡೆಸುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ನ್ಯಾಯಾಲಯದಲ್ಲಿ ವಿಚಾರಣೆ

ನ್ಯಾಯಾಲಯದಲ್ಲಿ ವಿಚಾರಣೆ

ಮಸ್ಕಿ ಕ್ಷೇತ್ರದ ಚುನಾವಣೆ ವೇಳೆ ನಕಲಿ ಮತದಾನ ನಡೆದಿದೆ ಎಂದು ಆರೋಪಿಸಿ ಬಿಜೆಪಿಯಿಂದ ಕಣಕ್ಕಿಳಿದಿದ್ದ ಬಸನಗೌಡ ತುರ್ವಿಹಾಳ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕ್ಷೇತ್ರದಲ್ಲಿ ಎಂಇಪಿ ಪಕ್ಷದಿಂದ ಸ್ಪರ್ಧಿಸಿದ್ದ ಬಾಬು ನಾಯಕ ಎಂಬುವವರು ಇದೇ ವಿಷಯದಲ್ಲಿ ಹೈಕೋರ್ಟ್‌ಗೆ ಅರ್ಜಿ ಹಾಕಿದ್ದಾರೆ.

ಆರ್. ಆರ್. ನಗರದಲ್ಲಿ ಮುನಿರತ್ನ ವಿರುದ್ಧ ಸೋಲು ಕಂಡಿದ್ದ ಬಿಜೆಪಿಯ ಮುನಿರಾಜು ಗೌಡ ಎರಡು ಅರ್ಜಿಗಳನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. ಅರ್ಜಿಗಳು ಇನ್ನೂ ವಿಚಾರಣೆ ಹಂತದಲ್ಲಿವೆ.

English summary
Election Commission of India has deferred by-elections to Lok Sabha & state assemblies scheduled up to September 7 due to flood situation and Coronavirus pandemic. Karnataka's Maski and Rajarajeshwari Nagar by election will not announce till September.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X