'ಜನರ ಬಳಿ ಹೋಗಿ ತಕ್ಕ ಪಾಠ ಕಲಿಸುತ್ತಾರೆ'

Posted By:
Subscribe to Oneindia Kannada

ಬೆಂಗಳೂರು, ಜುಲೈ 20 : 'ಕಾಂಗ್ರೆಸ್‌ ಸರ್ಕಾರ ನೈತಿಕತೆ ಕಳೆದುಕೊಂಡಿದೆ. ಸತ್ಯ ತಿಳಿಸುತ್ತೇವೆ ಎಂದು ಜನರ ಬಳಿಗೆ ಪಕ್ಷದ ನಾಯಕರು ಹೋದರೆ ಜನರು ತಕ್ಕ ಪಾಠ ಕಲಿಸುತ್ತಾರೆ' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದರು.

ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಾ.ಜಿ.ಪರಮೇಶ್ವರ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಜಗದೀಶ್ ಶೆಟ್ಟರ್ ಅವರು, 'ಮಾಜಿ ಸಚಿವ ಕೆ.ಜೆ.ಜಾರ್ಜ್ ರಕ್ಷಣೆ ಮಾಡಲು ಸಿದ್ದರಾಮಯ್ಯ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ' ಎಂದು ದೂರಿದರು.[ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣದ Timeline]

jagadish shettar

'ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧದ ಹಳೆಯ ಪ್ರಕರಣಗಳನ್ನು ಸಿದ್ದರಾಮಯ್ಯ ಅವರು ಕೆದುಕುತ್ತಾ ಮೊಂಡುವಾದ ಮಾಡುತ್ತಿದ್ದಾರೆ. ನನ್ನ ವಿರುದ್ಧ ಯಾವುದೇ ಒಂದು ಮೊಕದ್ದಮೆಯೂ ಇಲ್ಲ' ಎಂದು ಸ್ಪಷ್ಟಪಡಿಸಿದರು.

Read Also : ಸಿದ್ದರಾಮಯ್ಯ, ಪರಮೇಶ್ವರ ಪತ್ರಿಕಾಗೋಷ್ಠಿ ಮುಖ್ಯಾಂಶಗಳು

ಆಗ ಏನು ಮಾಡುತ್ತಿದ್ದರು? : 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಮತ್ತು ಜೆಡಿಎಸ್ ಅಧಿಕಾರ ನಡೆಸಿದಾಗಲೂ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಆಗ ಪ್ರತಿಪಕ್ಷ ನಾಯಕರಾಗಿದ್ದ ಇವರು ಏನು ಮಾಡುತ್ತಿದ್ದರು?' ಎಂದು ಶೆಟ್ಟರ್ ಪ್ರಶ್ನಿಸಿದರು.

Read Also : 'ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ'

'ಕೆ.ಜೆ.ಜಾರ್ಜ್‌ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹೋರಾಟ ನಡೆಸುತ್ತಿದ್ದಾಗ ಮುಖ್ಯಮಂತ್ರಿ, ಗೃಹ ಸಚಿವರನ್ನು ಹೊರತು ಪಡಿಸಿ ಯಾವುದೇ ಸಚಿವರು, ಶಾಸಕರು ಜಾರ್ಜ್ ಅವರ ರಕ್ಷಣೆಗೆ ನಿಲ್ಲಲಿಲ್ಲ. ಈಗ ಸ್ವಯಂ ಪ್ರೇರಿತ ರಾಜೀನಾಮೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ' ಎಂದು ಲೇವಡಿ ಮಾಡಿದರು.

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣದಲ್ಲಿ ಕೆಜೆ ಜಾರ್ಜ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಮಡಿಕೇರಿ ನಗರ ಠಾಣೆ ಪೊಲೀಸರು ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ.[ಜಾರ್ಜ್ ವಿರುದ್ಧ FIR]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
No cases pending against Chief Minister Siddaramaiah a big lair said Former CM and BJP leader Jagadish Shettar.
Please Wait while comments are loading...