ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಧ್ಯಕ್ಷರು, ಸದಸ್ಯರಿಲ್ಲದ ಪೊಲೀಸ್ ದೂರು ಪ್ರಾಧಿಕಾರ:ಸರ್ಕಾರಕ್ಕೆ ನೋಟಿಸ್‌ ನೀಡಿದ ಹೈಕೋರ್ಟ್‌

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು ಜನವರಿ 7: ಕರ್ನಾಟಕ ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಹಲವು ತಿಂಗಳಿಂದ ಅಧ್ಯಕ್ಷರಿಲ್ಲ. ಮತ್ತು ಇಬ್ಬರು ಸದಸ್ಯರ ಸ್ಥಾನಗಳೂ ಸಹ ಖಾಲಿ ಇವೆ. ಹಾಗಾಗಿ ಪ್ರಾಧಿಕಾರ ಇದ್ದೂ ಇಲ್ಲದಂತಾಗಿದೆ.

ಅಧ್ಯಕ್ಷರು ಹಾಗೂ ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ದೇಶನ ನೀಡುವಂತೆ ಕೋರಿ, ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ವಕೀಲೆ ಸುಧಾ ಕಾಟ್ವಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಳೆ ಮತ್ತು ನ್ಯಾ.ಅಶೋಕ್ ಕಿಣಗಿ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ನಡೆಸಿತು.

ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಎರಡನೇ ಮದುವೆ ಕನಸಿಗೆ ತಣ್ಣೀರೆರೆಚಿದ ಹೈಕೋರ್ಟ್‌ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಎರಡನೇ ಮದುವೆ ಕನಸಿಗೆ ತಣ್ಣೀರೆರೆಚಿದ ಹೈಕೋರ್ಟ್‌

ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಬಳಿಕ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಗೆ ನ್ಯಾಯಪೀಠ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

No Chairman And Members For Police Complaint Authority

ಅರ್ಜಿದಾರರ ಪರ ವಕೀಲರು, ಸುಪ್ರಿಂಕೋರ್ಟ್ ಆದೇಶದ ಮೇರೆಗೆ ಪೊಲೀಸ್ ಇಲಾಖೆಯ ಎಲ್ಲಾ ಶ್ರೇಣಿಯ ಅಧಿಕಾರಿಗಳ ವಿರುದ್ಧ ದೂರು ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪೊಲೀಸ್ ಪ್ರಾಧಿಕಾರ ರಚಿಸಲಾಗಿದೆ. ಆದರೆ, ಸಕಾಲಕ್ಕೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕ ಮಾಡುತ್ತಿಲ್ಲ. ಪ್ರಾಧಿಕಾರಕ್ಕೆ ಅಗತ್ಯ ಸಿಬ್ಬಂದಿ ಮತ್ತು ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದರು.

ಸ್ವತಂತ್ರ ಮತ್ತು ಶಾಸನಾತ್ಮಕ ಹುದ್ದೆಯಾದ ಪ್ರಾಧಿಕಾರದ ಅಧ್ಯಕ್ಷ ಹುದ್ದೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯನ್ನು ನೇಮಿಸಬೇಕಿದೆ. ಅಧ್ಯಕ್ಷ ಹುದ್ದೆಯು 2022ರ ಆಗಸ್ಟ್‌ 11ರಿಂದ ಖಾಲಿ ಉಳಿದಿದೆ. ಒಂದು ಸದಸ್ಯ ಸ್ಥಾನ 2020ರ ಮೇ 8ರಿಂದ ಮತ್ತು ಮತ್ತೊಂದು ಸದಸ್ಯ ಸ್ಥಾನ 2022ರ ಡಿಸೆಂಬರ್‌ 28ರಿಂದ ಖಾಲಿಯಿದೆ.

ಸಕಾಲಕ್ಕೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಿಸದ ಕಾರಣ ಪ್ರಾಧಿಕಾರ ತನ್ನ ಶಾಸನಾತ್ಮಕ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಲಾಗುತ್ತಿಲ್ಲ. ಅಪಾರ ಪ್ರಮಾಣದಲ್ಲಿ ದೂರುಗಳು ಮತ್ತು ಕುಂದುಕೊರತೆಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ. ಆದ್ದರಿಂದ ಖಾಲಿಯಿರುವ ಪ್ರಾಧಿಕಾರದ ಅಧ್ಯಕ್ಷ ಹಾಗೂ ಇಬ್ಬರ ಸದಸ್ಯರನ್ನು ಕೂಡಲೇ ನೇಮಕ ಮಾಡಲು ಸರ್ಕಾರಕ್ಕೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

English summary
No chairman and members for Police complaint authority, High Court ordered notice to state
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X