ಡಿ.5ರ ಕರ್ನಾಟಕ ಬಂದ್ ಕರೆ ವಾಪಸ್ ಇಲ್ಲ; ವಾಟಾಳ್ ನಾಗರಾಜ್

ಬೆಂಗಳೂರು, ನವೆಂಬರ್ 25 : "ಕರ್ನಾಟಕ ಸರ್ಕಾರ ಡಿಸೆಂಬರ್ 5ರ ಕರ್ನಾಟಕ ಬಂದ್ ತಡೆಯಲು ಹರಸಾಹಸಪಡುತ್ತಿದೆ. ಯಾವುದೇ ಕಾರಣಕ್ಕೂ ಬಂದ್ ಕರೆಯನ್ನು ವಾಪಸ್ ಪಡೆಯುವುದಿಲ್ಲ" ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.

ಬುಧವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, "ಕನ್ನಡ ಒಕ್ಕೂಟ ಬಂದ್ ನಡೆಸಲು ಹರಸಾಹಸಪಡುತ್ತಿದೆ ಎಂದು ಪತ್ರಿಕೆಯೊಂದರಲ್ಲಿ ಓದಿದೆ. ಇದು ತಪ್ಪು ಬಂದ್ ಮಾಡದಂತೆ ತಡೆಯಲು ಸರ್ಕಾರ ಪ್ರಯತ್ನ ಮಾಡುತ್ತಿದೆ" ಎಂದು ಸ್ಪಷ್ಟನೆ ನೀಡಿದರು.

"ಮರಾಠ ಅಭಿವೃದ್ಧಿ ನಿಗಮ ರಚನೆಗೆ ಆದೇಶ ವಾಪಸ್ ಪಡೆಯಲು ಸರ್ಕಾರಕ್ಕೆ ನವೆಂಬರ್ 30ರ ತನಕ ಗುಡುವು ನೀಡಲಾಗಿದೆ. ಡಿಸೆಂಬರ್ 5ರಂದು ಕರೆ ನೀಡಿರುವ ಕರ್ನಾಟಕ ಬಂದ್ ವಾಪಸ್ ಪಡೆಯುವುದಿಲ್ಲ" ಎಂದು ವಾಟಾಳ್ ನಾಗರಾಜ್ ತಿಳಿಸಿದರು.

No Change In December 5 Karnataka Bandh Call Says Vatal Nagaraj

"ಡಿಸೆಂಬರ್ 5ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ಮಾಡುತ್ತೇವೆ. ನಮ್ಮ ವಿರುದ್ಧ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡುತ್ತಿದ್ದಾರೆ. ಅಲ್ಲಿಯೂ ಬಂದ್ ಮಾಡಲಾಗುತ್ತದೆ. ಅದನ್ನು ತಡೆಯಲಿ ನೋಡೋಣ" ಎಂದು ವಾಟಾಳ್ ನಾಗರಾಜ್ ಸವಾಲು ಹಾಕಿದರು.

"ಕರ್ನಾಟಕ ಬಂದ್ ದಿನ ಓಲಾ, ಊಬರ್ ಸೇವೆ ಇರುವುದಿಲ್ಲ. ಟ್ಯಾಕ್ಸಿ ಸೇವೆ ರದ್ದುಗೊಳ್ಳಲಿದೆ. ಆಟೋಗಳ ಸಂಚಾರ ಸಹ ಇರುವುದಿಲ್ಲ. ಬಂದ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಗಳು ಬೆಂಬಲ ನೀಡಲಿವೆ" ಎಂದು ವಾಟಾಳ್ ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮರಾಠ ಅಭಿವೃದ್ಧಿ ನಿಗಮ ರಚನೆ ಮಾಡಲು ಒಪ್ಪಿಗೆ ನೀಡಿರುವುದನ್ನು ಖಂಡಿಸಿ ಡಿಸೆಂಬರ್ 5ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟ ಬಂದ್ ಬಗ್ಗೆ ಈಗಾಗಲೇ ಸಭೆ ನಡೆಸಿದೆ. ವಿವಿಧ ಸಂಘಟನೆಗಳು ಬೆಂಬಲ ಘೋಷಣೆ ಮಾಡಿವೆ.

ಬಲವಂತದ ಬಂದ್ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಸಹ ಎಚ್ಚರಿಕೆ ಕೊಟ್ಟಿದ್ದಾರೆ. ಯಡಿಯೂರಪ್ಪ ಹೇಳಿಕೆಗೆ ಕನ್ನಡ ಪರ ಸಂಘಟನೆಗಳ ನಾಯಕರು ಸಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+