ಶಿಕ್ಷಕರಿಗೆ ಸಿಹಿ ಸುದ್ದಿ ಕೊಟ್ಟ ಸಚಿವ ಸುರೇಶ್ ಕುಮಾರ್
Recommended Video
ಬೆಂಗಳೂರು, ಸೆಪ್ಟೆಂಬರ್ 29 : ಕಡ್ಡಾಯ ವರ್ಗಾವಣೆ ಬಗ್ಗೆ ಆತಂಕಗೊಂಡಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ವರ್ಗಾವಣೆಗೆ ಹೆದರಿ ಹುಬ್ಬಳ್ಳಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟಿದ್ದರು.
ಶಿಕ್ಷಣ ಸಚಿವ ಸುರೇಶ್ ಕುಮಾರ್, "ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆ ಎಂಬ ಪ್ರಕ್ರಿಯೆಯನ್ನು ಮುಂದಿನ ವರ್ಷದಿಂದ ಸ್ಥಗಿತಗೊಳಿಸಲಾಗುತ್ತದೆ" ಎಂದು ಹೇಳಿದ್ದಾರೆ.
"ಮುಂದಿನ ಅವಧಿಗೆ ಶಿಕ್ಷಕ ಸ್ನೇಹಿಯಾದ, ಸರಳವಾದ ವರ್ಗಾವಣೆ ಪ್ರಕ್ರಿಯೆಯನ್ನು ರಚನೆ ಮಾಡಲಾಗುತ್ತದೆ. ಈಗಾಗಲೇ ಈ ಕುರಿತು ಕರಡು ಮಸೂದೆ ರಚನೆ ಮಾಡುವ ಕಾರ್ಯ ಆರಂಭವಾಗಿದೆ" ಎಂದು ಸಚಿವರು ತಿಳಿಸಿದ್ದಾರೆ.

ಕಡ್ಡಾಯ ವರ್ಗಾವಣೆಗೆ ಹೆದರಿ ಹುಬ್ಬಳ್ಳಿ ಆನಂದ ನಗರದ ಸರ್ಕಾರಿ ಶಾಲಾ ಶಿಕ್ಷಕ ಸುಭಾಷ್ ತರಲಘಟ್ಟ ಎಂಬುವವರು ಕೋಮಾ ಸ್ಥಿತಿಗೆ ಜಾರಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. ಆದ್ದರಿಂದ ಸಚಿವರು ಶಿಕ್ಷಕರು ಆತಂಕಗೊಳ್ಳುವುದು ಬೇಡ ಎಂದು ಹೇಳಿದ್ದಾರೆ.
ಸರ್ಕಾರದ ಬೇರೆ ಯಾವುದೇ ಇಲಾಖೆಯಲ್ಲಿಯೂ ಕಡ್ಡಾಯ ವರ್ಗಾವಣೆ ಇಲ್ಲ. ಶಿಕ್ಷಣ ಇಲಾಖೆಯಲ್ಲಿ 2017ರಿಂದ ಇದು ಜಾರಿಗೆ ಬಂದಿದೆ. ಇದೇ ಕಾರಣದಿಂದಾಗಿ ಗೊಂದಲ ಉಂಟಾಗಿ ಮೂರು ವರ್ಷದಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆದಿಲ್ಲ.
ಈ ವರ್ಷವೂ ಕೌನ್ಸಿಲಿಂಗ್ ವಿಚಾರದಲ್ಲಿ ಗೊಂದಲ ಉಂಟಾಗಿತ್ತು. ಆದ್ದರಿಂದ, ಕೌನ್ಸಿಲಿಂಗ್ ಅನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡಿ ಬಳಿಕ ಮಾಡಿ ಮುಗಿಸಲಾಗಿದೆ.












Click it and Unblock the Notifications