ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ; ಸಿದ್ದರಾಮಯ್ಯ ನಡೆ ಏನು?

ಬೆಂಗಳೂರು, ಡಿಸೆಂಬರ್ 6: ಸೋಮವಾರದಿಂದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಬಿಜೆಪಿ ಸದಸ್ಯರು ವಿಧಾನ ಪರಿಷತ್ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೆ ತಯಾರಿ ನಡೆಸಿದ್ದಾರೆ.

ಪ್ರಸ್ತುತ ವಿಧಾನ ಪರಿಷತ್ ಸಭಾಪತಿ ಆಗಿರುವುದು ಕಾಂಗ್ರೆಸ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ. ಬಿಜೆಪಿ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿ, ಆಡಳಿತ ಪಕ್ಷವಾಗಿರುವ ಬಿಜೆಪಿ ಸದಸ್ಯರನ್ನು ಆಯ್ಕೆ ಮಾಡಲು ಬಯಸಿದೆ.

ಆದರೆ, ಇದು ಅಂದುಕೊಂಡಷ್ಟು ಸುಲಭವಲ್ಲ. ವಿಧಾನ ಪರಿಷತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದರೂ ಅದನ್ನು ಗೆಲ್ಲುವಷ್ಟು ಸಂಖ್ಯಾಬಲ ಬಿಜೆಪಿ ಬಳಿ ಇಲ್ಲ. 8 ಮತಗಳ ಕೊರತೆ ಎದುರಾಗಲಿದ್ದು, ಜೆಡಿಎಸ್ ಬೆಂಬಲ ಪಡೆಯುವುದು ಅನಿವಾರ್ಯವಾಗಲಿದೆ.

No Confidence Motion Against Pratap Chandra Shetty Siddaramaiah Tweet

ಪರಿಷತ್ತಿನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ಕೊಟ್ಟರೆ ಸಭಾಪತಿ ಸ್ಥಾನ ಯಾರಿಗೆ ಒಲಿಯಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಕಾಂಗ್ರೆಸ್ ನಡೆ ಏನು? ಎಂಬ ಚರ್ಚೆಗಳು ಕಾವೇರುತ್ತಿದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ "ನಮ್ಮದು ಜಾತ್ಯಾತೀತ ಪಕ್ಷ ಎನ್ನುವ ಜೆಡಿಎಸ್ ಕೋಮುವಾದಿಗಳ ಪರವಾಗಿ ಮತ ಚಲಾಯಿಸುತ್ತದೋ, ವಿರುದ್ಧವಾಗಿ ಮತ ಚಲಾಯಿಸುತ್ತದೋ ಎಂಬುದನ್ನು ನೋಡಲು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರಿಗೆ ಈಗಲೇ ರಾಜೀನಾಮೆ ನೀಡದಂತೆ ಹೇಳಿದ್ದೇನೆ?" ಎಂದು ಟ್ವೀಟ್ ಮಾಡಿದ್ದಾರೆ.

ಸಂಖ್ಯಾಬಲ : ವಿಧಾನ ಪರಿಷತ್ತಿನ ಸದಸ್ಯ ಬಲ 75. ಸಭಾಪತಿಯಾಗಿ ಆಯ್ಕೆಯಾಗಲು 39 ಮತಗಳು ಬೇಕು. ಬಿಜೆಪಿ ಸದಸ್ಯ ಬಲ 31. ಕಾಂಗ್ರೆಸ್ 28, ಜೆಡಿಎಸ್ 14 ಮತ್ತು ಒಬ್ಬರು ಪಕ್ಷೇತರ ಸದಸ್ಯರು ಪರಿಷತ್ತಿನಲ್ಲಿದ್ದಾರೆ.

2022ರ ಜೂನ್ ತನಕ ವಿಧಾನ ಪರಿಷತ್ತಿನ ಯಾವುದೇ ಸ್ಥಾನಗಳಿಗೆ ಚುನಾವಣೆ ನಡೆಯುವುದಿಲ್ಲ. ಕೆಲ ಸ್ಥಾನಗಳಿಗೆ ನಾಮ ನಿರ್ದೇಶನ ಮಾತ್ರ ನಡೆಯಲಿದೆ. ಆಗ ಬಿಜೆಪಿ ಸಂಖ್ಯಾಬಲ ಪರಿಷತ್ತಿನಲ್ಲಿ ಹೆಚ್ಚಾಗಲಿದೆ.

ಈಗ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದರೆ ಜೆಡಿಎಸ್ ಬೆಂಬಲ ಪಡೆಯುವುದು ಅನಿವಾರ್ಯವಾಗಲಿದೆ. ಬೆಂಬಲ ಕೊಡುವ ಜೆಡಿಎಸ್ ಸಭಾಪತಿ ಸ್ಥಾನದ ಬೇಡಿಕೆ ಮುಂದಿಡಲಿದೆಯೇ? ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+