ಸಂಪುಟ ಪುನಾರಚನೆ ಮುಖ್ಯಮಂತ್ರಿಗೆ ಬಿಟ್ಟಿದ್ದು
ಬೆಂಗಳೂರು, ಸೆ.14 : ಮಂತ್ರಿ ಮಂಡಳ ಪುನಾರಚನೆ ಮತ್ತು ವಿಸ್ತರಣೆ ವಿಷಯ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಟ್ಟಿದ್ದು ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
ತೂಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಹೈಕಮಾಂಡ್‌ಗೆ ಮುಖ್ಯಮಂತ್ರಿ ಪತ್ರ ಬರೆಯುವ ಪದ್ಧತಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಅದರಂತೆ ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಬೆಳವಣಿಗೆಗಳ ಬಗ್ಗೆ ಸಿಎಂ ಕೇಂದ್ರ ನಾಯಕರಿಗೆ ತಿಳಿಸಿದ್ದಾರೆ.(ಡಿಸಿಎಂ ಹುದ್ದೆಗಾಗಿ ಹೈಕಮಾಂಡ್ ಬಳಿ ಹೋಗಿಲ್ಲ)

ಕಾಂಗ್ರೆಸ್‌ನಲ್ಲಿ ಮೊದಲಿನಿಂದಲೂ ಪತ್ರ ಬರೆಯುವ ಸಂಪ್ರದಾಯ ಬೆಳೆದುಕೊಂಡು ಬಂದಿದೆ ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು.
ಅಸಮರ್ಥರನ್ನು ಕೈಬಿಡುವುದು ಹೊಸಬರನ್ನು ಸೇರಿಸಿಕೊಳ್ಳುವುದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ಇದನ್ನು ಮೊದಲು ಹೇಳಿದ್ದೇನೆ ಈಗಲೂ ಪುನರುಚ್ಚರಿಸುತ್ತಿದ್ದೇನೆ ಎಂದು ಹೇಳಿದರು.
ಇನ್ನು ಸುಮಾರು ಒಂದು ವರ್ಷ ಕಾಲ ಅಥವಾ ಸರ್ಕಾರಕ್ಕೆ ಎರಡು ವರ್ಷ ತುಂಬುವವರೆಗೆ ಸಂಪುಟಕ್ಕೆ ಹೊಸಬರನ್ನು ಸೇರ್ಪಡೆ ಮಾಡಿಕೊಳ್ಳುವುದು ಬೇಡ. ಹಾಗೆ ಮಾಡಿದರೆ ಅಭಿವೃದ್ಧಿಗೆ ತೊಂದರೆಯಾಗಬಹುದು ಎಂದು ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದರು.












Click it and Unblock the Notifications