ಕೋವಿಡ್ ಕರ್ತವ್ಯದಿಂದ ಶಾಲೆಗಳ ಮುಖ್ಯ ಶಿಕ್ಷಕರಿಗೆ ವಿನಾಯಿತಿ
ಬೆಂಗಳೂರು, ಆಗಸ್ಟ್ 18 : ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರಿಗೆ ಕೋವಿಡ್ ಕರ್ತವ್ಯದಿಂದ ವಿನಾಯಿತಿ ನೀಡಲಾಗುತ್ತದೆ. ಮುಖ್ಯಶಿಕ್ಷಕರು ಶಾಲೆಗಳಲ್ಲಿ ಇರುವುದು ಅವಶ್ಯಕ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
Recommended Video
ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸಚಿವ ಸುರೇಶ್ ಕುಮಾರ್ ಈ ಕುರಿತು ಸೂಚನೆ ನೀಡಿದ್ದಾರೆ. ಮುಖ್ಯ ಶಿಕ್ಷಕರನ್ನು ಕೋವಿಡ್ ಕರ್ತವ್ಯಕ್ಕೆ ನಿಯೋಜನೆ ಮಾಡುವಂತಿಲ್ಲ, ಕರ್ತವ್ಯದಿಂದ ಮುಕ್ತಗೊಳಿಸಿ ಎಂದು ಸೂಚಿಸಿದ್ದಾರೆ.
ವಿದ್ಯಾರ್ಥಿಗಳ ಕಲಿಕೆಯನ್ನು ಮುಂದುವರಿಸುವ ದೂರದೃಷ್ಟಿ ಯೋಜನೆಯಾದ ವಿದ್ಯಾಗಮ ಮತ್ತು ಮಧ್ಯಾಹ್ನ ಉಪಹಾರ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಮುಖ್ಯ ಶಿಕ್ಷಕರು ಶಾಲೆಯಲ್ಲಿ ಇರಬೇಕು ಎಂದು ತಿಳಿಸಿದ್ದಾರೆ.

ಕೋವಿಡ್ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಶಾಲೆಗಳು ಮುಚ್ಚಿವೆ. ಶಾಲೆಗಳನ್ನು ಯಾವಾಗ ತೆರೆಯಲಾಗುತ್ತದೆ? ಎಂಬುದು ಇನ್ನೂ ಖಚಿತವಾಗಿಲ್ಲ. ಶಾಲೆಗಳ ಮುಖ್ಯ ಶಿಕ್ಷಕರನ್ನು ಕೋವಿಡ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತಿತ್ತು.
ಕಂದಾಯ ಇಲಾಖೆಗೆ ಪ್ರಧಾನ ಕಾರ್ಯದರ್ಶಿ ನೇಮಕ : ಎಂ. ಮಹೇಶ್ವರ ರಾವ್ ಅವರನ್ನು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಬಿಬಿಎಂಪಿ ಆಯುಕ್ತ ಹುದ್ದೆಯ ಜೊತೆಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಎನ್. ಮಂಜುನಾಥ್ ಪ್ರಸಾದ್ ಅವರು ಹೆಚ್ಚುವರಿಯಾಗಿ ವಹಿಸಿಕೊಂಡಿದ್ದರು.












Click it and Unblock the Notifications