Get Updates
Get notified of breaking news, exclusive insights, and must-see stories!

Dasara Holiday: ರಾಜ್ಯದಲ್ಲಿ ದಸರಾ ರಜೆ ನಿರೀಕ್ಷೆಯಲ್ಲಿದ್ದ ಶಾಲಾ ಶಿಕ್ಷಕರಿಗೆ ಬಿಗ್‌ ಶಾಕ್‌!

Dasara Holiday: ರಾಜ್ಯದಲ್ಲಿ ಇನ್ನೂ ಕೆಲವೇ ದಿನಗಳಲ್ಲಿ ಶಾಲೆಗಳಿಗೆ ದಸರಾ ರಜೆ ಆರಂಭ ಆಗಲಿದೆ. ಆದರೆ, ಶಿಕ್ಷಕರಿಗೆ ಬೇಸರದ ಸಂಗತಿ ಎದುರಾಗಿದ್ದು, ಈ ಬಾರಿ ಅವರಿಗೆ ದಸರಾ ರಜೆ ಸಿಗುವುದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ, ಇದಕ್ಕೆ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಮಧ್ಯವಾರ್ಷಿಕ ಪರೀಕ್ಷೆಗಳು ಮುಗಿಯುತ್ತಿದ್ದಂತೆ ಶಿಕ್ಷಕರು ದಸರಾ ರಜೆ ನಿರೀಕ್ಷೆಯಲ್ಲಿರುತ್ತಾರೆ. ಆದರೆ, ಈ ಬಾರಿ ರಜೆಯಿಲ್ಲದೆ, ಕೆಲಸ ಮಾಡಬೇಕಾದ ಅನಿವಾರ್ಯತೆ ಬಂದಿದೆ. ಕಾರಣ ಏನು ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

No Dasara Holidays for Karnataka Teachers as Government Assigns Survey Duties

ಹಿಂದುಳಿದ ವರ್ಗಗಳ ಆಯೋಗದ ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ವರೆಗೆ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರನ್ನ ಆಯೋಜಿಸಲು ಸರ್ಕಾರ ನಿರ್ಧರಿಸಿದೆ. ಆದ್ದರಿಂದ ಸರ್ಕಾರಿ ಶಾಲಾ ಶಿಕ್ಷಕರು ಈ ವರ್ಷ ದಸರಾ ರಜೆಯಲ್ಲಿಯೂ ಕಾರ್ಯ ನಿರ್ವಹಿಸಬೇಕಾದ ಅನಿವಾರ್ಯ ಎದುರಾಗಿದೆ. ಆದರೆ, ಅದಕ್ಕೆ ತಕ್ಕಂತೆ ಯಾವುದೇ ಗೌರವಧನ, ಗಳಿಕೆ ರಜೆ ಸಿಗುತ್ತಿಲ್ಲ. ಇದರಿಂದ ಬಹುತೇಕ ಶಿಕ್ಷಕರಿಗೆ ಬೇಸರ ತರಿಸಿದಂತಾಗಿದೆ.

ಶಾಲೆಗಳಿಗೆ ದಸರಾ ರಜೆ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರ ವರೆಗೆ ನಿಗದಿ ಆಗಿದೆ. ಆದರೆ, ಈ ವೇಳೆ ಶಿಕ್ಷಕರಿಗೆ ರಜೆ ನೀಡದೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ. ಈ ಸಮೀಕ್ಷೆಗೆ ರಾಜ್ಯಾದ್ಯಂತ 1.50 ಲಕ್ಷ ಶಿಕ್ಷಕರನ್ನು ಬಳಕೆ ಮಾಡಲಾಗುತ್ತಿದೆ. ಇದರಲ್ಲಿ ಭಾಗವಹಿಸುವ ಶಿಕ್ಷಕರಿಗೆ ಸೆಪ್ಟೆಂಬರ್ 13 ರಿಂದ ಸೆಪ್ಟೆಂಬರ್ 19 ರವರೆಗೆ ತರಬೇತಿ ನಡೆಯಲಿದೆ. ಶಾಲಾ ಅವಧಿ ಮುಗಿದ ನಂತರ ಅಂದರೆ ಸಂಜೆ 5 ಗಂಟೆ ಬಳಿಕ ತರಬೇತಿ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕೆಲವು ಇಲಾಖೆಗಳ ರಜಾ ದಿನಗಳಲ್ಲಿ ಕೆಲಸ ಮಾಡಿದ ಸಿಬ್ಬಂದಿಗೆ ಗಳಿಕೆ ರಜೆ ಸೌಲಭ್ಯ ದೊರೆಯುತ್ತದೆ. ಶಿಕ್ಷಣ ಇಲಾಖೆಯಲ್ಲೂ ಗಳಿಕೆ ರಜೆ ನೀಡಬೇಕೆಂಬ ನಿಯಮವಿದೆ. ಆದರೂ ಅದು ಶಿಕ್ಷಕರಿಗೆ ಸಿಗದಂತಾಗುದೆ. 2024 ರಲ್ಲಿ ಮತಗಟ್ಟೆ ಹಂತದ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದವರಿಗೆ ಈವರೆಗೆ ಗೌರವಧನ ಪಾವತಿ ಮಾಡಿಲ್ಲ. ಅಷ್ಟೇ ಅಲ್ಲದೆ, ಸಮೀಕ್ಷೆ, ಚುನಾವಣೆ ಕಾರ್ಯಗಳನ್ನು ಮಾಡಿದವರಿಗೆ ಸಂಬಂಧಪಟ್ಟ ಪ್ರಾಧಿಕಾರಗಳು ಹಾಜರಾತಿ ಪ್ರಮಾಣಪತ್ರ ನೀಡುತ್ತಿಲ್ಲ ಎನ್ನುವ ಆರೋಪಗಳು ಕೇಳಿಬಂದಿವೆ.

ರಾಜ್ಯದಲ್ಲಿ 46,757 ಸರಕಾರಿ ಶಾಲೆಗಳಿದ್ದು, 1.77 ಲಕ್ಷ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶಿಕ್ಷಕರು ಮಕ್ಕಳಿಗೆ ಬೋಧನೆ ಮಾಡುವುದರ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನೂ ಮಾಡಬೇಕಾಗಿದೆ. ಜಾತಿ ಸಮೀಕ್ಷೆ, ಜನಗಣತಿ ಹಾಗೂ ಚುನಾವಣಾ ಕಾರ್ಯಕ್ಕೂ ಶಿಕ್ಷಕರನ್ನೇ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆದ್ದರಿಂದ ಶಿಕ್ಷಕರಿಗೆ ಮಕ್ಕಳಿಗೆ ಪಾಠ ಮಾಡುವುದಕ್ಕಿಂತ ಬೇರೆ ಕಾರ್ಯಗಳೇ ಹೆಚ್ಚಾಗಿಬಿಟ್ಟಿವೆ.

ರಾಜ್ಯ ಸರಕಾರವೇ ಘೋಷಣೆ ಮಾಡಿರುವಂತೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದ 365 ದಿನಗಳಲ್ಲಿ 123 ರಜೆಗಳು ಇವೆ. ಇದರಲ್ಲಿ ಶಾಲಾ ಕರ್ತವ್ಯದ ದಿನಗಳು 242. ಈ ಅವಧಿಯಲ್ಲೇ ಕ್ಷೀರ ಭಾಗ್ಯ, ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ-ಬಾಳೆಹಣ್ಣು ವಿತರಣೆ, ಮಾಸಿಕ ಪರೀಕ್ಷೆ ಆಯೋಜನೆ, ರಾಗಿ ಮಾಲ್ಟ್‌ ವಿತರಣೆಯಂತಹ ಕಾರ್ಯಗಳನ್ನೂ ನಿರ್ವಹಿಸಬೇಕಿದೆ.

ಜೊತೆಗೆ ಶೈಕ್ಷಣಿಕ ವರ್ಷದ ಆರಂಭದಲ್ಲಿ ಶಾಲಾ ಸಮವಸ್ತ್ರ, ಶೂ-ಸಾಕ್ಸ್‌, ಪಠ್ಯಪುಸ್ತಕ ವಿಸ್ತರಣೆಯಂತಹ ಜವಾಬ್ದಾರಿಗಳನ್ನು ಕೂಡ ಶಿಕ್ಷಕರೇ ನಿಭಾಯಿಸಬೇಕಿದೆ. ಈ ಎಲ್ಲಾ ಕಾರ್ಯಗಳ ಜೊತೆಗೆ ಚುನಾವಣೆ, ಸಮೀಕ್ಷೆ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳಲ್ಲೂ ತೊಡಗಿಸಿಕೊಳ್ಳಬೇಕಿದೆ.

ಚುನಾವಣಾ ಕೆಲಸಕ್ಕೆ ಶಿಕ್ಷಕರನ್ನು ನಿಯೋಜನೆ ಮಾಡುತ್ತಿರುವುದರಿಂದ ಮಕ್ಕಳ ಕಲಿಕೆಗೆ ಸಮಸ್ಯೆಯಾಗುತ್ತಿದೆ. ಶಿಕ್ಷಕರ ಬದಲಿಗೆ ಇತರೆ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಹಾಗೂ ಶಿಕ್ಷಕೇತರ ಸಿಬ್ಬಂದಿಯನ್ನ ನಿಯೋಜನೆ ಮಾಡಲು ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಈಗಾಗಲೇ ಪತ್ರ ಬರೆದು ತಿಳಿಸಿದ್ದರು.

ಮುಖ್ಯ ಕಾರ್ಯದರ್ಶಿಯು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಎಚ್‌ಆರ್‌ಎಂಎಸ್‌ನಲ್ಲಿ ಲಭ್ಯ ಇರುವ ಮಾಹಿತಿಯಂತೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರ ಅಧಿಕಾರಿ, ನೌಕರರನ್ನು ನೇಮಿಕ ಮಾಡುವಂತೆ ಸೂಚಿಸಿದ್ದರು. ರಾಜ್ಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಶಾಲಾ ಶಿಕ್ಷಕರನ್ನು ಚುನಾವಣಾ ಸಂಬಂಧಿತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಗಳಿಗೆ, ಬೂತ್‌ ಮಟ್ಟದ ಅಧಿಕಾರಿಗಳಾಗಿ ನಿಯೋಜಿಸಲಾಗುತ್ತಿದೆ.

ಇದರಿಂದ ಶಾಲೆಗಳಲ್ಲಿ ಸರಿಯಾದ ಸಮಯಕ್ಕೆ ಬೋಧನಾ ಕಾರ್ಯವನ್ನು ಪೂರ್ಣಗೊಳಿಸದೆ, ಮಕ್ಕಳ ಪ್ರಗತಿ ಕುಂಠಿತ ಆಗುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯು, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದ್ದರು.

ಶಿಕ್ಷಕರನ್ನು ಬೇರೆ ಕಾರ್ಯಗಳಿಗೆ ನೇಮಕ ಮಾಡುತ್ತಿರುವುದರಿಂದ ಬೋಧನೆಗೆ ತೊಂದರೆ ಆಗುತ್ತಿದೆ. ಸಮೀಕ್ಷಾ ಕಾರ್ಯದಲ್ಲಿ ಭಾಗಿ ಆದವರಿಗೆ ಈವರೆಗೆ ಗೌರವ ಧನ ನೀಡಿಲ್ಲ. ಗೌರವಧನ ಬಿಡುಗಡೆ ಸಂಬಂಧ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಕೆ ಮಾಡಲಾಗಿದೆ. ಜೊತೆಗೆ ರಜಾ ದಿನಗಳಲ್ಲಿ ಕೆಲಸ ಮಾಡಿದವರಿಗೆ ಗಳಿಕೆ ರಜೆಯನ್ನೂ ಕೊಡುತ್ತಿಲ್ಲ ಎಂದು ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಅವರು ಹೇಳಿದ್ದಾರೆ. ಒಟ್ಟಿನಲ್ಲಿ ಈ ಬಾರಿ ದಸರಾ ರಜೆ ಸೌಲಭ್ಯ ಇಲ್ಲದ ಕಾರಣ ಶಿಕ್ಷಕರಿಗೆ ಬೇಸರ ತರಿಸಿದಂತಾಗಿದೆ. ಕನಿಷ್ಠ ಪಕ್ಷ ಇದರ ಬದಲಾಗಿದೆ ಗಳಿಕೆ ರಜೆಯನ್ನೂ ಕೂಡ ನೀಡುತ್ತಿಲ್ಲ ಎನ್ನುವುದು ಬೇಸರದ ಸಂಗತಿಯಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+