ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

PSI ಮತ್ತು ಕಾನ್‌ಸ್ಟೇಬಲ್ ನೇಮಕಾತಿಯಲ್ಲಿ ಡೀಲ್ ನಡೆಯಲ್ಲ: ಅರಗ ಜ್ಞಾನೇಂದ್ರ ಸ್ಪಷ್ಟನೆ

|
Google Oneindia Kannada News

ಬೆಂಗಳೂರು.ಅ.09: ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಪೊಲೀಸ್ ಸಬ್‌ ಇನ್ಸ್ ಪೆಕ್ಟರ್ ಹಾಗೂ ಪೊಲೀಸ್ ಕಾನ್‌ ಸ್ಟೇಬಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿ ನಡೆಯಲಿದೆ. ರಾಜಕಾರಣಿಗಳ ಹೆಸರಿನಲ್ಲಿ ಡೀಲ್ ಮಾಡುವರ ಅಮಿಷಗಳಿಗೆ ಬಲಿಯಾಗಿ ಹಣ ಕಳೆದುಕೊಳ್ಳಬೇಡಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

ಪೊಲೀಸ್ ಸಬ್‌ ಇನ್ಸ್ಪೆಕ್ಟರ್ ಹುದ್ದೆ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಮೋಸ ಮಾಡಿದ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ ಬೆನ್ನಲ್ಲೇ ಗೃಹ ಸಚಿವರು ಪೊಲೀಸ್ ಹುದ್ದೆ ಕೊಡಿಸುವ ಹೆಸರಿನಲ್ಲಿ ವಂಚನೆ ಮಾಡುವರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಲಹೆ ಮಾಡಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ಪಿಎಸ್ಐ ಹಾಗೂ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅತ್ಯಂತ ಪಾರದರ್ಶಕ ಹಾಗೂ ನಿಯಮಾನುಸಾರ ನಡೆಯುತ್ತಿದ್ದು, ಅಭ್ಯರ್ಥಿಗಳಾಗಲೀ ಅಥವಾ ಪೋಷಕರಾಗಲೀ ಯಾವುದೇ ರೀತಿಯ ವದಂತಿಗೆ ಕಿವಿಗೊಡಬೇಡಿ. ನೇಮಕಾತಿಯಲ್ಲಿ ಕೆಲಸ ಕೊಡಿಸುತ್ತೇನೆ ಎಂದು ಕೆಲವರು ನಂಬಿಕೆ ಹುಟ್ಟಿಸಿ ಅಭ್ಯರ್ಥಿಗಳನ್ನು ವಂಚಿಸುತ್ತಿರುವ ಘಟನೆಗಳು ವರದಿಯಾಗಿವೆ. ಅಭ್ಯರ್ಥಿಗಳಾಗಲೀ, ಪೋಷಕರಾಗಲೀ ಯಾರೂ ಅಮಿಷಗಳಿಗೆ ಬಲಿಯಾಗಬಾರದು ಎಂದು ಅವರು ಮನವಿ ಮಾಡಿದ್ದಾರೆ.

No deal for PSI and Constable recruitment: Araga Jnanendra

ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ 947 ಸಬ್ ಇನ್ಸಪೆಕ್ಟರ್ ಹಾಗೂ 4000 ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ನೇಮಕಾತಿ ಪ್ರಕ್ರಿಯೆ ಭಾಗವಾಗಿ ದೈಹಿಕ ಸಾಮರ್ಥ್ಯತೆ ಹಾಗೂ ಲಿಖಿತ ಪರೀಕ್ಷೆ ಅತ್ಯಂತ ಪಾರದರ್ಶಕತೆಯಿಂದ ನಡೆಯುತ್ತಿವೆ. ಇದರಲ್ಲಿ ದಾಖಲಾಗುವ ಫಲಿತಾಂಶಗಳೇ ಅಭ್ಯರ್ಥಿಗಳ ಆಯ್ಕೆಯ ಮಾನದಂಡ ಆಗಿರುತ್ತದೆ. ಹುದ್ದೆ ಕೊಡಿಸುವುದಾಗಿ ಯಾರಾದರೂ ಅಮಿಷ ಒಡ್ಡಿದರೆ, ಅಭ್ಯರ್ಥಿಗಳು ಅಥವಾ ಪೋಷಕರು ವಿಷಯವನ್ನು ಪೊಲೀಸರಿಗೆ ತಿಳಿಸಬೇಕು. ಈ ಮೂಲಕ ವಂಚನೆಯಿಂದ ತಪ್ಪಿಸಿಕೊಳ್ಳಬೇಕು ಎಂದು ಅರಗ ಜ್ಞಾನೇಂದ್ರ ಸಲಹೆ ಮಾಡಿದ್ದಾರೆ.

ಪಿಎಸ್ಐ ಹುದ್ದೆ ಕೊಡಿಸುವುದಾಗಿ ನಂಬಿಸಿ ವಂಚನೆ: ಮಹಿಳಾ ಅಭ್ಯರ್ಥಿಗಳಿಗೆ ಸರ್ಕಾರಿ ಪೊಲೀಸ್ ಸಬ್ ಇನ್ಸಪೆಕ್ಟರ್ ಹುದ್ದೆ ಕೊಡಿಸುವುದಾಗಿ ನಂಬಿಸಿ 18 ಲಕ್ಷ ರೂ. ಪಡೆದು ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪುಟ್ಟರಾಜು ವಂಚನೆಗೆ ಒಳಗಾದ ವ್ಯಕ್ತಿ. ಪುಟ್ಟರಾಜು ಅವರ ಪುತ್ರಿ ಪಿಎಸ್ಐ ದೈಹಿಕ ಪರೀಕ್ಷೆಯಲ್ಲಿ ಪಾಸಾಗಿದ್ದರು. ಲಿಖಿತ ಪರೀಕ್ಷೆ ಬರೆಯಬೇಕಿತ್ತು. ದೇವನಹಳ್ಳಿ ಮೂಲದ ಶ್ರೀನಿವಾಸ್ ರಿಯಲ್ ಎಸ್ಟೇಟ್ ವಹಿವಾಟಿನಲ್ಲಿ ಗುರುತಿಸಿಕೊಂಡಿದ್ದು, ತನಗೆ ರಾಜಕಾರಣಿಗಳು ಮತ್ತು ಅಧಿಕಾರಿಗಳು ಪರಿಚಯವಿದ್ದಾರೆ. ನಿಮ್ಮ ಮಗಳಿಗೆ ಪಿಎಸ್ಐ ಹುದ್ದೆ ಕೊಡಿಸುತ್ತೇನೆ ಎಂದು ನಂಬಿಸಿ 70 ಲಕ್ಷ ರೂ. ಡೀಲ್ ಕುದುರಿಸಿದ್ದ. ಅದರಲ್ಲಿ ಅಂತಿಮವಾಗಿ 55 ಲಕ್ಷ ರೂ.ಗೆ ಡೀಲ್ ಕುದುರಿಸಿ ಮುಂಗಡವಾಗಿ 18 ಲಕ್ಷ ರೂ. ಪಡೆದುಕೊಂಡಿದ್ದಾನೆ.

No deal for PSI and Constable recruitment: Araga Jnanendra

ಪಿಎಸ್ಐ ಹುದ್ದೆಗಳ ನೇಮಕಾತಿ ಪಾರದರ್ಶಕವಾಗಿ ನಡೆಯುತ್ತಿದ್ದು, ಯಾರ ಮಧ್ಯ ಪ್ರವೇಶದಿಂದಲೂ ಹುದ್ದೆಗಳು ದೊರೆಯುವುದಿಲ್ಲ ಎಂಬುದನ್ನು ಆಪ್ತರೊಬ್ಬರು ಪುಟ್ಟರಾಜು ಅವರಿಗೆ ಹೇಳಿದ್ದಾರೆ. ಕೂಡಲೇ ಶ್ರೀನಿವಾಸ್ ಅವರನ್ನು ಭೇಟಿ ಮಾಡಿ ಹಣ ವಾಪಸು ನೀಡುವಂತೆ ಕೇಳಿದ್ದಾರೆ. ಹಣ ನಾನು ಕೊಟ್ಟು ಬಿಟ್ಟಿದ್ದೇನೆ. ವಾಪಸು ಎಲ್ಲಿಂದ ತಂದು ಕೊಡಲಿ ಎಂದು ಹೇಳಿದ್ದು, ಹಣ ವಾಪಸು ನೀಡಲು ನಿರಾಕರಿಸಿದ್ದಾರೆ. ಪುಟ್ಟರಾಜು ಸದಾಶಿವನಗರ ಪೊಲೀಸರಿಗೆ ದೂರು ನೀಡಿದ್ದು ಶ್ರೀನಿವಾಸ್ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.

ಹುದ್ದೆ ಹೆಸರಿನಲ್ಲಿ ಡೀಲ್:
ಅನೇಕ ಪಿಎಸ್ಐ ಆಕಾಂಕ್ಷಿಗಳಿಗೆ ಸರ್ಕಾರಿ ಹುದ್ದೆ ಕೊಡಿಸುವ ಅಮಿಷ ಒಡ್ಡಿ ಹಣ ಸಂಗ್ರಹಿಸುತ್ತಿರುವ ಆರೋಪ ಕೇಳಿ ಬರುತ್ತಿವೆ. ಕಳೆದ ಬಾರಿ ಪಿಎಸ್ಐ ನೇಮಕಾತಿ ಸಂಬಂಧ ನಡೆದಿದ್ದ ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಆಗಂತುಕರು ಲೀಕ್ ಮಾಡಿದ್ದರು. ಈ ಮೂಲಕ ರಾಜ್ಯದಲ್ಲಿ ಬಹುದೊಡ್ಡ ಅಕ್ರಮವನ್ನು ಸಿಸಿಬಿ ಪೊಲೀಸರು ಬಯಲಿಗೆ ಎಳೆದಿದ್ದರು. ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳೇ ಬಂಧನಕ್ಕೆ ಒಳಗಾಗಿದ್ದನ್ನು ನೆನಪಿಸಬಹುದು.

English summary
No deal for PSI and Constable recruitment: Araga Jnanendra,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X