ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಬಸವರಾಜ ಬೊಮ್ಮಾಯಿ-ಪಿಎಂ ನರೇಂದ್ರ ಮೋದಿ ಭೇಟಿಯಲ್ಲಿ ನಿಜಕ್ಕೂ ಆಗಿದ್ದೇನು?

|
Google Oneindia Kannada News

ಬೆಂಗಳೂರು, ನ. 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೈಕಮಾಂಡ್ ಭೇಟಿ ಮುಗಿಸಿ ಹಿಂದುರುಗಿದ್ದಾರೆ. ಉಪ ಚುನಾವಣೆ ಫಲಿತಾಂಶ, ಇದೇ ತಿಂಗಳು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಜೊತೆಗೆ ಬಿಟ್ ಕಾಯಿನ್ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೈಕಮಾಂಡ್ ಭೇಟಿ ತೀವ್ರ ಗಮನ ಸೆಳೆದಿತ್ತು. ನಿನ್ನೆ (ನ. 10) ಸಿಎಂ ಬೊಮ್ಮಾಯಿ ಹೈಕಮಾಂಡ್ ಭೇಟಿಗೆ ಬೆಂಗಳೂರಿನಿಂದ ದಿಢೀರ್ ದೆಹಲಿಗೆ ತೆರಳಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದಿಢೀರ್ ಹೈಕಮಾಂಡ್ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿತ್ತು. ಜೊತೆಗೆ ರಾಜ್ಯ ಬಿಜೆಪಿ ಪಾಳೆಯದಲ್ಲಿ ಆತಂಕವನ್ನೂ ಸೃಷ್ಟಿಸಿತ್ತು. ಹೀಗಾಗಿ ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಡೆಯನ್ನು ರಾಜ್ಯದ ನಾಯಕರು ಹಾಗೂ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದರು.

 ಬಿಟ್ ಕಾಯಿನ್: ದಿನದಿಂದ ದಿನಕ್ಕೆ ಬಗೆದಷ್ಟು ಬಿಜೆಪಿ ಬುಡಕ್ಕೆ ಕೊಡಲಿ ಏಟು? ಬಿಟ್ ಕಾಯಿನ್: ದಿನದಿಂದ ದಿನಕ್ಕೆ ಬಗೆದಷ್ಟು ಬಿಜೆಪಿ ಬುಡಕ್ಕೆ ಕೊಡಲಿ ಏಟು?

ಹೀಗಾಗಿ ಇಡೀ ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಂಗಿಕ ಭಾಷೆ ಹೇಗಿತ್ತು? ಪ್ರಧಾನಿ ನರೇಂದ್ರ ಮೋದಿ ಅವರು ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಸಿಎಂ ಬೊಮ್ಮಾಯಿ ಅವರನ್ನು ಕೇಳಿದ್ದಾರಾ? ಕಾಂಗ್ರೆಸ್ ನಾಯಕರು ಮಾಡಿದ್ದ ಆರೋಪ ನಿಜವಾಗುತ್ತದೆಯಾ? ಮುಂದಿದೆ ಸಂಪೂರ್ಣ ಮಾಹಿತಿ!

ದೆಹಲಿಯಿಂದ ಹಿಂದಿರುಗಿದ ಸಿಎಂ ಬೊಮ್ಮಾಯಿ!

ದೆಹಲಿಯಿಂದ ಹಿಂದಿರುಗಿದ ಸಿಎಂ ಬೊಮ್ಮಾಯಿ!

ಬಿಟ್ ಕಾಯಿನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂಬ ಆರೋಪವನ್ನು ಕಾಂಗ್ರೆಸ್ ನಾಯಕರು ಮಾಡಿದ್ದರು. ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಂತೂ ಒಂದು ಹೆಜ್ಜೆ ಮುಂದೆ ಹೋಗಿ ಬಿಜೆಪಿಯಲ್ಲಿ ಈ ಬಾರಿಯೂ ಮೂವರು ಮುಖ್ಯಮಂತ್ರಿಗಳಾಗಲಿದ್ದಾರೆ ಎಂಬ ಸ್ಪೋಟಕ ಹೇಳಿಕೆಯನ್ನು ನೀಡಿದ್ದರು. ಹೀಗಾಗಿ ಸಿಎಂ ಬೊಮ್ಮಾಯಿ ಅವರ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಸಿಎಂ ಬೊಮ್ಮಾಯಿ ಇದೀಗ ಬೆಂಗಳೂರಿಗೆ ಬಂದಿದ್ದಾರೆ. ದೆಹಲಿಯಲ್ಲಿ ಆಗಿದ್ದೇನು? ಮುಂದಿದೆ.

ದೆಹಲಿಯಲ್ಲಿ ಇಡೀ ದಿನ ಹೇಗಿದ್ದರು ಸಿಎಂ ಬೊಮ್ಮಾಯಿ?

ದೆಹಲಿಯಲ್ಲಿ ಇಡೀ ದಿನ ಹೇಗಿದ್ದರು ಸಿಎಂ ಬೊಮ್ಮಾಯಿ?

ನಿನ್ನೆ (ನ. 10) ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಸಿಎಂ ಬೊಮ್ಮಾಯಿ ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಭೇಟಿ ಸಂದರ್ಭದಲ್ಲಿ ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಚರ್ಚೆ ನಡೆದಿದ್ದು, ಹೈಕಮಾಂಡ್ ವಿವರಣೆಯನ್ನು ಕೇಳಿದೆ ಎನ್ನಲಾಗಿತ್ತು. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ನ. 11) ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದಾಗ ಏನಾಗಬಹುದು ಎಂಬ ಲೆಕ್ಕಾಚಾರದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿದ್ದರು. ಜೊತೆಗೆ ರಾಜ್ಯ ಬಿಜೆಪಿಯಲ್ಲಿಯೂ ಕೂಡ ಈ ಬಗ್ಗೆ ಸಣ್ಣ ಆತಂಕವಿತ್ತು. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರೂ ಸ್ವಲ್ಪ ಟೆನ್ಶನ್‌ನಲ್ಲಿ ಇದ್ದಂತೆ ಕಂಡು ಬಂದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದಿನ ನಗು ಸ್ವಲ್ಪ ಮಾಯವಾಗಿತ್ತು, ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಸಿಎಂ ಬೊಮ್ಮಾಯಿ ಭೇಟಿ ಮಾಡಿದರು. ಭೇಟಿಯ ಬಳಿಕ ಸಿಎಂ ಬೊಮ್ಮಾಯಿ ಹೇಳಿದ್ದು ಮುಂದಿದೆ.

ಬಿಟ್ ಕಾಯಿನ್ ವಿಚಾರ ಬಿಡಿ ಎಂದ ಪ್ರಧಾನಿ!

ಬಿಟ್ ಕಾಯಿನ್ ವಿಚಾರ ಬಿಡಿ ಎಂದ ಪ್ರಧಾನಿ!

ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಕ್ಷಣಕ್ಷಣಕ್ಕೂ ತೀವ್ರ ಕುತೂಹಲ ಮೂಡಿಸಿತ್ತು. ಭೇಟಿ ಬಳಿಕ ಬಿಟ್ ಕಾಯಿನ್, ಪ್ರಧಾನಿ ಭೇಟಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ಸವಿಸ್ತಾರವಾಗಿ ಮಾಹಿತಿ ನೀಡಿದರು. ಜೊತೆಗೆ ಬಿಟ್ ಕಾಯಿನ್ ವಿಚಾರವಾಗಿ ಪ್ರಧಾನಿ ಜೊತೆ ಆಗಿದ್ದ ಚರ್ಚೆಯ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

"ಬಿಟ್ ಕಾಯಿನ್ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಮಾತನಾಡಲು ಇಷ್ಟ ಪಡಲಿಲ್ಲ. ಆದರೆ ನಾನೇ ಪ್ರಧಾನಿಗಳಿಗೆ ಈ ವಿಚಾರ ತಿಳಿಸಿದೆ. ಆಗ ಅವರು ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳದೆ ಜನಪರ ಕೆಲಸ ಮಾಡಿ. ನಿಷ್ಠೆ ದಿಟ್ಟತನದಿಂದ ಜನಪರ ಕೆಲಸ ಮಾಡಿ. ಆಗ ಎಲ್ಲವೂ ಸರಿಹೋಗುತ್ತದೆ. ಸೋಲು ಗೆಲುವು ಇದ್ದೇ ಇರುತ್ತದೆ. ಆ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ ಎಂದು ಪ್ರಧಾನಿ ಮೋದಿ ನನಗೆ ಹೇಳಿದ್ದಾರೆ" ಎಂದು ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಅಮಿತ್ ಶಾ ಅವರೊಂದಿಗೆ ಹೆಚ್ಚು ಚರ್ಚೆ ಆಗಿಲ್ಲ!

ಅಮಿತ್ ಶಾ ಅವರೊಂದಿಗೆ ಹೆಚ್ಚು ಚರ್ಚೆ ಆಗಿಲ್ಲ!

"ಪ್ರಧಾನಿ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಂದರ್ಭದಲ್ಲಿಯೂ ಬಿಟ್ ಕಾಯಿನ್ ಪ್ರಕರಣದ ವಿಚಾರವಾಗಿ ಯಾವುದೇ ಚರ್ಚೆ ಆಗಿಲ್ಲ. ಅವರೊಂದಿಗೆ ಜೊತೆ ಹೆಚ್ಚು ಹೊತ್ತು ಚರ್ಚೆ ಮಾಡಲು ಸಾಧ್ಯವಾಗಲಿಲ್ಲ. ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಅಮಿತ್ ಶಾ ಅವರಿಗೆ ಸಾಕಷ್ಟು ಮಾಹಿತಿ ಇರುತ್ತದೆ" ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಮುಖ್ಯಮಂತ್ರಿಗಳಾಗಿ 100 ದಿನ ಪೂರೈಸಿದ ಬಗ್ಗೆ ಪಕ್ಷದ ವರಿಷ್ಠರು ಮಾತನಾಡಿದ್ದಾರೆ. ಜೊತೆಗೆ ಮುಂದಿನ ವಿಧಾನ ಪರಿಷತ್ ಚುನಾವಣೆ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಆದರೂ ಕೂಡ ಬಿಟ್ ಕಾಯಿನ್ ಪ್ರಕರಣವನ್ನು ಬಿಜೆಪಿ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂಬ ಮಾಹಿತಿಯಿದೆ. ಹೀಗಾಗಿ 'ಬಿಟ್ ಕಾಯಿನ್' ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

Recommended Video

What Is Bitcoin? ಸಾಮಾನ್ಯ ಹಣಕ್ಕೂ ಇದಕ್ಕೂ ಏನು ವ್ಯತ್ಯಾಸ? | Oneindia Kannada

English summary
Chief Minister Basavaraj Bommai could heave a sigh of relief on the Bitcoin row as Prime Minister Narendra Modi has assured him not to bother about the issue and devote his focus on welfare works for the people of the state. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X