ಡಿ.ಕೆ.ಶಿವಕುಮಾರ್ ಬಿಜೆಪಿ ಸೇರ್ಪಡೆ ಕುರಿತು ಮಾಜಿ ಸಿಎಂ ಏನಂದ್ರು?
ಬೆಂಗಳೂರು, ಫೆಬ್ರವರಿ 28: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸದ್ಗುರು ಅವರನ್ನು ಭೇಟಿ ಮಾಡಿರೋದು, ಅಮಿತ್ ಶಾ ಜೊತೆ ವೇದಿಕೆ ಹಂಚಿಕೊಂಡಿರುವ ವಿಚಾರ, ಕುಂಭಮೇಳದಲ್ಲಿ ಭಾಗಿಯಾಗಿರುವ ವಿಚಾರ ಚರ್ಚೆಯಾಗುತ್ತಿದೆ ಅಲ್ಲದೇ ಈ ಬಗ್ಗೆ ಕಾಂಗ್ರಸ್ ಪಕ್ಷದಲ್ಲೇ ವಿರೋಧ ವ್ಯಕ್ತವಾಗುತ್ತಿದೆ. ಇತ್ತ ಡಿ ಕೆ ಶಿವಕುಮಾರ್ ಬಿಜೆಪಿ ಸೇರ್ಪಡೆ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದದಾರ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಕುರಿತು ಬಿಜೆಪಿಯಲ್ಲಿ ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷೀಪ್ರವೇ ಆಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಮಹಾ ಶಿವರಾತ್ರಿ ನಿಮಿತ್ತ ಈಶಾ ಫೌಂಡೇಶನ್ ಸದ್ಗುರು ಜಗ್ಗಿ ವಾಸುದೇವ ಅವರು ಏರ್ಪಡಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಗುರು ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೆ ಭಾಗವಹಿಸಿದ್ದರು. ಅಮಿತ್ ಶಾ ಅವರು ಭಾಗಿಯಾಗಿದ್ದರು. ನಾವೂ ಸಹ ಸಾಕಷ್ಟು ಸಲ ಭಾಗಿಯಾಗಿವಹಿಸಿದ್ದೇವು. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯ ಇಲ್ಲ.
ಕಾಂಗ್ರೆಸ್ ನಲ್ಲಿ ಬೇರೆ ಬೇರೆ ವ್ಯಾಖ್ಯಾನ ನಡೆಯತ್ತಿರುವುದು ಅವರ ಪಕ್ಷದ ವಿಚಾರ ಅದು ಆ ಪಕ್ಷದ ಅಪನಂಬಿಕೆ ಮತ್ತು ಗೊಂದಲದ ಸಂಕೇತ. ಅಪನಂಬಿಕೆ ಇದೆ, ಅದಕ್ಕೆ ಅಪಸ್ವರ ಇದೆ. ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಕುರಿತು ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷೀಪ್ರವೇ ಆಗುವುದು, ಓವರ್ ನೈಟ್ ಆಗುತ್ತದೆ. ಪ್ರಶ್ನೆ ಅದಲ್ಲ, ಆದರೆ, ನಮ್ಮ ತಿಳುವಳಿಕೆ ಯಲ್ಲಿ ಆ ರೀತಿ ಯಾವುದೇ ಸ್ಥಿತಿ ಇಲ್ಲ ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನು ತೇಲಿಬಿಡುತ್ತೀರಿ ಎಲ್ಲರೂ ಒಟ್ಟಿಗೆ ಶಕ್ತಿಯಾಗಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬೇಕು. ಎಲ್ಲರನ್ನೂ ಒಳಗೊಂಡಂತಹ ಸಂಘಟನೆ ಮಾಡುವ ಉದ್ದೇಶ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.












Click it and Unblock the Notifications