ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

No ಆನ್ಲೈನ್ ಶಾಲೆ, No ಶುಲ್ಕ ಹೆಚ್ಚಳ, ಸುರೇಶ್ ಕುಮಾರ್

|
Google Oneindia Kannada News

ಬೆಂಗಳೂರು, ಜೂನ್ 10: ಆನ್ ಲೈನ್ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಮಕ್ಕಳ ಕಲಿಕೆ ಗಮನದಲ್ಲಿಟ್ಟುಕೊಂಡು, ಆನ್ ಲೈನ್ ಶಿಕ್ಷಣ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಘೋಷಿಸಿದ್ದಾರೆ.

Recommended Video

SSLC ಪರೀಕ್ಷೆ ನಡೆದ್ರೆ ಏನಾಗುತ್ತೆ? ನಡೆಯದೇ ಇದ್ರೆ ಏನಾಗುತ್ತೆ? | SSLC Exam | KSEA

ಎಲ್ಲಾ ರೀತಿಯ ಆನ್ ಲೈನ್ ಶಿಕ್ಷಣ, ಶಾಲೆ, ಟೀಚಿಂಗ್ ಕ್ಲಾಸ್ ಗಳನ್ನು ರದ್ದುಗೊಳಿಸಲಾಗಿದೆ. ಆನ್ ಲೈನ್ ಶಾಲೆಗಾಗಿ ಯಾವುದೇ ರೀತಿ ಶುಲ್ಕ ಪಡೆಯುವಂತಿಲ್ಲ ಎಂದು ಸುರೇಶ್ ಕುಮಾರ್ ಸೂಚಿಸಿದ್ದಾರೆ.

ಪುಟ್ಟ ಮಕ್ಕಳಿಗೆ ಆನ್ ಲೈನ್ ಕ್ಲಾಸ್; ಸುತಾರಾಂ ಒಪ್ಪಲ್ಲ ಎಂದ ಶಿಕ್ಷಣ ಸಚಿವಪುಟ್ಟ ಮಕ್ಕಳಿಗೆ ಆನ್ ಲೈನ್ ಕ್ಲಾಸ್; ಸುತಾರಾಂ ಒಪ್ಪಲ್ಲ ಎಂದ ಶಿಕ್ಷಣ ಸಚಿವ

ಈ ರೀತಿಯ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ ಕುಂಠಿತವಾಗುತ್ತದೆ ಎಂದು ತಜ್ಞರಿಂದ ವರದಿ ಬಂದ ಬಳಿಕ ಸಭೆ ನಡೆಸಿದ ಶಿಕ್ಷಣ ಸಚಿವರು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು.

Breaking News: No Fee hike, No Online Classes up to 5th Standard- Suresh Kumar

ಶಾಲೆ ಯಾವಾಗ ಅರಂಭ?
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬೋಧನಾ ಶುಲ್ಕ ಹೆಚ್ಚಳ ಮಾಡದಂತೆ ಸರ್ಕಾರದಿಂದ ಸೂಚನೆ ನೀಡಲಾಗಿದೆ.

LKG, UKG ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಹೇರುವುದಿಲ್ಲ, 1 ರಿಂದ 5 ನೇ ತರಗತಿ ತನಕ ಆನ್ ಲೈನ್ ಟೀಚಿಂಗ್ ವ್ಯವಸ್ಥೆ ಇಲ್ಲ, ಈ ಕುರಿತಂತೆ ಶೀಘ್ರವೇ ಮಾರ್ಗಸೂಚಿ ಹೊರಡಿಸಲಾಗುತ್ತದೆ. ಖಾಸಗಿ ಶಾಲೆಗಳ ವರ್ತನೆಯಿಂದ ಬೇಸತ್ತ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು. ಸುಮಾರು ಸಾವಿರಕ್ಕೂ ಅಧಿಕ ದೂರುಗಳನ್ನು ಪರಿಗಣಿಸಿ, ಈ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು ಈ ನಿರ್ಣಯಕ್ಕೆ ಬರಲಾಗಿದೆ ಎಂದು ಸಚಿವರು ಹೇಳಿದರು.

ಆಗಸ್ಟ್ 15ರ ನಂತರ ಶಾಲೆ ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು. ಈ ನಡುವೆ ಜೂನ್ 25ರಂದು ಎಸ್ಎಸ್ ಎಲ್ ಸಿ ಪರೀಕ್ಷೆಗೆ ಬೇಕಾದ ಸಿದ್ಧತೆ ಭರದಿಂದ ಸಾಗಿದೆ. ಆರೋಗ್ಯ ಇಲಾಖೆ ಸೂಚನೆಯಂತೆ ಕೊವಿಡ್ 19 ಸೋಂಕು ಹರಡದಂತೆ ಮಾರ್ಗಸೂಚಿ ಅನುಸರಿಸಲಾಗುತ್ತಿದೆ ಎಂದರು.

English summary
Breaking News: No Online Classes up to 5th Standard, No Fee hike in current academic year said Education minister Suresh Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X