ಎಂಜಿನಿಯರಿಂಗ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ: ಕಾಲೇಜುಗಳಲ್ಲೂ ನಯಾಪೈಸೆ ಕಟ್ಟುವಂತಿಲ್ಲ
ಬೆಂಗಳೂರು, ನವೆಂಬರ್ 16: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2021ನೇ ಸಾಲಿನ ಎಂಜಿನಿಯರಿಂಗ್/ ಆರ್ಕಿಟೆಕ್ಚರ್ ಕೋರ್ಸ್ ಶುಲ್ಕ ಪ್ರಕಟಿಸಿದೆ. ಕಳೆದ ವರ್ಷಕ್ಕಿಂತ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡಿಲ್ಲ.
ಸಿಇಟಿ ಮೂಲಕ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಸೀಟು ಪಡೆದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿಯೇ ಶುಲ್ಕ ಪಾವತಿಸಿ ಕಾಲೇಜುಗಳಿಗೆ ದಾಖಲಾದ ಬಳಿಕ, ಕಾಲೇಜುಗಳು ಮತ್ತೆ ಮನಬಂದಂತೆ ಶುಲ್ಕ ವಿಧಿಸುತ್ತಿದ್ದವು. ಈ ಬಾರಿ ಅದಕ್ಕೆ ಕಡಿವಾಣ ಹಾಕಲಾಗಿದೆ. ಕಾಲೇಜುಗಳು ನಯಾಪೈಸೆ ಶುಲ್ಕ ವಿದ್ಯಾರ್ಥಿಗಳನ್ನು ಕೇಳಬಾರದು ಎಂದು ಸೂಚನೆ ನೀಡಲಾಗಿದೆ.
ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಶೇ.15ರಿಂದ ಶೇ.20ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಖಾಸಗಿ ಕಾಲೇಜುಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಈ ಬಾರಿ ಶುಲ್ಕ ಹೆಚ್ಚಳ ಮಾಡದಂತೆ ಮನವೊಲಿಸಿದ್ದರು. ಕೊರೋನಾ ಮತ್ತು ಲಾಕ್‌ಡೌನ್‌ಗಳಿಂದಾಗಿ ಪೋಷಕರು ಆರ್ಥಿಕ ಸಂಕಷ್ಟದಲ್ಲಿ ಇದ್ದಾರೆ. ಈ ಸಂದರ್ಭದಲ್ಲಿ ಶುಲ್ಕ ಹೆಚ್ಚಳ ಮಾಡುವ ನಿರ್ಧಾರ ಸರಿಯಲ್ಲ ಎಂದು ಮನವಿ ಮಾಡಿದ್ದರು. ಈ ಪ್ರಯತ್ನ ಯಶಸ್ವಿಯಾಗಿದ್ದು, ಎಂಜಿನಿಯರಿಂಗ್ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡಿಲ್ಲ.

ಕಾಲೇಜು ಶುಲ್ಕವೂ ಸಿಇಟಿಯಲ್ಲೇ ಅಡಕ:
ಎಂಜಿನಿಯರಿಂಗ್ ಕೋರ್ಸ್‌ಗೆ ಸರ್ಕಾರ ಶುಲ್ಕ ನಿಗದಿ ಮಾಡುತ್ತದೆ. ವಿದ್ಯಾರ್ಥಿಗಳು ಸೀಟು ಆಯ್ಕೆಯ ಮೊದಲೇ ಎಲ್ಲ ಶುಲ್ಕ ಪಾವತಿಸಿ ಕೌನ್ಸೆಲಿಂಗ್ ಹಾಜರಾಗುತ್ತಾರೆ. ತಮ್ಮ ರ್ಯಾಂಕ್‌ಗೆ ಅನುಗುಣವಾಗಿ ದೊರೆತ ಕಾಲೇಜಿನಲ್ಲಿ ಸೀಟು ಆಯ್ಕೆ ಮಾಡಿಕೊಂಡು ಬಳಿಕ ಆ ಕಾಲೇಜಿಗೆ ತೆರಳಿ ಪ್ರವೇಶ ಪಡೆಯುತ್ತಾರೆ. ಹೀಗೆ ಕಾಲೇಜು ಸೇರಿದ ಬಳಿಕ ಕಾಲೇಜುಗಳು ಕೌಶಲ ತರಬೇತಿ ಹೆಸರಿನಲ್ಲಿ ವಿವಿಧ ಶುಲ್ಕಗಳನ್ನು ವಿಧಿಸಲಾಗುತ್ತಿತ್ತು. ಈ ಬಗ್ಗೆ ಸಾಕಷ್ಟು ದೂರುಗಳು ಸಹ ದಾಖಲಾಗುತ್ತಿತ್ತಿತ್ತು. ಖಾಸಗಿ ಕಾಲೇಜುಗಳಲ್ಲಿ ವಾರ್ಷಿಕವಾಗಿ ಪಡೆಯುವ ಎಲ್ಲ ರೀತಿಯ ಶುಲ್ಕಗಳ ಬಗ್ಗೆ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕು ಎಂದೂ ಸೂಚಿಸಲಾಗಿತ್ತು. ಹೀಗೆ ಅಗತ್ಯ ಶುಲ್ಕಗಳನ್ನು ಸಿಇಟಿ ಶುಲ್ಕದ ಜೊತೆ ಸೇರಿಸಲಾಗಿದೆ. ಅಲ್ಲದೆ, ಯಾವುದೇ ಕಾಲೇಜುಗಳು ವಿದ್ಯಾರ್ಥಿಗಳಲ್ಲಿ ಯಾವುದೇ ಶುಲ್ಕವನ್ನು ಮತ್ತೊಮ್ಮೆ ಕೇಳಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಶುಲ್ಕದ ವಿವರ ಹೀಗಿದೆ:
ಎಂಜಿನಿಯರಿಂಗ್ ಕೋರ್ಸ್‌ಗೆ ವರ್ಗವಾರು ಸರ್ಕಾರ ನಿಗದಿಪಡಿಸಿದ ಶುಲ್ಕದ ವಿವರ ಹೀಗಿದೆ.
ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಿಗೆ 23,810 ರೂ. ಮತ್ತು ಅನುದಾನಿತ ಕಾಲೇಜುಗಳಿಗೆ 43,810 ರೂ. ಶುಲ್ಕ ನಿಗದಿ ಮಾಡಲಾಗಿದೆ. (ಇದು ಸಾಮಾನ್ಯ, 2A, 2B, 3A, 3B, 10 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಹಾಗೂ 2.5 ಲಕ್ಷಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವ ಕೆಟಗೆರಿ-1 ವಿದ್ಯಾರ್ಥಿಗಳಿಗೆ)

ಎಸ್‌ಎನ್‌ಕ್ಯೂ ಕೋಟಾದವರಿಗೆ ಸರ್ಕಾರಿ ಕಾಲೇಜುಗಳಲ್ಲಿ 8220 ರೂ. ಮತ್ತು ಅನುದಾನಿತ ಕಾಲೇಜುಗಳಲ್ಲಿ 28,220 ರೂ. ನಿಗದಿ ಮಾಡಲಾಗಿದೆ. ವಾರ್ಷಿಕ 10 ಲಕ್ಷ ರೂ. ಗಿಂತ ಕಡಿಮೆ ಆದಾಯ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ 2.5 ಲಕ್ಷ ರೂ.ಗಿಂತ ಕಡಿಮೆ ಆದಾಯ ಹೊಂದಿರುವ ಕೆಟಗೆರಿ 1 ವಿದ್ಯಾರ್ಥಿಗಳಿಗೆ ಸರ್ಕಾರಿ ಕಾಲೇಜುಗಳಲ್ಲಿ 500 ರೂ. ಮತ್ತು ಅನುದಾನಿತ ಕಾಲೇಜುಗಳಲ್ಲಿ 20,500 ರೂ. ನಿಗದಿ ಮಾಡಲಾಗಿದೆ. ಈ ಶುಲ್ಕಗಳು ವಿಶ್ವವಿದ್ಯಾಲಯದ ಶುಲ್ಕ ಒಳಗೊಂಡಿಲ್ಲ ಎಂದು ಹೇಳಲಾಗಿದೆ.
ಖಾಸಗಿ (ಅನುದಾನ ರಹಿತ) ಮತ್ತು ಅಲ್ಪಸಂಖ್ಯಾತ ಕಾಲೇಜುಗಳು: ಟೈಪ್-1 ಕಾಲೇಜುಗಳಿಗೆ - 83,526 ರೂ. ಮತ್ತು ಟೈಪ್ 2- ಕಾಲೇಜುಗಳಿಗೆ 90,060 ರೂ. ಹಾಗೂ ಡೀಮ್ಡ್/ಖಾಸಗಿ ವಿಶ್ವವಿದ್ಯಾಲಯಗಳಲ್ಲಿ 97,293 ರೂ. ಶುಲ್ಕ ನಿಗದಿ ಮಾಡಲಾಗಿದೆ. ಇದು ಸಾಮಾನ್ಯ, 2A, 2B, 3A, 3B, 10 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಹಾಗೂ 2.5 ಲಕ್ಷಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವ ಕೆಟಗೆರಿ-1 ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ.
ಎಸ್‌ಎನ್‌ಕ್ಯೂ ಕೋಟಾದವರಿಗೆ ಖಾಸಗಿ (ಅನುದಾನ ರಹಿತ) ಮತ್ತು ಅಲ್ಪಸಂಖ್ಯಾತ ಕಾಲೇಜುಗಳು: ಟೈಪ್-1, ಟೈಪ್-2 ಹಾಗೂ ಡೀಮ್ಡ್/ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಅನ್ವಯವಾಗುವಂತೆ 28,220 ರೂ. ನಿಗದಿಪಡಿಸಲಾಗಿದೆ. ಅದೇ ರೀತಿ ವಾರ್ಷಿಕ 10 ಲಕ್ಷ ರೂ. ಗಿಂತ ಕಡಿಮೆ ಆದಾಯ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ 20,500 ರೂ. ಹಾಗೂ 2.5 ಲಕ್ಷಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವ ಕೆಟಗೆರಿ-1 ವಿದ್ಯಾರ್ಥಿಗಳಿಗೆ ಟೈಪ್-1 ಕಾಲೇಜುಗಳಲ್ಲಿ 67,166, ಟೈಪ್-2 ಕಾಲೇಜುಗಳಲ್ಲಿ 73,970 ಮತ್ತು ಡೀಮ್ಡ್/ ಖಾಸಗಿ ವಿಶ್ವವಿದ್ಯಾಲಯಗಳಲ್ಲ 81,203 ರೂ. ಶುಲ್ಕ ನಿಗದಿ ಮಾಡಲಾಗಿದೆ.
ವಿದ್ಯಾರ್ಥಿಗಳ ಸಂಖ್ಯೆ ಎಷ್ಟಿದೆ?
2020-21ನೇ ಸಾಲಿನಲ್ಲಿ 1.93 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಅದರಲ್ಲಿ 1,83,231 ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕೋರ್ಸ್‌ಗೆ ರ್ಯಾಂಕ್ ನೀಡಲಾಗಿದೆ. ಕೃಷಿ ಕೋರ್ಸ್‌ಗೆ 1.52,518 ಅಭ್ಯರ್ಥಿಗಳು, 1,55,760 ಪಶು ಸಂಗೋಪನೆ, 1,55,910 ಆಯುಷ್ ಕೋರ್ಸ್ ಅಭ್ಯರ್ಥಿಗಳಿದ್ದಾರೆ. ಈ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಪ್ರವೇಶಕ್ಕೆ ಕೌನ್ಸೆಲಿಂಗ್ ನಡೆಸಲಾಗಿದೆ. ಈ ಮಧ್ಯೆ ಕಾಮೆಡ್-ಕೆ ಮೂಲಕ 44,111 ಅಭ್ಯರ್ಥಿಗಳು ರ್ಯಾಂಕ್ ಪಡೆದಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications