ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೈಸ್ಕೂಲ್-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಇಲ್ಲ

By Nayana
|
Google Oneindia Kannada News

ಬೆಂಗಳೂರು, ಜೂನ್ 13: ಒಂದರಿಂದ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರ ನಿರ್ಧರಿಸಿರುವುದಾಗಿ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಹೇಳಿದ್ದಾರೆ.

ಉಚಿತ ಬಸ್‌ಪಾಸ್‌ನ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದ ಸಾರಿಗೆ ನಿಗಮಗಳು 500ಕೋಟಿ ನಷ್ಟದಲ್ಲಿದೆ. ಹೀಗಾಗಿ ಸಾರಿಗೆ ಇಲಾಖೆಗೆ ಸರ್ಕಾರಿ ಅನುದಾನದ ಅಗತ್ಯವಿದೆ. ಇದಕ್ಕಾಗಿ 629 ಕೋಟಿ ರೂ. ಅನುದಾನದ ಅಗತ್ಯವಿದೆ ಎಂದರು.

ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

7 ನೇ ತರಗತಿವರೆಗಗಿನ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್‌ಪಾಸ್ ನೀಡಲಾಗುತ್ತದೆ. ಪ್ರೌಢಶಾಲೆಯ ವಿದ್ಯಾರ್ಥಿನಿಯರು 600ರೂ. ಪಾವತಿಸಬೇಕು, ಪ್ರೌಢಶಾಲೆ ಹುಡುಗರು 800 ರೂ. ಪಾವತಿಸಬೇಕು. ಬಸ್‌ಪಾಸ್‌ಗೆ ಪಿಯು ವಿದ್ಯಾರ್ಥಿಗಳು 1200 ಪಾವತಿಸಬೇಕು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್ ತಿಳಿಸಿದ್ದಾರೆ.

No free bus pass for high school and college students

ಪ್ರತಿಭಟನೆಗೆ ನಿರ್ಧಾರ: ಉಚಿತ ಬಸ್ ಪಾಸ್ ಸ್ಥಗಿತ ವಿರೋಧಿಸಿ ಎಬಿವಿಪಿ, ಎಐಡಿಎಸ್‌ಒ ಯಿಂದ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಜೂನ್ 15ಕ್ಕೆ ಕೆಎಸ್‌ಆರ್‌ಟಿಸಿ ಕಮುಖ್ಯ ಕಚೇರಿಗೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ.

ಮೊದಲು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವುದಾಗಿ ಹಿಂದಿನ ಸರ್ಕಾರ ಹೇಳಿತ್ತು, ನಂತರ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್‌ ಪಾಸ್‌ ನೀಡುವುದಾಗಿ ತಿಳಿಸಿತ್ತು, ಆದರೆ ಇದೀಗ ರಾಜ್ಯ ಸರ್ಕಾರ ಕೇವಲ ಒಂದರಿಂದ 7ನೇ ತರಗತಿವರೆಗೆ ಮಾತ್ರ ಉಚಿತ ಬಸ್ ಪಾಸ್ ನೀಡುವ ನಿರ್ಧಾರದಿಂದ ವಿದ್ಯಾರ್ಥಿಗಳು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
Transport minister D.C.Thammanna said that there will be no free bus pass for high school and college students and thinking to collect Rs.800 and Rs.1200 respectively since the KSRTC was under loss of Rs.500 crores.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X