Karnataka Bandh: ಮಾರ್ಚ್ 22ಕ್ಕೆ ಕರ್ನಾಟಕ ಬಂದ್ : ರಾಜ್ಯ ಸರ್ಕಾರದ ನಿಲುವು ಸ್ಪಷ್ಟ ಪಡಿಸಿದ ಡಿ.ಕೆ.ಶಿವಕುಮಾರ್
ಬೆಂಗಳೂರು, ಮಾರ್ಚ್ 21: ಮಾರ್ಚ್ 22 ರಂದು ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿವೆ. ಕರ್ನಾಟಕ ಬಂದ್ ಗೆ, ರಾಜ್ಯ ಸರ್ಕಾರ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ರಾಜ್ಯ ಸರ್ಕಾರ ಬೆಂಬಲ ನೀಡಲಿದೆಯಾ ಎನ್ನುವುದರ ಬಗ್ಗೆ ಸದನದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆಯನ್ನು ನೀಡಿದ್ದಾರೆ.
ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರುಮ, ನಾಳೆ(ಮಾರ್ಚ್.22 ) ನಡೆಯಲಿರುವ ಕರ್ನಾಟಕ ಬಂದ್ ನಿಂದ ವಿದ್ಯಾರ್ಥಿಗಳ ಪರೀಕ್ಷೆಗೆ ತೊಂದರೆಯಾಗುತ್ತದೆ ಎನ್ನುವ ವಿಚಾರವನ್ನು ಪ್ರಸ್ತಾಪಿಸಿದರು. ಈ ವೇಳೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಕಾರಣ ಬಂದ್ ಗಳಿಗೆ ಉತ್ತೇಜನ ನೀಡಲು ಸಾಧ್ಯವಿಲ್ಲ. ರಾಜಕೀಯವಾಗಿ ಹಾಗೂ ನ್ಯಾಯಲಯ ಸಹ ಇದಕ್ಕೆ ಬೆಂಬಲ ನೀಡುವುದಿಲ್ಲ. ಬಂದ್ ಕರೆ ನೀಡಿರುವವರಿಗೆ ತಿಳುವಳಿಕೆ ನೀಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಈ ಸಮಯದಲ್ಲಿ ಬಂದ್ ಅಗತ್ಯವಿಲ್ಲ. ಮುಷ್ಕರಕ್ಕೆ ಕರೆ ನೀಡುವ ಬದಲು, ಅವರು ಸರ್ಕಾರದೊಂದಿಗೆ ಮಾತನಾಡಬೇಕಿತ್ತು. ಇದು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ, ಮತ್ತು ಮಾರ್ಚ್ 22 ರಂದು ವಿಶ್ವ ಜಲ ದಿನವಾಗಿ ಆಚರಿಸಲಾಗುವ ಕಾವೇರಿ ಆರತಿಯೊಂದಿಗೆ ಒಂದು ತಿಂಗಳ ಕಾಲ ಜಲ ಸಂರಕ್ಷಣಾ ಅಭಿಯಾನವನ್ನು ಪ್ರಾರಂಭಿಸಲು ನಾವು ಯೋಜಿಸಿದ್ದೇವೆ ಎಂದು ಶಿವಕುಮಾರ್ ಹೇಳಿದರು. ಈಗಾಗಲೇ ಪರೀಕ್ಷೆಗಳು ಪ್ರಾರಂಭವಾಗಿವೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕಾರಿಗಳ ಬಳಿ ಮಾತನಾಡಿ ಹೇಳಿಕೆ ನೀಡಲಾಗುವುದು ಎಂದು ಸದನಕ್ಕೆ ಡಿ.ಕೆ.ಶಿವಕುಮಾರ್ ತಿಳಿಸಿದರು. ಆ ಮೂಲಕ, ಬಂದ್ ಗೆ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ನೇರವಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಕನ್ನಡ ಪರ ಸಂಘಟನೆಗಳನ್ನು ಪ್ರತಿನಿಧಿಸುವ ಕನ್ನಡ ಒಕ್ಕೂಟದ ನೇತೃತ್ವದಲ್ಲಿ ನಡೆದ ಈ ಬಂದ್, ಕಳೆದ ತಿಂಗಳು ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಗೆ ಪ್ರತಿಕ್ರಿಯೆಯಾಗಿದೆ. ಮರಾಠಿ ತಿಳಿಯದ ಕಾರಣ ಕಂಡಕ್ಟರ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದ್ದು, ಇದು ಕನ್ನಡ ಕಾರ್ಯಕರ್ತರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಕೃಷ್ಣ ಮೇಲ್ದಂಡೆ 3ನೇ ಹಂತ ಜಾರಿಗೆ ರೂ.87,818 ಸಾವಿರ ಕೋಟಿ ಬೇಕು
ಬೊಮ್ಮಾಯಿ ಸರ್ಕಾರದ ವೇಳೆ ಮಾಡಿದ ಹಳೆಯ ಲೆಕ್ಕಗಳನ್ನು ತೆಗೆದುಕೊಂಡರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಜಾರಿಗೆ ಅಂದಾಜು ರೂ.87,818 ಸಾವಿರ ಕೋಟಿ ಹಣ ಬೇಕಾಗುತ್ತದೆ. ಪ್ರಸ್ತುತ ಪರಿಷ್ಕರಣೆ ಮಾಡಿದರೆ ವೆಚ್ಚ ಇನ್ನೂ ಹೆಚ್ಚಾಗುತ್ತದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಪಿ.ಎಚ್.ಪೂಜಾರ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತ ಯೋಜನೆಗೆ ಒಂದೇ ಹಂತದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಜಲಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.
ಸಣ್ಣ ಹಾಗೂ ದೊಡ್ಡ ನೀರಾವರಿ ಈ ಎರಡೂ ಇಲಾಖೆಗಳ ಬಜೆಟ್ ಇರುವುದೇ ರೂ.22 ಸಾವಿರ ಕೋಟಿ. ಆದರೂ ಈ ಯೋಜನೆ ಜಾರಿಗೆ ನಾವು ಬದ್ಧವಾಗಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರಿಗೆ ನಾನು ಹಾಗೂ ಸಣ್ಣ ನೀರಾವರಿ ಸಚಿವರಾದ ಬೋಸ್ ರಾಜು ಅವರು ಉದಯಪುರ ಸಮಾವೇಶದ ವೇಳೆ, ದೆಹಲಿಯಲ್ಲಿ ಭೇಟಿಯಾಗಿ ಯೋಜನೆ ಅನುಮೋದನೆಗೆ ಮನವರಿಕೆ ಮಾಡಿದ್ದೇವೆ. ಇದಕ್ಕೂ ಮುಂಚಿತವಾಗಿ ಕಾನೂನಿನ ಚೌಕಟ್ಟಿನಲ್ಲಿ ಏನೇನು ಮಾಡಬೇಕು ಎಂದು ನಾವು ಆಲೋಚನೆ ಮಾಡಿದ್ದೇವೆ ಎಂದು ಹೇಳಿದರು.
ನಾವು- ನೀವು (ಆಡಳಿತ-ವಿರೋಧ ಪಕ್ಷಗಳು) ಸೇರಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಮಾಬೇಕು. ಹೀಗಾದಾಗ ಮಾತ್ರ ಇದಕ್ಕೆ ಏನಾದರೂ ಮುಕ್ತಿ ಸಿಗಬಹುದು. ಇದಕ್ಕೆ ನಾನು ಪ್ರಸ್ತಾವನೆ ತಯಾರು ಮಾಡುತ್ತೇನೆ. ನೀವು ನಾವು ಇಬ್ಬರೂ ದೆಹಲಿಗೆ ಹೋಗೋಣ ಎಂದು ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಈಗಾಗಲೇ 75,563 ಎಕರೆ ಸಬ್ ಮರ್ಜ್ ಆಗಿದೆ, 2,543 ಎಕರೆ ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. 29,568 ಎಕರೆ ಭೂಮಿ ವಿವಿಧ ಹಂತಗಳಲ್ಲಿದೆ. 43,452 ಎಕರೆ ಭೂಮಿ ಸ್ವಾಧೀನಕ್ಕೆ ಒಳಪಡಬೇಕಿದೆ. ಆರ್.ಸಿ ಭೂಮಿಗೆ 6,467 ಎಕರೆ ಬೇಕಾಗಿದೆ ಇದರಲ್ಲಿ ಶೇ 50 ರಷ್ಟು ಎಂದರೆ 3,392 ಎಕರೆ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇದರಲ್ಲಿ ವಿವಿಧ ಹಂತಗಳಲ್ಲಿ 2,600 ಎಕರೆಯಿದ್ದು, 471 ಎಕರೆ ಬಾಕಿ ಉಳಿದಿದೆ. ಫಾರ್ಮೇಶನ್ ಆಫ್ 24 ಆರ್ ಸಿ ವಿಲೇಜ್ ಅಡಿ 4,636 ಎಕರೆ, ವಿವಿಧ ಹಂತಗಳಲ್ಲಿ 2,500 ಮತ್ತು 1,886 ಎಕರೆ ಬಾಕಿಯಿದೆ. ಕಾಲುವೆ ಜಾಲ ನಿರ್ಮಾಣಕ್ಕೆ 1,33,867 ಎಕರೆ ಬೇಕಾಗಿದೆ. ಇದರಲ್ಲಿ ಈಗಾಗಲೇ 51 ಸಾವಿರ ಎಕರೆ ಸ್ವಾಧೀನಪಡಿಸಿಕೊಳ್ಳಲಾಗಿದೆ. ಸರ್ಕಾರದ ಬಳಿ ವಿವಿಧ ಹಂತಗಳಲ್ಲಿ 22,962 ಎಕರೆ ಭೂಮಿ ಇದೆ ಎಂದು ಅಂಕಿ-ಅಂಶಗಳನ್ನು ಸದನದ ಮುಂದಿಟ್ಟರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications