ಈ ಬಾರಿ ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ
Recommended Video

ಬೆಂಗಳೂರು, ಮಾರ್ಚ್ 20: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಯಾವುದೇ ಗ್ರೇಸ್ ಮಾರ್ಕ್ಸ್ ನೀಡುವುದಿಲ್ಲ, ಭೌತಶಾಸ್ತ್ರ ವಿಷಯದ 5 ಅಂಕಗಳ ಬಗ್ಗೆ ಮಾತ್ರ ಮುಂದಿನ ದಿನಗಳಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ್ ಸ್ಪಷ್ಟಪಡಿಸಿದರು.
ಪ್ರಶ್ನೆ ಪತ್ರಿಕೆಯಲ್ಲಿ ಕೆಲವು ಪ್ರಶ್ನೆಗಳ ಬಗ್ಗೆ ಗೊಂದಲ ಇದ್ದ ಕಾರಣ ಆ ಪ್ರಶ್ನೆಗಳಿಗೆ ಎಲ್ಲಾ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಬೇಕೆಂದು ಒತ್ತಾಯ ವಿದ್ಯಾರ್ಥಿ ಹಾಗೂ ಪೋಷಕರಿಂದ ಕೇಳಿಬಂದಿತ್ತು, ಆದರೆ ಒತ್ತಾಯವನ್ನು ನಿರ್ಲಕ್ಷ್ಯ ಮಾಡಿರುವ ಶಿಕ್ಷಣ ಸಚಿವರು ಯಾವುದೇ ಗ್ರೇಸ್ ಮಾರ್ಕ್ಸ್ ನೀಡಲಾಗದು ಎಂದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ' ಈ ಬಾರಿ ಪ್ರಶ್ನೆ ಪತ್ರಿಕೆಯಲ್ಲಿ ಕೆಲವು ದೋಷಗಳು ಇದ್ದ ಕಾರಣ ಮುಂದಿನ ಬಾರಿ ಪ್ರಶ್ನೆ ಪತ್ರಿಕೆಗಳ ತಪ್ಪು ನಿವಾರಿಸಲು 'ಫ್ರೂಪ್ ರೀಡಿಂಗ್' ತಂಡ ಸ್ಥಾಪಿಸಲಾಗುವುದು' ಎಂದರು.

ಈ ಬಾರಿಯ ಪರೀಕ್ಷೆಯಲ್ಲಿ ಅಕ್ರಮ ಕಡಿಮೆ ಆಗಿದೆ ಎಂದ ಅವರು 28 ಸಾವಿರ ಶಿಕ್ಷಕರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ, ಪಿಯು ಉಪನ್ಯಾಸಕರ ಮೌಲ್ಯಮಾಪನ ಬಹಿಷ್ಕರಿಸುವ ಸಾಧ್ಯತೆ ಹೆಚ್ಚಿದ್ದು, ನಾಳೆ (ಮಾರ್ಚ್ 20) ಪಿಯು ಉಪನ್ಯಾಸಕರ ಸಂಘದ ಜೊತೆ ಸಂಧಾನ ಸಭೆ ಮಾಡಲಾಗುತ್ತದೆ ಎಂದರು.
ಮೊದಲ ಬಾರಿಗೆ ಗುಲ್ಬರ್ಗಾದಲ್ಲಿ ಮೌಲ್ಯಮಾಪನ ನಡೆಯಲಿದೆ ಎಂದು ಮಾಹಿತಿ ನೀಡಿದ ಸಚಿವರು ಕಳೆದ ವರ್ಷ 42 ಮೌಲ್ಯಮಾಪನಾ ಕೇಂದ್ರಗಳು ಇದ್ದವು ಈ ಬಾರಿ ಅವನ್ನು 53ಕ್ಕೆ ಹೆಚ್ಚಿಸಲಾಗಿದೆ ಎಂದರು.












Click it and Unblock the Notifications