Get Updates
Get notified of breaking news, exclusive insights, and must-see stories!

BJPvsBJP: ಬಿಜೆಪಿಯಲ್ಲಿ ದಲಿತರ ಬೆಳವಣಿಗೆಯಾಗಲ್ಲ- ವಿಜಯೇಂದ್ರಗೆ ಸ್ಥಾನ ಉತ್ತಮ ಆಯ್ಕೆಯಲ್ಲ ಎಂದ ಬಿಜೆಪಿ ಸಂಸದ

ವಿಜಯಪುರ, ನವೆಂಬರ್‌ 14: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ ಕೆಲವೇ ದಿನಗಳಲ್ಲಿ ಹೈಕಮಾಂಡ್ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಹೆಸರಿಸಿದೆಯೇ ಹೊರತು ರಾಜ್ಯದ ಪಕ್ಷದ ನಾಯಕರಲ್ಲ ಎಂದು ಹೇಳುವ ಮೂಲಕ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ರಮೇಶ್ ಜಗಜಿಣಗಿ, ದಲಿತರಾಗಿದ್ದರೆ ಬಿಜೆಪಿಯೊಳಗೆ ಬೆಳೆಯಲು ಅವಕಾಶ ಸಿಗುವುದಿಲ್ಲ. ಇತರ ಶ್ರೀಮಂತ ನಾಯಕರು ಅಥವಾ ಗೌಡರು (ಒಕ್ಕಲಿಗರು) ಇದ್ದರೆ ಜನರು ಅವರನ್ನು ಬೆಂಬಲಿಸುತ್ತಾರೆ. ಆದರೆ ದಲಿತರಿದ್ದರೆ ಯಾರೂ ಬೆಂಬಲಿಸುವುದಿಲ್ಲ. ಇದು ನಮಗೆ ತಿಳಿದಿದೆ ಮತ್ತು ಇದು ತುಂಬಾ ದುರದೃಷ್ಟಕರ ಎಂದು ಹೇಳಿದರು.

no-growth-of-dalits-in-bjp

ಬಿ.ವೈ.ವಿಜಯೇಂದ್ರ ಅವರು ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಎಂಬ ಕಾರಣಕ್ಕೆ ಪಕ್ಷದ ಹೈಕಮಾಂಡ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದೆ ಎಂದು ಟೀಕಿಸಿದರು.

ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ಅವರು ನವೆಂಬರ್ 15 ರಂದು ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರ ಸ್ಥಾನಕ್ಕೆ ವಿಜಯೇಂದ್ರ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶುಕ್ರವಾರ (ನವೆಂಬರ್ 10) ಕರ್ನಾಟಕ ಘಟಕದ ಬಿಜೆಪಿ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದ್ದಾರೆ.

ಇನ್ನು ವಿಜಯೇಂದ್ರ ಆಯ್ಕೆ ಬಗ್ಗೆ ಹಲವಾರು ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನವೆಂಬರ್ 15ರಂದು ಬಿಎಸ್‌ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ತಾನು ಹೋಗುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ ರವಿ ಹೇಳಿದ್ದಾರೆ.

ಇನ್ನು ವಿ. ಸೋಮಣ್ಣ, ಆರ್. ಅಶೋಕ, ಬಸನಗೌಡ ಪಾಟೀಲ್ ಯತ್ನಾಳ್, ಶ್ರೀರಾಮುಲು ಸೇರಿದಂತೆ ಹಲವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಸೋಮಣ್ಣ ಅವರು ಬಹಿರಂಗವಾಗಿಯೇ ತಮಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಸಿಟಿ ರವಿ ಕೂಡ ಪಕ್ಷದಲ್ಲಿ ಯಾವ ಅಧಿಕಾರ ಇಲ್ಲದ ಕಾರಣ ರಾಜ್ಯಾಧ್ಯಕ್ಷ ಸ್ಥಾನದ ಬೇಡಿಕೆ ಇಟ್ಟಿದ್ದರು, ಮತ್ತೊಂದೆಡೆ ಶೋಭಾ ಕರಂದ್ಲಾಜೆ ಅವರಿಗೆ ಅಧಿಕಾರ ಸಿಗುತ್ತೇ ಎಂದೇ ಭಾವಿಸಲಾಗಿತ್ತು, ಈಗ ವಿಜಯೇಂದ್ರ ಅವರಿಗೆ ಅವಕಾಶ ಕೊಟ್ಟಿರುವುದರಿಂದ ಪಕ್ಷದಲ್ಲಿ ಅಸಮಾಧಾನ ಉಂಟಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+