• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಿಎಸ್ವೈ ಅವರೇ ಜನರ ಶಾಪದಿಂದ ಯಾವ ಹೈಕಮಾಂಡ್ ಕೂಡಾ ನಿಮ್ಮನ್ನು ರಕ್ಷಿಸಲಾರದು

|

ಬೆಂಗಳೂರು, ಸೆ 30: ಕೊರೊನಾ ನಿಯಂತ್ರಣ ಮತ್ತು ಭ್ರಷ್ಟಾಚಾರದ ವಿಚಾರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪನವರ ಕಿಡಿಕಾರಿದ್ದಾರೆ.

"ಜನರ ಶಾಪದಿಂದ ಯಾವ ಹೈಕಮಾಂಡ್ ಕೂಡಾ ನಿಮ್ಮನ್ನು ರಕ್ಷಿಸಲಾರರು" ಎಂದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಇಂತಹ ಸರಕಾರ ಇದ್ದರೆಷ್ಟು, ಬಿಟ್ಟರೆಷ್ಟು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಹೀಗಿದೆ:

ಅಯ್ಯೋ, ಯಡಿಯೂರಪ್ಪ ಬಗ್ಗೆ ಸಿದ್ದರಾಮಯ್ಯ ಇದೆಂಥಾ ಮಾತು!

"ಕೋಲಾರದಲ್ಲಿ ಕೊರೊನಾದಿಂದ ದಿ.19ರಂದು 4 ಮತ್ತು ದಿ.20ರಂದು 1 ಸಾವು ಸಂಭವಿಸಿದೆ ಎಂದು ಅಲ್ಲಿನ ಜಾಲಪ್ಪ ಆಸ್ಪತ್ರೆ ವರದಿ ಮಾಡಿದೆ. ಆದರೆ ಆರೋಗ್ಯ ಇಲಾಖೆ ಆ ದಿನಗಳಲ್ಲಿ ಕೊರೊನಾ ಸಾವು ಸಂಭವಿಸಿಲ್ಲ ಎಂದು ಪ್ರಕಟಣೆ ಹೊರಡಿಸಿದೆ. ಇದು @BSYBJP ಸರ್ಕಾರದ ಕೊರೊನಾ ನಿಯಂತ್ರಣದ ಪರಿ!".

"ಕೊರೊನಾ ನಿಯಂತ್ರಣದಲ್ಲಿ ತನ್ನ ವೈಫಲ್ಯವನ್ನು ಮುಚ್ಚಿಡಲು @CMofKarnataka ಅವರು ಸಾವು ಮತ್ತು ಸೋಂಕಿನ ಮಾಹಿತಿಯನ್ನು ಬಚ್ಚಿಡುತ್ತಿದ್ದಾರೆ ಎಂಬ ಸಾರ್ವಜನಿಕರಲ್ಲಿನ ಅನುಮಾನಕ್ಕೆ

ಕೋಲಾರ ಜಿಲ್ಲೆಯ ಸಾವುಗಳ ಬಗ್ಗೆ ಆರೋಗ್ಯ ಇಲಾಖೆಯ ಸುಳ್ಳುಗಳೇ ಪುರಾವೆ".

"ಕೊರೊನಾ ಮಾಹಿತಿ ಕೇಳಿ ಪತ್ರದ ಮೇಲೆ ಪತ್ರ ಬರೆದರೂ @CMofKarnataka ಮತ್ತು ಸಚಿವರು ಯಾಕೆ ಉತ್ತರಿಸುತ್ತಿಲ್ಲ ಎನ್ನುವುದನ್ನು ಕೋಲಾರದ ಸಾವಿನ ವರದಿಯಲ್ಲಿನ ಸುಳ್ಳುಗಳಿಂದ ಅರ್ಥಮಾಡಿಕೊಳ್ಳಬಹುದು. ಸೋಂಕು-ಸಾವಿನ ಸಂಖ್ಯೆಯನ್ನು ಬಚ್ಚಿಟ್ಟರೂ, ನೊಂದ ಕುಟುಂಬಗಳ ಶಾಪದಿಂದ ನೀವು ಪಾರಾಗಲಾರಿರಿ".

   Namma Metro ಸಿಬ್ಬಂದಿಗಳಿಗೆ ಕೊರೊನ ಸೋಂಕು | Oneindia Kannada

   "ಭ್ರಷ್ಟಾಚಾರದಿಂದಾಗಿ ಹದಗೆಟ್ಟಿರುವ ಹಣಕಾಸು ಸ್ಥಿತಿಯನ್ನು ನಿಯಂತ್ರಿಸಲಾಗದೆ ಅನಿರ್ಬಂಧಿತವಾಗಿ ಎಲ್ಲ ವ್ಯಾಪಾರ-ವಹಿವಾಟನ್ನು ತೆರೆದು ಕೂತಿದ್ದೀರಿ. ಈಗಲೂ ಎಚ್ಚೆತ್ತುಕೊಂಡು ಕೊರೊನಾ ನಿಯಂತ್ರಣಕ್ಕೆ ಕ್ರಮಕೈಗೊಳ್ಳದೆ ಇದ್ದರೆ ಜನರ ಶಾಪದಿಂದ ಯಾವ ಹೈಕಮಾಂಡ್ ಕೂಡಾ ನಿಮ್ಮನ್ನು ರಕ್ಷಿಸಲಾರದು"ಎಂದು ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ ವಿರುದ್ದ ಟ್ವೀಟ್ ಮೂಲಕ ಗುಡುಗಿದ್ದಾರೆ.

   English summary
   No High Command Can Rescue You: Siddaramaiah Tweeet To Yediyurappa On Corona Handling.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X