ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಂದಿನಿ ಹಾಲಿನ ಮಾರಾಟ ದರ ಸದ್ಯಕ್ಕೆ ಹೆಚ್ಚಳವಿಲ್ಲ: ಸಚಿವ

|
Google Oneindia Kannada News

ಬೆಂಗಳೂರು, ನವೆಂಬರ್ 14: ನಂದಿನಿ ಹಾಲಿನ ಮಾರಾಟ ದರವನ್ನು ಸದ್ಯಕ್ಕೆ ಹೆಚ್ಚಳ ಮಾಡಲಾಗುವುದಿಲ್ಲ ಎಂದು ಪಶುಸಂಗೋಪನಾ ಸಚಿವ ವೆಂಕಟಗೌಡ ನಾಡಗೌಡ ಅವರು ಸ್ಪಷ್ಟಪಡಿಸಿದರು.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಭೇಟಿಮಾಡಿದ ಪತ್ರಕರ್ತರೊಡನೆ ಮಾತನಾಡಿದ ಅವರು, ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ ಈಗ ನೀಡುತ್ತಿರುವ 5 ರೂ. ಪ್ರೋತ್ಸಾಹ ಹಣ ಮುಂದುವರೆಸಿಕೊಂಡು ಹೋಗಲಾಗುವುದು ಎಂದರು.

ಬೆಂಗಳೂರಿನ ನಂದಿನಿ ಬೂತ್‌ಗಳಲ್ಲಿ ಸಿಗಲಿದೆ ದೇಸಿ ಹಸುವಿನ ಹಾಲುಬೆಂಗಳೂರಿನ ನಂದಿನಿ ಬೂತ್‌ಗಳಲ್ಲಿ ಸಿಗಲಿದೆ ದೇಸಿ ಹಸುವಿನ ಹಾಲು

ಸದ್ಯಕ್ಕೆ ಕೆ.ಎಂ.ಎಫ್‌ ನಿಂದ ಉತ್ಪಾದನೆಗೊಳ್ಳುತ್ತಿರುವ ಹಾಲಿನ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತೀರ್ಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

No hike in price of Nandini milk says minister

ರಾಜ್ಯದಲ್ಲಿ ಬರ ಪರಿಸ್ಥಿತಿಯಿರುವುದರಿಂದ ಹೊರ ರಾಜ್ಯಗಳಿಗೆ ರಾಜ್ಯದಿಂದ ಮೇವು ಸಾಗಾಟ ಮಾಡುವುದನ್ನು ನಿರ್ಭಂಧಿಸಿದ್ದು, ಈ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಹಾಲಿ ಇರುವ ಮೇವು ಅನ್ನು ಸಂಗ್ರಹಿಸಿಟ್ಟು ಅಗತ್ಯವಿರುವ ಕಡೆ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಸಧ್ಯಕ್ಕೆ ರಾಜ್ಯದಲ್ಲಿ ಎಲ್ಲೂ ಕೂಡಾ ಮೇವಿನ ಕೊರತೆ ಕಂಡು ಬಂದಿಲ್ಲ ಎಂದರು.

ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ಹಾಲು, ಮೊಸರು ನೀಡುತ್ತಿದೆ ಬಮುಲ್ ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ಹಾಲು, ಮೊಸರು ನೀಡುತ್ತಿದೆ ಬಮುಲ್

ಜಾನುವಾರು ಮೇವಿನ ಉತ್ಪಾದನೆಗಾಗಿ ರೈತರಿಗೆ 15 ಕೋಟಿ ರೂ. ಮೊತ್ತದ ಮೇವಿನ ಬೀಜಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದ ಅವರು ಹಾಲು ಕರೆಯುವ ಎಲ್ಲಾ ಹಸುಗಳಿಗೆ ಅವುಗಳ ಗುರುತನ್ನು ಪತ್ತೆ ಹಚ್ಚುವ ಸಂಬಂಧ ಚಿಪ್‌ಗಳನ್ನು ಅಳವಡಿಸಲಾಗಿದೆ. ಪಶಸಂಗೋಪನಾ ಕಚೇರಿ ಹಾಗೂ ಪಶು ಆಸ್ಪತ್ರೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದರು.

ಅಕ್ಷಯಕಲ್ಪದಿಂದ ಭಾರತದ ಮೊದಲ ಲ್ಯಾಕ್ಟೋಸ್ ಮುಕ್ತ ಹಾಲು ಅಕ್ಷಯಕಲ್ಪದಿಂದ ಭಾರತದ ಮೊದಲ ಲ್ಯಾಕ್ಟೋಸ್ ಮುಕ್ತ ಹಾಲು

ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲು ರಾಜ್ಯ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರತಿ ಕ್ವಿಂಟಾಲ್‌ಗೆ ರೂ.1,450 ರೂ. ನೀಡಿ ಖರೀದಿ ಮಾಡಲು ಚಿಂತನೆ ಮಾಡಲಾಗಿದೆ ಎಂದರು.

English summary
Animal Husbandry Minister Venkata Gowda said that no hike in price of Nandini milk. He also said that Encouragement money 5 rupees giving to farmers will be continued.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X