Electricity Tariff : ಸದ್ಯಕ್ಕಿಲ್ಲ ವಿದ್ಯುತ್ ದರ ಏರಿಕೆ- ಇಂಧನ ಸಚಿವ
ಸದ್ಯಕ್ಕೆ ವಿದ್ಯುತ್ ದರ ಏರಿಕೆ ಮಾಡುವುದಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನ ಹೈರಾಣಾಗಿದ್ದಾರೆ. ಇದರ ನಡುವೆ ವಿದ್ಯುತ್ ದರ ಏರಿಕೆಯ ಊಹಾಪೋಹಗಳು ಜನರನ್ನು ಮತ್ತಷ್ಟು ಚಿಂತೆಗೀಡು ಮಾಡಿವೆ. ಆದರೀಗ ಸದ್ಯಕ್ಕೆ ವಿದ್ಯುತ್ ದರ ಏರಿಕೆ ಮಾಡುವುದಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಸದ್ಯಕ್ಕೆ ಬಿಗ್ ರಿಲೀಫ್ ಕೊಟ್ಟಿದ್ದಾರೆ.
ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ನ ನಾಗರಾಜ್ ಯಾದವ್ ವಿಷಯ ಪ್ರಸ್ತಾಪ ಮಾಡಿದರು. ಸರ್ಕಾರ ಜನರಿಗೆ ವಿದ್ಯುತ್ ಬರೆ ಹಾಕಲು ಹೊರಟಿದೆ. ಮಾಧ್ಯಮಗಳಲ್ಲಿ ವಿದ್ಯುತ್ ದರ ಏರಿಕೆ ಅಂತ ಸುದ್ದಿ ಬರುತ್ತಿದೆ. ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡದಂತೆ ಒತ್ತಾಯ ಮಾಡಿದರು.

ಈ ವೇಳೆ ಉತ್ತರಿಸಿದ ಇಂಧನ ಸಚಿವ ಸುನಿಲ್ ಕುಮಾರ್, ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಇಲ್ಲ. ಸರ್ಕಾರದ ಮುಂದೆ ವಿದ್ಯುತ್ ಬೆಲೆ ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದರು. ಸದ್ಯಕ್ಕೆ ದರ ಏರಿಕೆ ಬಗ್ಗೆ ಯಾಔಉದೇ ಯೋಚನೆಯೂ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.












Click it and Unblock the Notifications