ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್ ಡೌನ್; ರಾತ್ರಿ 9ರ ನಂತರ ಸರ್ಕಾರಿ ಬಸ್ ಇಲ್ಲ

|
Google Oneindia Kannada News

ಬೆಂಗಳೂರು, ಏಪ್ರಿಲ್ 27; ಕರ್ನಾಟಕ ಸರ್ಕಾರ ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದೆ. ಮಂಗಳವಾರ ರಾತ್ರಿ 9 ಗಂಟೆಯಿಂದ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಗೆ ಬರಲಿದೆ.

ಕರ್ನಾಟಕ ಸರ್ಕಾರದ ಮಾರ್ಗಸೂಚಿ ಅನ್ವಯ ಅಗತ್ಯ ಸೇವೆಗಳ ಸರಕು ಸಾಗಣೆಗೆ ಮಾತ್ರ ವಾಹನ ಸಂಚಾರ ಇರುತ್ತದೆ. ಖಾಸಗಿ, ಸರ್ಕಾರಿ ಬಸ್‌ಗಳ ಸಂಚಾರ ರಾಜ್ಯಾದ್ಯಂತ ಸ್ಥಗಿತಗೊಳ್ಳಲಿದೆ.

ಕೋವಿಡ್ ಮಾರ್ಗಸೂಚಿ; ಮದುವೆಗೆ ಬಂದವರು ಅರ್ಧದಲ್ಲೇ ವಾಪಸ್! ಕೋವಿಡ್ ಮಾರ್ಗಸೂಚಿ; ಮದುವೆಗೆ ಬಂದವರು ಅರ್ಧದಲ್ಲೇ ವಾಪಸ್!

ಬೆಂಗಳೂರು ನಗರದಿಂದ ಇತರ ಪ್ರದೇಶಗಳಿಗೆ ತೆರಳುವ ಜನರು ರಾತ್ರಿ 9 ಗಂಟೆಯೊಳಗೆ ಹೊರಡಬೇಕು. 9 ಗಂಟೆ ಬಳಿಕ ಯಾವುದೇ ಸರ್ಕಾರಿ ಬಸ್‌ಗಳ ಸಂಚಾರ ಇರುವುದಿಲ್ಲ. ಕೆಎಸ್ಆರ್‌ಟಿಸಿ ಈ ಕುರಿತು ಟ್ವೀಟ್‌ನಲ್ಲಿ ಮಾಹಿತಿ ನೀಡಿದೆ.

ಕರ್ನಾಟಕ; 14 ದಿನ ಲಾಕ್ ಡೌನ್, ಏನು ಓಪನ್, ಕ್ಲೋಸ್? ಕರ್ನಾಟಕ; 14 ದಿನ ಲಾಕ್ ಡೌನ್, ಏನು ಓಪನ್, ಕ್ಲೋಸ್?

No KSRTC Bus Service After 9 PM On April 27

ಸೋಮವಾರ ರಾತ್ರಿ ಬೆಂಗಳೂರಿನಿಂದ ಹೊರ ಹೋಗುವ ಜನರು ಹೆಚ್ಚಿದ್ದ ಹಿನ್ನಲೆಯಲ್ಲಿ ಕೆಎಸ್ಆರ್‌ಟಿಸಿ ಸುಮಾರು 300 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿತ್ತು.

ಸರ್ವ ಪಕ್ಷಗಳ ಸಭೆ; ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯ ಸರ್ವ ಪಕ್ಷಗಳ ಸಭೆ; ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯ

ಮಂಗಳವಾರ ಬೆಳಗ್ಗೆಯಿಂದಲೂ ಸಹ ಸಾವಿರಾರು ಜನರು ಬೆಂಗಳೂರು ನಗರವನ್ನು ಬಿಟ್ಟು ತವರಿಗೆ ವಾಪಸ್ ಆಗುತ್ತಿದ್ದಾರೆ. ಬೇರೆ ಪ್ರದೇಶಗಳಿಗೆ ಹೋಗುವವರು 9 ಗಂಟೆಗೆ ನಗರದಿಂದ ಹೊರಡಬೇಕು.

ಮಂಗಳವಾರ ರಾತ್ರಿ 9 ರಿಂದ ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿಗೆ ಬರಲಿದೆ. ಲಾಕ್ ಡೌನ್ ಜಾರಿಗೊಂಡ ಬಳಿಕ ಪೊಲೀಸರು ಫ್ಲೈ ಓವರ್, ರಸ್ತೆಗಳನ್ನು ಬಂದ್ ಮಾಡಲಿದ್ದಾರೆ. ಜನರು ಖಾಸಗಿ ವಾಹನಗಳ ಮೂಲಕವೂ ಸಂಚಾರ ನಡೆಸುವಂತಿಲ್ಲ.

ಜನರು ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಮುಂಜಾನೆ 6 ರಿಂದ ದ 10 ಗಂಟೆಯ ತನಕ ಅವಕಾಶ ನೀಡಲಾಗಿದೆ. ಹೋಟೆಲ್, ರೆಸ್ಟೋರೆಂಟ್, ಬಾರ್‌ಗಳಲ್ಲಿ ಪಾರ್ಸೆಲ್‌ಗಳನ್ನು ಪಡೆಯಲು ಅವಕಾಶವಿದೆ.

English summary
Karnataka government announced lockdown from April 27, 2021 night. There is no KSRTC bus service after 9 Pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X