Liquor sales banned: ರಾಜ್ಯದ ಈ ಜಿಲ್ಲೆಯಲ್ಲಿ ಇಂದಿನಿಂದ 2 ದಿನ ಮದ್ಯ ಮಾರಾಟ ಬಂದ್!
Liquor sales banned: ರಾಜ್ಯದ ಪ್ರಮುಖ ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮದ್ಯ ಮಾರಾಟ ಬಂದ್ ಇರಲಿದೆ. ಮದ್ಯ ಮಾರಾಟ ಬಂದ್ ಮಾಡಿ ಇಲ್ಲಿನ ಜಿಲ್ಲಾಡಳಿತ ಆದೇಶ ಮಾಡಿದೆ. ಕೆಲವು ವಿಶೇಷ ಸಂದರ್ಭಗಳಲ್ಲಿ ಮದ್ಯ ಮಾರಾಟ ನಿಲ್ಲಿಸಲಾಗುತ್ತದೆ. ಇದೇ ರೀತಿ ಚಿಕ್ಕಮಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಇರುವ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಜಯಂತಿ ನಡೆಯಲಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ.
ವಿಶ್ವಹಿಂದೂ ಪರಿಷತ್,ಬಜರಂಗದಳ ಹಾಗೂ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ದತ್ತಜಯಂತಿಯು ಇಂದಿನಿಂದ (ಡಿಸೆಂಬರ್ 12ರಿಂದ) ಪ್ರಾರಂಭವಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಜೆಲ್ಲೆಯ ವಿವಿಧ ಭಾಗದಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎನ್ನುವ ಉದ್ದೇಶದಿಂದ ಎರಡು ದಿನಗಳ ಕಾಲ ಮದ್ಯ ಮಾರಾಟಕ್ಕೆ ಅವಕಾಶ ನೀಡಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಮಾಡಿದ್ದಾರೆ.

ದತ್ತಜಯಂತಿಯ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಡಿಸೆಂಬರ್ 12ಕ್ಕೆ ಅನಸೂಯ ಜಯಂತಿ ಆಚರಣೆ ನಡೆಯಲಿದೆ. ಇನ್ನು ಅನಸೂಯ ಜಯಂತಿ ಆಚರಣೆಯಲ್ಲಿ ಅಂದಾಜು 2,500 ಜನರಿಂದ 3,000 ಸಾವಿರ ಜನ ಮಹಿಳಾ ಭಕ್ತಾಧಿಗಳು ಹಾಗೂ ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ. ಇನ್ನು ಡಿಸೆಂಬರ್ 13ಕ್ಕೆ ಚಿಕ್ಕಮಗಳೂರು ನಗರದಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಕೃಯಕರ್ತರು ಬೃಹತ್ ಶೋಭಾಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ.
ಇದರಲ್ಲಿ 30,000 ಸಾವಿರ ಜನರಿಂದ 35,000 ಸಾವಿರ ಜನ ಭಕ್ತಾಧಿಗಳು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಸ್ವಾಮೀಜಿಗಳು ಹಾಗೂ ಮಠಾಧೀಶರು ಭಾಗವಹಿಸಲಿದ್ದಾರೆ. ಇನ್ನು ಡಿಸೆಂಬರ್ 14ರಂದು ಬೆಳಿಗ್ಗೆ 4 ಗಂಟೆಗೆ ಭಕ್ತಾಧಿಗಳು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ತೆರಳಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲೂ ಸಾವಿರಾರು ಜನ ಸೇರು ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ಹಾಗೂ ಪೊಲೀಸ್ ಬಂದೋಬಸ್ತ್ ಮಾಡಿರುವುದಾಗಿ ಜಿಲ್ಲಾಡಳಿತ ಹೇಳಿದೆ.

ಯಾವ ಭಾಗದಲ್ಲಿ ಮದ್ಯ ಮಾರಾಟ ನಿಷೇಧ: ಚಿಕ್ಕಮಗಳೂರಿನ ಹಲವು ಭಾಗದಲ್ಲಿ ಮದ್ಯ ಮಾರಾಟ ಬಂದ್ ಆಗಲಿದೆ. ಅದರಲ್ಲಿ ಪ್ರಮುಖವಾಗಿ ಚಿಕ್ಕಮಗಳೂರು, ಕಡೂರು, ಮೂಡಿಗೆರೆ, ಕೊಪ್ಪ, ಎನ್ಆರ್ಪುರ, ತರೀಕೆರೆ ಹಾಗೂ ಶೃಂಗೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಮದ್ಯಮಾರಾಟ ಇರುವುದಿಲ್ಲ.
ಇನ್ನು ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಪ್ರದೇಶದಲ್ಲಿ ಸಂಪೂರ್ಣ ಹಿಂದೂ ಪೀಠದ ಆಗ್ರಹ ಇದೆ. ಇದಕ್ಕೆ ಸಂಬಂಧಿಸಿದಂತೆ ದತ್ತಜಯಂತಿ ವೇಳೆ ಬಿಜೆಪಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ ಸೇರಿದಂತೆ ಹಲವು ದತ್ತಮಾಲಾಧಾರಿಗಳಿಂದ ಭಿಕ್ಷಾಟನೆ ನೆರವೇರಿದೆ. ಚಿಕ್ಕಮಗಳೂರಿನ ಬಸವನಹಳ್ಳಿ ರಸ್ತೆಯಲ್ಲಿ ಮನೆ ಮನೆಗಳಿಗೆ ಹೋಗಿ ಅಕ್ಕಿ, ಕಾಯಿ ಹಾಗೂ ಬೆಲ್ಲವನ್ನು ಸಂಗ್ರಹಿಸಲಾಯಿತು.
ಈ ಪ್ರದೇಶವು ಕೋಮುಸೂಕ್ಷ್ಮ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಗಿದೆ.












Click it and Unblock the Notifications