ಕೊರೊನಾ 2ನೇ ಅಲೆ, ರಾಜ್ಯದಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ಇಲ್ಲ: ರವಿಕುಮಾರ್
ಬೆಂಗಳೂರು, ಏಪ್ರಿಲ್ 2: ಕರ್ನಾಟಕದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದೆ ಆದರೆ ಲಾಕ್‌ಡೌನ್, ನೈಟ್ ಕರ್ಫ್ಯೂ ಯಾವುದನ್ನೂ ವಿಧಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದು ಸತ್ಯ ಆದರೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಕಡಿಮೆ ಇದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ, ಇಂದು ಕಠಿಣ ಮಾರ್ಗಸೂಚಿ ಪ್ರಕಟ: ಸುಧಾಕರ್
ಮಹಾರಾಷ್ಟ್ರದಲ್ಲಿ ಇರುವಂತಹ ಪರಿಸ್ಥಿತಿ ರಾಜ್ಯದಲ್ಲಿಲ್ಲ, ಹಾಗಾಗಿ ಯಾವುದೇ ವಾಣಿಜ್ಯ ಚಟುವಟಿಕೆಗಳನ್ನು ನಿಯಂತ್ರಿಸುವ ಅಗತ್ಯವಿಲ್ಲ. ಇನ್ನು ಶಾಲೆಗಳ ಬಗ್ಗೆ ಮಾತನಾಡಿರುವ ಅವರು 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಈಗಾಗಲೇ ಭೌತಿಕವಾಗಿ ಶಾಲೆಗಳನ್ನು ನಡೆಸದೆ ಇರಲು ಸೂಚಿಸಲಾಗಿದೆ.
ಈಗಾಗಲೇ ಜಾತ್ರೆ, ಧಾರ್ಮಿಕ ಉತ್ಸ ನಿಯಂತ್ರಿಸಿದ್ದೇವೆ, ಕೈಗಾರಿಕೆ, ಐಟಿ ಸಂಸ್ಥೆಗಳಿಗೆ ಹೋಗಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಹೆಚ್ಚು ಜನರು ಇರುವ ಕಡೆ ಕೋವಿಡ್ ಲಸಿಕೆಗಳನ್ನು ನೀಡುತ್ತೇವೆ, ಕೇಂದ್ರ ಕ್ಯಾಬಿನೆಟ್ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಶೇ.20ರಷ್ಟು ಹಾಸಿಗೆಗಳನ್ನು ಕೊರೊನಾ ಸೋಂಕಿತರಿಗೆ ಮೀಸಲಿಡುವಂತೆ ಸೂಚಿಸಲು ಸರ್ಕಾರ ತೀರ್ಮಾನಿಸಿದೆ. , ಈ ಸಂಬಂಧ ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಒಪ್ಪಿಗೆ ಸಿಕ್ಕಿದೆ.
ಹೀಗಾಗಿ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಶೇ.20ರಷ್ಟು ಹಾಸಿಗೆಗಳನ್ನು ಕೊರೊನಾ ರೋಗಿಗಳಿಗೆ ಮೀಸಲಿಡುವುದು ಕಡ್ಡಾಯವಾಗಲಿದೆ, ಹಾಗೆಯೇ ಶೇ.20ರಷ್ಟು ಕೋವಿಡ್ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.