ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಾದ್ಯಂತ ಲಾಕ್‌ಡೌನ್: ಸಿಎಂ ಕೊಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ!

|
Google Oneindia Kannada News

ಬೆಂಗಳೂರು, ಜು. 21: ಕೊರೊನಾ ವೈರಸ್‌ನಿಂದ ಲಾಕ್‌ಡೌನ್ ಜಾರಿಯಾದ ಬಳಿಕ ಮೊದಲ ಬಾರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತಾಡಿದ್ದಾರೆ.

Recommended Video

Drone Prathap ಜೀವನಾಧಾರಿತ ಸಿನಿಮಾ ಎಲ್ಲಿಗೆ ಬಂತು ? | Oneindia Kannada

ಕೊರೊನಾ ವೈರಸ್, ಲಾಕ್‌ಡೌನ್, ಕೋವಿಡ್ ಸಂಕಷ್ಟದಲ್ಲಿ ಖರೀದಿ ಹಗರಣ ಹೀಗೆ ಹಲವು ವಿಷಯಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿದರು. ಸರ್ಕಾರ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಯಾವುದೇ ಅಕ್ರಮ ಆಗಿಲ್ಲ ಎಂದು ರಾಜ್ಯದ ಜನತೆಗೆ ಸ್ಪಷ್ಟನೆಯನ್ನು ಯಡಿಯೂರಪ್ಪ ಅವರು ಕೊಟ್ಟರು. ಜೊತೆಗೆ ರಾಜ್ಯಾದ್ಯಂತ ಲಾಕ್‌ಡೌನ್ ಕುರಿತು ರಾಜ್ಯ ಸರ್ಕಾರದ ನಿರ್ಧಾರವನ್ನು ಸಿಎಂ ಬಿಎಸ್‌ವೈ ರಾಜ್ಯದ ಜನತೆಗೆ ತಿಳಿಸಿದ್ದಾರೆ.

ಮಾಸ್ಕ್‌ ಧರಿಸಿ

ಮಾಸ್ಕ್‌ ಧರಿಸಿ

ರಾಜ್ಯದಲ್ಲಿ ಆರ್ಥಿಕ ಸುಧಾರಣೆಗೆ ಜನರು ಸಹಕಾರ ಕೊಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಡಿನ ಜನರಲ್ಲಿ ಮನವಿ ಮಾಡಿಕೊಂಡರು. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈಗಾಗಲೇ ಹಲವು ಬಾರಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಸದ್ಯಕ್ಕೆ ಕೊರೊನಾ ವೈರಸ್‌ಗೆ ಯಾವುದೇ ಲಸಿಕೆ ಇಲ್ಲ. ಹೀಗಾಗಿ ನಾವು ಮಾಸ್ಕ್‌ ಧರಿಸಬೇಕು. ಜೊತೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕೆಂದು ಮನವಿ ಮಾಡಿಕೊಂಡರು.

ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಜಿಲ್ಲೆಗಳಲ್ಲೂ ಲಾಕ್‌ಡೌನ್ ಇಲ್ಲಬೆಂಗಳೂರು ಸೇರಿದಂತೆ ರಾಜ್ಯದ ಯಾವ ಜಿಲ್ಲೆಗಳಲ್ಲೂ ಲಾಕ್‌ಡೌನ್ ಇಲ್ಲ

ಕೋವಿಡ್ ಜೊತೆಗೆ ನಾವು ಆರ್ಥಿಕ ಸುಧಾರಣೆಗೆ ಮಹತ್ವ ಕೊಡಬೇಕಾದ ಅನಿವಾರ್ಯತೆಯಿದೆ ಎಂದು ಸಿಎಂ ಯಡಿಯೂರಪ್ಪ ನಾಡಿನ ಜನರಲ್ಲಿ ಸೂಚ್ಯವಾಗಿ ಲಾಕ್‌ಡೌನ್ ಬಗ್ಗೆ ವಿವರಿಸಿದರು.

ರಾಜ್ಯದಲ್ಲಿ ಲಾಕ್‌ಡೌನ್

ರಾಜ್ಯದಲ್ಲಿ ಲಾಕ್‌ಡೌನ್

ಕೊರೊನಾ ವೈರಸ್ ಎದುರಿಸುವುದಕ್ಕೆ ಲಾಕ್‌ಡೌನ್ ಒಂದೇ ಪರಿಹಾರ ಅಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಕೊರೊನಾ ವೈರಸ್‌ ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್‌ ಧರಿಸುವುದುದರಿಂದ ಮಾತ್ರ ಕೋವಿಡ್ ನಿಯಂತ್ರಣ ಮಾಡಬಹುದು. ಹೀಗಾಗಿ ನಾಳೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ಲಾಕ್‌ಡೌನ್ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಗಳಲ್ಲಿಯೂ ಲಾಕ್‌ಡೌನ್ ಬಗ್ಗೆ ಮಾತನಾಡದಿರುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ಸಿಎಂ ಹೇಳಿದ್ದಾರೆ. ಎಲ್ಲರೂ ತಮ್ಮ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಬಹುದು ಎಂದಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ ಲಾಕ್‌ಡೌನ್‌ನಿಂದ ಸೋಂಕು ನಿಯಂತ್ರಣ ಸಾಧ್ಯವಿಲ್ಲ. ಎಲ್ಲ ಸಂದರ್ಭಗಳಲ್ಲಿಯೂ ಮಾಸ್ಕ್ ಧರಿಸಬೇಕು. ರಾಜ್ಯದಲ್ಲಿ ಲಾಕ್‌ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ವೀಕೆಂಡ್ ಲಾಕ್‌ಡೌನ್

ವೀಕೆಂಡ್ ಲಾಕ್‌ಡೌನ್

ಇನ್ನು ಮುಂದೆ ಬೆಂಗಳೂರಿನಲ್ಲಿ ಭಾನುವಾರದ ಲಾಕ್‌ಡೌನ್‌ ಕೂಡ ಇರುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇದಕ್ಕೆ ಪ್ರಮುಖವಾಗಿ ಆರ್ಥಿಕತೆಯೆ ಎಂದು ಹೇಳಲಾಗುತ್ತಿದೆ.

ಕೊವಿಡ್ ನಿಯಂತ್ರಿಸಲು '5-T' ತಂತ್ರ ಬಳಸುವುದು ಮುಖ್ಯ- ಸಿಎಂಕೊವಿಡ್ ನಿಯಂತ್ರಿಸಲು '5-T' ತಂತ್ರ ಬಳಸುವುದು ಮುಖ್ಯ- ಸಿಎಂ

ಬೆಂಗಳೂರಿನಲ್ಲಿ ಭಾನುವಾರದ ಲಾಕ್‌ಡೌನ್‌ನಿಂದ ಅಷ್ಟೇನೂ ಪರಿಣಾಮವಾಗಿಲ್ಲ ಎಂದು ವಿಶ್ಲೇಷಣೆ ಮಾಡಲಾಗಿದೆ. ಹೀಗಾಗಿ ಭಾನುವಾರದ ಲಾಕ್‌ಡೌನ್ ಕೂಡ ರದ್ದು ಮಾಡಲಾಗಿದೆ.

ಆರ್ಥಿಕ ಸುಧಾರಣೆ

ಆರ್ಥಿಕ ಸುಧಾರಣೆ

ಆರ್ಥಿಕ ಸುಧಾರಣೆಗೆ ನಾವು ಗಮನ ಕೊಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸರ್ಕಾರಕ್ಕೆ ಆರ್ಥಿಕ ಕ್ರೂಢೀಕರಣ ಕೂಡ ಮುಖ್ಯವಾಗಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಗೆ ಮಾಡುವುದಿಲ್ಲ ಎಂದು ಸಿಎಂ ಹೇಳಿದ್ದಾರೆ. ಹೀಗಾಗಿ ಆರ್ಥಿಕ ಕಾರಣದಿಂದಲೇ ಲಾಕ್‌ಡೌನ್‌ ಜಾರಿಯಿಂದ ಸರ್ಕಾರ ಹಿಂದಕ್ಕೆ ಸರಿದಿರುವುದು ಸಿಎಂ ಮಾತಿನಿಂದಲೇ ವ್ಯಕ್ತವಾಗಿದೆ.

ಸರ್ಕಾರ ನಡೆಸಲು ಪ್ರತಿ ತಿಂಗಳು ಸುಮಾರು ಆರೂವರೆ ಸಾವಿರ ಕೋಟಿ ರೂಪಾಯಿಗಳು ಬೇಕು ಎಂಬುದು ತಜ್ಞರ ಅಭಿಪ್ರಾಯ. ಹೀಗಾಗಿ ಲಾಕ್‌ಡೌನ್ ಜಾರಿಗೆ ರಾಜ್ಯ ಸರ್ಕಾರಬ ಮುಂದಾಗುತ್ತಿಲ್ಲ ಎಂದು ಆರ್ಥಿಕ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ. ಜೊತೆಗೆ ಲಾಕ್‌ಡೌನ್ ತೆರವುಗೊಳಿಸುವುದು ರಾಜ್ಯದ ಜನತೆಯ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆಗಳೂ ಇವೆ ಎಂದಿದ್ದಾರೆ.

English summary
Chief Minister B.S. Yediyurappa made it clear. Community control to control coronavirus, mask wear can only be controlled by covid. So there is no lockdown in any part of the state including Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X