ಇನ್ಮುಂದೆ ಚಿಕ್ಕ ಮಕ್ಕಳಿಗಿಲ್ಲ 'ಚಿಕ್ಕಿ': ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಫೆಬ್ರವರಿ 18: ರಾಜ್ಯ ಬಜೆಟ್‌ ಅಧಿವೇಶನಕ್ಕೂ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿಯೂಟ ಯೋಡನೆಯಾದಂತ ಮಧ್ಯಾಹ್ನದ ಉಪಹಾರ ಯೋಜನೆಯ ಅಡಿಯಲ್ಲಿ ಪೂರಕ ಪೌಷ್ಠಿಕ ಆಹಾರವಾಗಿ ಚಿಕ್ಕಿ, ಮೊಟ್ಟೆ, ಬಾಳೆಹಣ್ಣು ವಿತರಣೆಯನ್ನು ಶಾಲೆಗಳಲ್ಲಿ ಮಾಡಲಾಗುತ್ತಿತ್ತು. ಇದೀಗ ಈ ಯೋಜನೆಯ ಅಡಿಯಲ್ಲಿ ಚಿಕ್ಕಿ ವಿತರಣೆಗೆ ಕರ್ನಾಟಕ ಸರ್ಕಾರ ಬ್ರೇಕ್ ಹಾಕಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಮಧ್ಯಾಹ್ನ ಉಪಹಾರ ಯೋಜನೆ) ರಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1 ರಿಂದ 8ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣು/ಚಿಕ್ಕಿಯನ್ನು ವಿತರಿಸಲು ಆದೇಶಿಸಲಾಗಿರುತ್ತದೆ.

No More Chikki Distribution To School Children

ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿನ ಜುಲೈ ಆಯವ್ಯಯ ಭಾಷಣದ ಕಂಡಿಕೆ-91ರಲ್ಲಿನ ಘೋಷಣೆಯಂತೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, (ಪ್ರತಿ ವಿದ್ಯಾರ್ಥಿಯ ಒಂದು ದಿನದ ಘಟಕ ವೆಚ್ಚ ರೂ 6/- ರಂತೆ) 80 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ (Supplementary Nutrition) ಮೊಟ್ಟೆ /ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲು ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (3)ರ ಸರ್ಕಾರದ ಆದೇಶದಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಷನ್, ಬೆಂಗಳೂರು ಇವರ ಸಹಭಾಗಿತ್ವದಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಈಗಾಗಲೇ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಪೂರಕ ಪೌಷ್ಠಿಕ ಆಹಾರದ ಹೊರತಾಗಿ) ವಾರದಲ್ಲಿ ನಾಲ್ಕು ದಿನ ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಬ್ಯಾಂಕ್‌ ಖಾತೆಗಳನ್ನು ತೆರೆಯಲು ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (4)ರ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ಇವರ ಪತ್ರದಲ್ಲಿ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮಕ್ಕಳಿಗೆ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಎನ್ನಬಹುದಾದಂತಹ ಅಪರ್ಯಾಪ್ತ ಕೊಬ್ಬಿನಾಂಶ (Unsaturated fats) ಹೆಚ್ಚಿಗೆ ಇದ್ದು, ಇದರಲ್ಲಿನ ಸಕ್ಕರೆ ಅಂಶ ಕೂಡ ಅಧಿಕವಾಗಿದ್ದು, ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದಿದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯಕ್ಕೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸುವ ಕುರಿತು ಕ್ರಮವಹಿಸಲು ಕೋರಿರುತ್ತಾರೆ.

ಮೇಲೆ ಓದಲಾದ ಕ್ರಮಾಂಕ (5)ರ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಧಾರವಾಡ, ಇವರ ಪತ್ರದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಬದಲಾಗಿ ಶಾಲೆಗಳಲ್ಲಿ ವಿತರಣೆ ಮಾಡಲಾಗುತ್ತಿರುವ ಚಿಕ್ಕಿಯು ನಿಗದಿತ ಪ್ರಮಾಣದಲ್ಲಿ ಇಲ್ಲದಿರುವುದು, ಸಮರ್ಪಕವಾಗಿ ಸಂಗ್ರಹಿಸದೇ ಇರುವುದು ಹಾಗೂ ಅವಧಿ ಮೀರಿದ ಚಿಕ್ಕಿಗಳನ್ನು ಸಂಗ್ರಹಿಸಿ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವುದು ಕಂಡು ಬಂದಿರುವುದರಿಂದ ಹಾಗೂ ಅಂತಹ ಚಿಕ್ಕಿಗಳನ್ನು ಸೇವಿಸಿದಲ್ಲಿ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ಮಾತ್ರ ವಿತರಿಸುವ ಕುರಿತು ಕ್ರಮವಹಿಸಲು ಕೋರಿರುತ್ತಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ಅನುಮತಿ ನೀಡಿ ಆದೇಶಿಸಿದೆ.

ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು, ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವ ಕುರಿತು ಪ್ರತ್ಯೇಕವಾದ ಮಾರ್ಗಸೂಚಿಯನ್ನು ಹೊರಡಿಸತಕ್ಕದ್ದು. ಈ ಆದೇಶವನ್ನು ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 07 ಟಿ.ಎಫ್.ಪಿ 2024, ದಿನಾಂಕ: 03.01.2025 ರಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿರುವ ಅಧಿಕಾರದನ್ವಯ ಹೊರಡಿಸಿದೆ ಎಂಬುದಾಗಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+