ಸರ್ಕಾರಿ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನಿಷೇಧ ಅಧಿಕೃತ ಆದೇಶ ಪ್ರಕಟ

Recommended Video

      ಸರ್ಕಾರಿ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನಿಷೇಧ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 7: ಪರಿಸರದ ಮೇಲೆ ಪರಿಣಾಮ ಬೀರುತ್ತಿರುವ ಪ್ಲಾಸ್ಟಿಕ್ ಬಾಟಲಿ, ಲೋಟ, ಬ್ಯಾಗ್‌ಗಳನ್ನು ರದ್ದುಪಡಿಸಿರುವ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲೂ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೀಧಿಸಿ ಗುರುವಾರ ಅಧಿಕೃತ ಆದೇಶ ಹೊರಡಿಸಿದೆ.

      ಕೆಲವು ದಿನಗಳ ಹಿಂದಷ್ಟೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ನಿಷೇಧ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎನ್ನುವ ಮಾತುಗಳು ಕೇಳಿಬಂದಿತ್ತು. ಇದೀಗ ಗುರುವಾರ ರಾಜ್ಯ ಸರ್ಕಾರ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ ಮಾಡಿ ಆದೇಶ ಹೊರಡಿಸಿದೆ.

      ವಿಶ್ವವಿದ್ಯಾಲಯಗಳು, ನಿಗಮ ಮಂಡಳಿಗಳು, ಸರ್ಕಾರದಿಂದ ಯಾವ ಯಾವ ಸಂಸ್ಥೆಗಳು ಅನುದಾನ ಪಡೆಯುತ್ತಿವೆಯೋ ಆ ಎಲ್ಲಾ ಸಂಸ್ಥೆಗಳು ಏರ್ಪಡಿಸುವ ಸಭೆ, ಸಮಾರಂಭ ಸೇರಿದಂತೆ ಇತರೆ ಕಾರ್ಯಕ್ರಮಗಳಲ್ಲಿ ಬಾಟಲ್ ನೀರನ್ನು ಬಳಸುವಂತಿಲ್ಲ. ಅದರ ಬದಲಿಗೆ 20 ಲೀ. ಅಥವಾ ಅದಕ್ಕೂ ಹೆಚ್ಚಿನ ಸಾಮರ್ಥ್ಯದ ಕ್ಯಾನ್ ಗಳಲ್ಲಿ ನೀರಿನ ವಿತರಣೆ ಮಾಡಬೇಕು ಎಂದು ಸೂಚಿಸಿದೆ.

      ಜೊತೆಗೆ ಸರ್ಕಾರ ಅಂಗೀಕರಿಸಿದ ಸಂಸ್ಥೆಗಳಿಂದ ಖರೀದಿಸಿದ ಆರ್ ಒ ಮತ್ತು ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿ ಗಾಜಿನ ಅಥವಾ ಸ್ಟೀಲ್ ಲೋಟಗಳಲ್ಲಿ ಕುಡಿಯುವ ನೀರು ನೀಡುವ ವ್ಯವಸ್ಥೆ ಮಾಡುವಂತೆ ಸೂಚಿಸಿದೆ.

      ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದ್ದರೂ ಕೂಡ ಅದು ಸಮರ್ಪಕವಾಗಿ ಜಾರಿಗೆ ಬರದ ಕಾರಣ ಇದೀಗ ಸರ್ಕಾರ ತಾನೇ ತನ್ನ ಕಚೇರಿ ಮತ್ತು ಸಭೆಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ತಡೆಯಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

      ಬೆಂಗಳೂರಲ್ಲಿ ಪ್ಲಾಸ್ಟಿಕ್ ಬ್ಯಾನ್ ಆದ ನಂತರ ಜುಲೈ 2016ರಲ್ಲಿ ಅವೆನ್ಯೂ ರಸ್ತೆ, ಕೆ ಆರ್ ಮಾರುಕಟ್ಟೆಯಲ್ಲಿ 1.5 ಲಕ್ಷ ಟನ್‌ ಅಷ್ಟು ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿತ್ತು. ಬಿಬಿಎಂಪಿಯು ಪ್ಲಾಸ್ಟಿಕ್ ಬಳಕೆ ಮಾಡುವ ವರ್ತಕರಿಗೆ 10 ಸಾವಿರದಿಂದ 1 ಲಕ್ಷದವರೆಗೂ ದಂಡ ವಿಧಿಸಲಿದೆ.

      ಪರಿಸರ ಇಲಾಖೆಯ ಪ್ರಸ್ತಾವಣೆಗೆ ಎಚ್ಡಿಕೆ ಅನುಮೋದನೆ

      ಪರಿಸರ ಇಲಾಖೆಯ ಪ್ರಸ್ತಾವಣೆಗೆ ಎಚ್ಡಿಕೆ ಅನುಮೋದನೆ

      ಪರಿಸರ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಅನುಮೊಂದನೆ ನೀಡಿದ್ದಾರೆ ಎನ್ನಲಾಗಿದೆ. ಇದು ಒಂದು ವೇಳೆ ಜಾರಿಗೆ ಬಂದರೆ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಕ್ಯಾನ್, ಪ್ಲಾಸ್ಟಿಕ್ ಗ್ಲಾಸ್, ಪ್ಲಾಸ್ಟಿಕ್ ಬಾಟಲಿ ಬಳಸುವಂತಿಲ್ಲ.

      ಅಷ್ಟೇ ಅಲ್ಲದೆ ಎಲ್ಲಾ ಸರ್ಕಾರಿ ಅನುದಾನಿತ ಕಚೇರಿಗಳಲ್ಲಿ ಸಾರ್ವಜನಿಕರಿಗಾಗಿ ಶುದ್ಧ ಕುಡಿಯುವ ನೀರಿಗಾಗಿ http://gem.gov.in/ರಲ್ಲಿ ಅನುಮೋದಿಸಿರುವ ಸಂಸ್ಥೆಯಿಂದ ಖರೀದಿಸಿದ ನೀರನ್ನು ಉಪಯೋಗಿಸುವಂತೆ ಅಥವಾ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸುವಂತೆ ಸಲಹೆ ನೀಡಿದೆ.

      ಯಾವ್ಯಾವ ಇಲಾಖೆಯ ಕಾರ್ಯಕ್ರಮಗಳಲ್ಲಿ ನಿಷೇಧ

      ಯಾವ್ಯಾವ ಇಲಾಖೆಯ ಕಾರ್ಯಕ್ರಮಗಳಲ್ಲಿ ನಿಷೇಧ

      ವಿಶ್ವವಿದ್ಯಾಲಯ, ನಿಗಮಮಂಡಳಿಗಳು, ಸರ್ಕಾರದಿಂದ ಅನುದಾನ ಪಡೆಯುವ ಯಾವುದೇ ಸಂಸ್ಥೆಗಳ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

      ಏನೇನು ನಿಷೇಧ?

      ಏನೇನು ನಿಷೇಧ?

      ಕ್ಯಾರಿಬ್ಯಾಗ್, ಚಮಚ, ಲೋಟ, ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಬಳಕೆ ಮಾಡಬಾರದು, ಪ್ಲಾಸ್ಟಿಕ್ ವಸ್ತುಗಳ ಬಳಕೆ, ಮಾರಾಟ, ದಾಸ್ತಾನು ನಿಷೇಧಿಸಿ 2016ರ ಮಾರ್ಚ್ 11ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.

      ಪ್ಲಾಸ್ಟಿಕ್ ಬದಲು ಪರ್ಯಾಯ ಮಾರ್ಗವೇನು?

      ಪ್ಲಾಸ್ಟಿಕ್ ಬದಲು ಪರ್ಯಾಯ ಮಾರ್ಗವೇನು?

      -ಸರ್ಕಾರಿ ಕಚೇರಿಗಳಲ್ಲಿ ಶುದ್ಧ ನೀರಿನ ಘಟನ ಸ್ಥಾಪನೆ
      -ನೀರು ಕುಡಿಯಲು ಗಾಜು, ಸ್ಟೀಲ್, ಅಥವಾ ಪೇಪರ್ ಲೋಟ ಬಳಸಬೇಕು
      -ಸಾರ್ವಜನಿಕರಿಗಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.
      --ಸಭೆಗಳಿಗೆ 20ಲೀಟರ್ ಅಥವಾ ಅದಕ್ಕೂ ಹೆಚ್ಚಿನ ಸಾಮರ್ಥ್ಯದ ಕ್ಯಾನ್ ಗಳಲ್ಲಿ ನೀರು ಪೂರೈಸಬೇಕು

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+