ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಕೋವಿಡ್ ಏರಿತು, ಡೆಂಘೀ ಕೂಡ ಹೆಚ್ಚಿತು: ಸುಧಾಕರ್ ಹೇಳೋದೇನು?

|
Google Oneindia Kannada News

ಬೆಂಗಳೂರು, ಜೂನ್ 13: "ಕರ್ನಾಟಕದಲ್ಲಿ ಕೊರೊನಾ ವೈರಸ್ ಮತ್ತು ಡೆಂಘೀ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆ ಎಲ್ಲ ರೀತಿಯ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ" ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಳದ ಹಿನ್ನೆಲೆ ತಾಂತ್ರಿಕ ಸಲಹಾ ಸಮಿತಿ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿದ ಸಚಿವರು ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು, "ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿವೆ. ಆದರೆ ರೋಗದ ತೀವ್ರತೆ ಅಥವಾ ಸಾವಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಈ ಪರಿಸ್ಥಿತಿ ಅನ್ನು ಗಂಭೀರವಾಗಿ ಅವಲೋಕಿಸಲಾಗುತ್ತಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ" ಎಂದು ಸ್ಪಷ್ಟಪಡಿಸಿದರು.

ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ಡಾ. ಸುಧಾಕರ್ ಸಲಹೆ ಏನು?ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ಡಾ. ಸುಧಾಕರ್ ಸಲಹೆ ಏನು?

"ರಾಜ್ಯದಲ್ಲಿ ಇತರೆ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರೀಕರು ಬೂಸ್ಟರ್ ಡೋಸ್ ಪಡೆದುಕೊಳ್ಳಬೇಕು. ಹಾಗೆಯೇ ಮಕ್ಕಳು ಕೂಡ ಲಸಿಕೆ ಹಾಕಿಸಿಕೊಳ್ಳಬೇಕು. ಇದರ ಜೊತೆಗೆ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು, ಭೌತಿಕ ಅಂತರ ಕಾಯ್ದುಕೊಳ್ಳಬೇಕು. ಆ ಮೂಲಕ ಸೋಂಕು ನಿಯಂತ್ರಣದಲ್ಲಿ ಇಡಲು ಸಾಧ್ಯವಿದೆ" ಎಂದರು.

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಪರೀಕ್ಷೆ ಏರಿಕೆ

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಪರೀಕ್ಷೆ ಏರಿಕೆ

"ಸಿಲಿಕಾನ್ ಸಿಟಿಯಲ್ಲಿ ಆರೋಗ್ಯ ಇಲಾಖೆಯು ಕೋವಿಡ್-19 ಟೆಸ್ಟ್‌ಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತದೆ. ಆದರೆ ರೋಗದ ಲಕ್ಷಣ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳು ತೀರಾ ಕಡಿಮೆಯಾಗಿದೆ. ಇದನ್ನು ನಾಲ್ಕನೇ ಅಲೆ ಎಂದು ಹೇಳಲು ಆಗುವುದಿಲ್ಲ, ಸದ್ಯ ಅಲೆಗಳ ಪ್ರಶ್ನೆ ಉದ್ಭವಿಸಿಲ್ಲ" ಎಂದು ಸಚಿವರು ತಿಳಿಸಿದರು.

ಬಿಬಿಎಂಪಿ ಅಧಿಕಾರಿ ಜೊತೆ ಕೋವಿಡ್ ಸಭೆ

ಬಿಬಿಎಂಪಿ ಅಧಿಕಾರಿ ಜೊತೆ ಕೋವಿಡ್ ಸಭೆ

"ಕರ್ನಾಟಕದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲೇ ಅತಿಹೆಚ್ಚು ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಇದರ ಜೊತೆ ಡೆಂಘೀ ಪ್ರಕರಣಗಳ ಸಂಖ್ಯೆ ಕೂಡ ಉಲ್ಬಣಿಸಿದೆ. ಈ ಹಿನ್ನಲೆ ಬಿಬಿಎಂಪಿ ಅಧಿಕಾರಿಗಳ ಜೊತೆಗೆ ಪ್ರತ್ಯೇಕ ಸಭೆ ನಡೆಸಲಾಗುವುದು" ಎಂದು ಸಚಿವರು ತಿಳಿಸಿದರು.

"ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಜಿನೋಮಿಕ್ ಸಿಕ್ವೆನ್ಸಿಂಗ್ ಲ್ಯಾಬ್ ಆರಂಭಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊಸ ರೂಪಾಂತರಿ ತಳಿಗಳ ಪತ್ತೆಗೆ ಲ್ಯಾಬ್‌ನಿಂದ ಸಹಾಯವಾಗುತ್ತದೆ. ಉಳಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದೆ ಎಂದು ವಿವರಿಸಿದರು. ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಇಲಾಖೆಯ ಪರಿಶೀಲನಾ ಸಭೆಯನ್ನೂ ನಡೆಸಲಾಗಿದೆ. ವಿಶೇಷವಾಗಿ ಕ್ಲಿನಿಕ್‌ಗಳ ಆರಂಭಕ್ಕೆ ಕಾಲಮಿತಿಯಲ್ಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದರು

ಮಂಗಳವಾರ ಮೈಸೂರಿಗೆ ಸಚಿವ ಸುಧಾಕರ್

ಮಂಗಳವಾರ ಮೈಸೂರಿಗೆ ಸಚಿವ ಸುಧಾಕರ್

"ಮಂಗಳವಾರ ತಾವು ಮೈಸೂರಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದ ಸಚಿವರು, ಯೋಗಾ ದಿನದಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತಾ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವ ಸೋಮಶೇಖರ್‌ ಅವರ ಜೊತೆ ಪರಿಶೀಲನೆ ನಡೆಸುವುದಾಗಿಯೂ" ಸಚಿವ ಸುಧಾಕರ್ ತಿಳಿಸಿದರು.

ರಾಜ್ಯದಲ್ಲಿ ಪ್ರತಿಭಟನೆ ಹೆಸರಲ್ಲಿ ದಾಂಧಲೆ ಸೂಕ್ತವಲ್ಲ

ರಾಜ್ಯದಲ್ಲಿ ಪ್ರತಿಭಟನೆ ಹೆಸರಲ್ಲಿ ದಾಂಧಲೆ ಸೂಕ್ತವಲ್ಲ

"ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕರೆಯುವುದೇ ತಪ್ಪಾ? ಉನ್ನತ ಸ್ಥಾನದಲ್ಲಿ ಇದ್ದವರಿಗೆ ಒಂದು ಕಾನೂನು ಶ್ರೀಸಾಮಾನ್ಯನಿಗೆ ಮತ್ತೊಂದು ಕಾನೂನು ಇಲ್ಲ. ಕಾನೂನಿನ ಕಣ್ಣಿನಲ್ಲಿ ಎಲ್ಲರೂ ಒಂದೇ ಎಂಬ ಸಾಮಾನ್ಯ ಜ್ಞಾನ ಅವರಿಗೆ ಇದ್ದಂತಿಲ್ಲ. ಈ ರೀತಿ ಪ್ರತಿಭಟನೆ ಹೆಸರಿನಲ್ಲಿ ಕಾಂಗ್ರೆಸ್‌ ನಾಯಕರು ನೆಲದ ಕಾನೂನನ್ನು ಧಿಕ್ಕರಿಸಿದ್ದಾರೆ" ಎಂದು ಡಾ. ಕೆ. ಸುಧಾಕರ್ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

"ನೆಲದ ಕಾನೂನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಮತ್ತು ಜವಾಬ್ದಾರಿ. ಇದನ್ನು ಉನ್ನತ ಸ್ಥಾನಗಳನ್ನು ಅಲಂಕರಿಸಿರುವವರು ಪಾಲಿಸುವ ಮೂಲಕ ಮೇಲ್ಪಂಕ್ತಿ ಹಾಕಿ ಕೊಡಬೇಕು. ಅದನ್ನು ಬಿಟ್ಟು ಅವರೇ ಕಾನೂನು ಉಲ್ಲಂಘನೆ ಮಾಡುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ" ಎಂದು ಆರೋಪಿಸಿದರು.

"ಈ ಹಿಂದೆ ಪ್ರಧಾನಿ ಹುದ್ದೆ ಅಲಂಕರಿಸಿದ್ದವರೇ ವಿಚಾರಣೆಗಳಿಗೆ ಹಾಜರಾಗಿದ್ದ ನಿದರ್ಶನಗಳಿವೆ. ಪ್ರತಿಭಟಿಸಿದ ಕಾಂಗ್ರೆಸ್‌ ನಾಯಕರು ಅದನ್ನು ಮರೆತ ಹಾಗಿದೆ. ಯಾವುದೇ ಸಂವಿಧಾನಬದ್ಧ ಹುದ್ದೆಗಳನ್ನೂ ಅಲಂಕರಿಸದವರೇ ಕಾನೂನು ಗೌರವಿಸುವುದಿಲ್ಲ ಎಂದರೆ ಹೇಗೆ?, ಇದು ಕಾಂಗ್ರೆಸ್ಸಿಗರ ಸಂಸ್ಕೃತಿ ಮತ್ತು ಮನೋಭಾವ. ಕಾಂಗ್ರೆಸ್ಸಿಗರಲ್ಲಿ ದೊಡ್ಡವರಿಗೊಂದು ಜನಸಾಮಾನ್ಯರಿಗೆ ಒಂದು ಕಾನೂನು ಮಾಡುವ ಯೋಚನೆ ಹೊಂದಿದ್ದರೂ ಇರಬಹುದು" ಎಂದು ಲೇವಡಿ ಮಾಡಿದರು.

English summary
No Need to fear on Covid-19 and Dengue in Karnataka, Says Health Minister Dr K Sudhakar. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X