Liquor Shop: ರಾಜ್ಯದಲ್ಲಿ ಹೊಸ ಮದ್ಯದ ಅಂಗಡಿ ತೆರೆಯುವ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?

ಚಿತ್ರದರ್ಗ, ಅಕ್ಟೋಬರ್ 06: ಒಂದು ಸಾವಿರ ಮದ್ಯದಂಗಡಿಗಳನ್ನು ತೆರೆಯುವುದಾಗಿ ಚಿಂತನೆ ನಡೆಸುತ್ತಿರುವುದಾಗಿ ಸಚಿವರಾದ ಆರ್ ಬಿ ತಿಮ್ಮಾಪುರ ಹೇಳಿಕೆ ನೀಡಿದ್ದಾರೆ, ಆದರೆ, ನಮ್ಮ ಸರ್ಕಾರ ಹೊಸ ಮದ್ಯದ ಅಂಗಡಿ ತೆಗೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ಕುರಿತು ಚಿತ್ರದುರ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಹಾಳು ಮಾಡಿದವರೇ ಬಿಜೆಪಿಯವರು. ಅವರಿಗೆ ಯಾವ ನೈತಿಕತೆ ಇದೆ.

no-new-liquor-shop-will-be-open

ನಮ್ಮ ಕಾಲದಲ್ಲಿ ಯಾವತ್ತೂ ಇಷ್ಟೊಂದು ಸಾಲ ಮಾಡಿರಲಿಲ್ಲ. ಹಾಗೂ ಈ ಮೊತ್ತದ ಬದ್ಧತೆ ವೆಚ್ಚ ಇರಲಿಲ್ಲ. ಎಲ್ಲಾ ಹಾಳು ಮಾಡಿ ಈಗ ಹೇಳುತ್ತಾರೆ ಎಂದರು, ಕಾಂಗ್ರೆಸ್ ಪಕ್ಷದ ಶಾಸಕರೇ ಈ ಆರೋಪ ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಹೆಚ್ಚುವರಿ ಅನುದಾನ ದೊರೆಯುತ್ತಿಲ್ಲ ಎಂದು ಹೇಳಿದ್ದಾರೆ.

ನಿಯಮಿತ ಅನುದಾನ ದೊರೆಯುತ್ತಿದೆ ಎಂದರು. ಭದ್ರಾ ಯೋಜನೆಗೆ 200 ಕೋಟಿ ರೂ.ಗಳನ್ನು ಭೂ ಸ್ವಾಧೀನಕ್ಕೆ ನೀಡಲಾಗಿದೆ. ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇಲ್ಲ ಹಾಗೂ ಗ್ಯಾರಂಟಿ ಯೋಜನೆಗಳಿಗೂ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಪಡಿಸಿದರು.

ಇನ್ನೂ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಿಂದ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿರುವ ವಿಚಾರವಾಗಿ ಮಾತನಾಡಿ, ಬಿಜೆಪಿ- ಜೆಡಿಎಸ್ ಯದ್ದು ಅಪವಿತ್ರ ಮೈತ್ರಿ. ಜನತಾ ದಳ (ಜಾತ್ಯಾತೀತ) ಕೋಮುವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದೆ. ಮೈತ್ರಿ ಬಗ್ಗೆ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.

ಶಿವಮೊಗ್ಗಕ್ಕೆ ಬಿಜೆಪಿ ಸತ್ಯ ಶೋಧನಾ ಸಮಿತಿ ಭೇಟಿ ನೀಡಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸತ್ಯ ಶೋಧನೆ ಮಾಡಲು ಏನಾಗಿದೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ? ಈದ್-ಮಿಲಾದ್ ಸಂದರ್ಭದಲ್ಲಿ ಮುಸ್ಲಿಮರು ಮೆರವಣಿಗೆ ಮಾಡುತ್ತಿದ್ದ ಸಂದರ್ಭದಲ್ಲಿ, ಯಾರು ಕಲ್ಲು ಎಸೆದಿದ್ದಾರೋ ಅವರ ಮೇಲೆ ಕ್ರಮ ಜರುಗಿಸಲಾಗಿದೆ. ಅವರು ಯಾವ ಪಕ್ಷದವರೇ ಆಗಿದ್ದರೂ, ಯಾರೇ ಆಗಿದ್ದರೂ ಅವರನ್ನು ಬಿಡಬೇಡಿ, ಕಾನೂನು ಕೈಗೆತ್ತಿಕೊಳ್ಳಲು ಬಿಡಬೇಡಿ ಎಂದು ಬಹಳ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು.

ರಾಜ್ಯದ ಬರಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ಬರ ಅಧ್ಯಯನ ತಂಡ ಆಗಮಿಸಿರುವ ಬಗ್ಗೆಪ್ರತಿಕ್ರಿಯೆ ನೀಡುತ್ತಾ, ಕೇಂದ್ರದ ಅಧ್ಯಯನ ತಂಡಕ್ಕೆ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ವಸ್ತುಸ್ಥಿತಿಯನ್ನು ಈಗಾಗಲೇ ವಿವರಿಸಲಾಗಿದೆ. ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸುಮಾರು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಬೆಳೆಹಾನಿ ಸಂಭವಿಸಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ಶೇ. 52 ರಷ್ಟು ಬೆಳೆಹಾನಿಯಾಗಿದೆ.

ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ , ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶದಗಳಲ್ಲಿ ನೀರಿರುವುದಿಲ್ಲ. ಕೇಂದ್ರದ ಮಾರ್ಗಸೂಚಿಯಂತೆ 4860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ. ಈ ಬಾರಿ ಹಸಿರು ಬರ ಉಂಟಾಗಿದೆ. ಕೇಂದ್ರದ ಅಧ್ಯಯನ ತಂಡ ಮೂರು ತಂಡಗಳಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಅವರು ಕೇಂದ್ರಕ್ಕೆ ವರದಿ ಸಲ್ಲಿಸಿದ ನಂತರ , ವರದಿ ಆಧರಿಸಿದಂತೆ ಕೇಂದ್ರ ಪರಿಹಾರ ನೀಡಲಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+