ಕುಡುಕರಿಗೆ ನಿರಾಸೆ ಮೂಡಿಸಿದ ಸಿಎಂ! ಮದ್ಯದಂಗಡಿಗಳ ಬಗ್ಗೆ ಹೇಳಿದ್ದೇನು?

Recommended Video

      ಮದ್ಯದಂಗಡಿ ಮಾಲೀಕರಿಗೆ ನಿರಾಸೆ ಮೂಡಿಸಿದ ಎಚ್ ಡಿ ಕುಮಾರಸ್ವಾಮಿ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 26: ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡಲಾಗುತ್ತಿದೆ ಎಂಬ ಸುದ್ದಿಯನ್ನು ಸಿಎಂ ಕುಮಾರಸ್ವಾಮಿ ಅವರು ತಳ್ಳಿ ಹಾಕಿದ್ದಾರೆ.

      ಸುದ್ದಿಗೋಷ್ಠಿಯಲ್ಲಿ ವಿವಿಧ ವಿಷಯಗಳ ಬಗ್ಗೆ ಮಾತನಾಡಿದ ಅವರು, ಹೊಸ ಮದ್ಯದಂಗಡಿಗಳ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳು ನಿಜವಲ್ಲ ಎಂದರು.

      ಅಬಕಾರಿ ಖಾತೆಯು ನನ್ನ ಬಳಿಯೇ ಇದೆ. ಈವರೆಗೆ ಯಾವುದೇ ಹೊಸ ಮದ್ಯದಂಗಡಿಗೆ ಪರವಾನಿಗೆ ನೀಡುವ ಕಾರ್ಯ ಆಗಿಲ್ಲ. ಆ ಬಗ್ಗೆ ಪ್ರಸ್ತಾವ ಸಹ ಸರ್ಕಾರದ ಮುಂದೆ ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

      No new liquor shops in Karnataka : HD Kumaraswamy

      ಇನ್ನೂ ಕೆಲವು ವಿಷಯಗಳ ಬಗ್ಗೆ ಮಾತನಾಡಿದ ಅವರು, ಬಸ್ ದರವನ್ನು ಹೆಚ್ಚಳವನ್ನು ನಾನೇ ತಡೆ ಹಿಡಿದಿದ್ದೇನೆ, ಪ್ರಯಾಣಿಕರಿಗೆ ಹೊರೆ ಆಗದಂತೆ ಕ್ರಮ ಕೈಗೊಳ್ಳುವಂತೆ ಇಲಾಖೆಗೆ ಸೂಚಿಸಿದ್ದೇನೆ ಎಂದರು.

      ಬಡ್ತಿ ಮೀಸಲಾತಿ ಕುರಿತ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಅಡ್ವೊಕೇಟ್ ಜನರಲ್ ಅವರೊಂದಿಗೆ ಚರ್ಚಿಸುತ್ತೇನೆ. ಆದೇಶದ ಪ್ರತಿ ಪಡೆದ ನಂತರ ಸಂಬಂಧಿಸಿದವರ ಬಳಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.

      ಎಲ್ಲದಕ್ಕೂ ಆಧಾರ್ ಕಡ್ಡಾಯ ಎಂಬುದು ಸಡಿಲಿಕೆ ಆಗಿರುವುದು ಸಂತಸ, ತೀರ್ಪಿನ ಪೂರ್ಣ ಮಾಹಿತಿ ಪಡೆದುಕೊಂಡ ನಂತರವಷ್ಟೆ, ಈ ಬಗ್ಗೆ ಪ್ರತಿಕ್ರಿಯಿಸುತ್ತೇನೆ ಎಂದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+