ಆತ್ಮ ನಿರ್ಭರ ಬಜೆಟ್ ಅಲ್ಲ ಆತ್ಮ ಬರ್ಬರ ಬಜೆಟ್; ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 01; "ಇದು ಆತ್ಮ ನಿರ್ಭರ ಬಜೆಟ್ ಅಲ್ಲ, ಆತ್ಮ ಬರ್ಬರ ಬಜೆಟ್" ಎಂದು ಕರ್ನಾಟಕದ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಜೆಟ್‌ ಅನ್ನು ಲೇವಡಿ ಮಾಡಿದರು.

ಸೋಮವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021ರ ಬಜೆಟ್ ಮಂಡನೆ ಮಾಡಿದರು. "ಆತ್ಮ ಬರ್ಬರ ಎಂದರೆ ದಿವಾಳಿತನ ಎಂದರ್ಥ. ಕೇಂದ್ರ ಸರ್ಕಾರ ದಿವಾಳಿ ಬಜೆಟ್ ಮಂಡಿಸಿದೆ" ಎಂದು ಸಿದ್ದರಾಮಯ್ಯ ಹೇಳಿದರು.

 No New Scheme For Farmer In Budget 2021 Siddaramaiah

"ರೈತರಿಗೆ ಸಾಲ ನೀಡುವ ಬದಲು ಕೃಷಿ ಸೆಸ್ ಹಾಕಿದ್ದಾರೆ. ಇದರಿಂದಾಗಿ ಹಣದುಬ್ಬರ ಹೆಚ್ಚಾಗಲಿದೆ. ಸರ್ಕಾರ ಸಾಲ ಮನ್ನಾ ಮಾಡಿಲ್ಲ. ರೈತರಿಗಾಗಿ ಹೊಸ ಯೋಜನೆ ಘೋಷಣೆ ಮಾಡಿಲ್ಲ" ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

"ರೈತರಿಗೆ ಸಾಲ ನೀಡುವ ಬದಲು ಕೃಷಿ ಸೆಸ್ ಹಾಕಿದ್ದಾರೆ. ಇದರಿಂದಾಗಿ ಹಣದುಬ್ಬರ ಹೆಚ್ಚಾಗಲಿದೆ. ಸರ್ಕಾರ ಸಾಲ ಮನ್ನಾ ಮಾಡಿಲ್ಲ. ರೈತರಿಗಾಗಿ ಹೊಸ ಯೋಜನೆ ಘೋಷಣೆ ಮಾಡಿಲ್ಲ" ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

"ಕೋವಿಡ್ ವೇಳೆ ಕೈಗಾರಿಕೆಗಳು ಮುಚ್ಚಿ ಹೋಗಿವೆ. ಆ ಕೈಗಾರಿಕೆಗಳ ಬಲವರ್ಧನೆ ಮಾಡುವ ಬದಲು ಯಂತ್ರೋಪಕರಣಗಳ ಮೇಲೆ ಸೆಸ್ ಹಾಕಿದ್ದಾರೆ" ಎಂದು ಸಿದ್ದರಾಮಯ್ಯ ಟೀಕಿಸಿದರು.

ಸಿದ್ದರಾಮಯ್ಯ ಹೇಳಿದ್ದೇನು?

* ತೆರಿಗೆ ಎನ್ನುವುದು ಬಜೆಟ್ ಗಳ ಸಾಮಾನ್ಯ ಭಾಗ. ಪ್ರಮುಖವಾಗಿ ತೆರಿಗೆಗಳ ಮೂಲಕವೇ ಸರ್ಕಾರ ತನ್ನ ವೆಚ್ಚಕ್ಕೆ ಬೇಕಾದ ಸಂಪನ್ಮೂಲವನ್ನು ಕ್ರೋಡೀಕರಿಸುತ್ತದೆ. ಆದರೆ ನಿರ್ಮಲಾ ಸೀತಾರಾಮನ್ ಅವರು ನೇರವಾಗಿ ಹೆಚ್ಚು ತೆರಿಗೆ ವಿಧಿಸದೆ, ಕೃಷಿ ಮೂಲಸೌಕರ್ಯ ಸೆಸ್ ಹೇರಿ ರೈತರ ಹೆಸರಲ್ಲಿ ಪರೋಕ್ಷವಾಗಿ ಸಂಪನ್ಮೂಲ ಕ್ರೋಡಿಕರಿಸಲು ಹೊರಟಿದ್ದಾರೆ.

* ಪೆಟ್ರೋಲ್, ಡೀಸೆಲ್, ರಸಗೊಬ್ಬರ, ಕಲ್ಲಿದ್ದಲು, ಪಾಮ್ ಆಯಿಲ್, ಕಡಲೆ, ಬಟಾಣಿ, ಹತ್ತಿಯಿಂದ ಹಿಡಿದು ಸೇಬು,ಮದ್ಯದ ವರೆಗೆ ಎಲ್ಲದರ ಮೇಲೂ ಶೇಕಡಾ 2.5ರಿಂದ ಹಿಡಿದು ಶೇಕಡಾ ನೂರರ ವರೆಗೆ ಕೃಷಿ ಸೆಸ್ ಹೇರಲಾಗಿದೆ. ಇದರಿಂದಾಗುವ ಬೆಲೆ ಏರಿಕೆಗೆ ರೈತರೂ ಸೇರಿದಂತೆ ಎಲ್ಲರೂ ತಲೆಕೊಡಬೇಕಾಗುತ್ತದೆ.

Recommended Video

      Union Budget : ನಮ್ಮ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗತ್ತೆ | R Ashok | Oneindia Kannada

      * ಕೃಷಿ ಮೂಲಸೌಕರ್ಯ ಸೆಸ್ ನಿಂದಾಗಿ ಬೆಲೆ ಏರಿಕೆಯಾದಾಗ ಜನ ಸರ್ಕಾರವನ್ನಲ್ಲ ರೈತರನ್ನು ದೂರತೊಡಗುತ್ತಾರೆ. ಈ ಮೂಲಕ ಬೆಲೆ ಏರಿಕೆಗೆ ಕೃಷಿ ಸೆಸ್ ಕಾರಣ ಎಂಬ ಜನಾಭಿಪ್ರಾಯವನ್ನು ಮೂಡಿಸಿ ಜನರನ್ನು ರೈತರ ವಿರುದ್ದ ಎತ್ತಿಕಟ್ಟುವ ಹೀನ ಕೃತ್ಯವನ್ನು ಕೇಂದ್ರ ಸರ್ಕಾರ ಮಾಡಿದೆ.

      * ಕೃಷಿ ಮೂಲಸೌಕರ್ಯ ಸೆಸ್ ನಿಂದಾಗಿ ಸಂಗ್ರಹವಾಗುವ ಹಣ ಎಷ್ಟು? ಇದನ್ನು ಬಳಸಿಕೊಂಡು ಕೃಷಿಕ್ಷೇತ್ರದಲ್ಲಿ ಅನುಷ್ಠಾನಗೊಳ್ಳಲಿರುವ ಮೂಲಸೌಕರ್ಯಗಳ ಯೋಜನೆಗಳೇನು ಎಂಬ ಬಗ್ಗೆ 65 ಪುಟಗಳ ಬಜೆಟ್ ಭಾಷಣದಲ್ಲಿ ಎಲ್ಲಿಯೂ ಉಲ್ಲೇಖ ಇಲ್ಲ. ನೀರಾವರಿ, ಶೈತ್ಯಾಗಾರ, ದಾಸ್ತಾನು ಮಳಿಗೆ ಹೀಗೆ ಯಾವುದೇ ನಿರ್ದಿಷ್ಠ ಯೋಜನೆಗಳನ್ನು ಘೋಷಣೆ ಮಾಡಲಾಗಿಲ್ಲ.

      * ನೀರಾವರಿ ಯೋಜನೆಗಳು, ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿದಾಗ ಬೆಲೆ ರಕ್ಷಣೆಗೆ ಕ್ರಮಗಳು, ಕಡಿಮೆ ಬಡ್ಡಿದರದಲ್ಲಿ ಸಾಲ, ಕಡಿಮೆ ಬೆಲೆಯಲ್ಲಿ ಬೀಜ-ಗೊಬ್ಬರ ಸೇರಿದಂತೆ ರೈತರ ಅವಶ್ಯಕತೆಗಳನ್ನು ಪೂರೈಸುವ ಯಾವ ಯೋಜನೆಗಳೂ ಬಜೆಟ್ ನಲ್ಲಿ ಇಲ್ಲ.

      * ದೇಶಾದ್ಯಂತ ರೈತರು ಕಡಿಮೆ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡುವ ಯೋಜನೆಯ ಬಗ್ಗೆ ಒತ್ತಾಯಿಸುತ್ತಾ ಬಂದಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ದಿಯಾಗಬೇಕಾದರೆ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯ ಸಿಗಬೇಕು. ಇದರ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾವ ಇಲ್ಲ. ಇದೇ ರೀತಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕೆಂಬ ಬೇಡಿಕೆಯನ್ನು ಕಳೆದ ಏಳು ವರ್ಷಗಳಿಂದ ರೈತರು ಮಾಡುತ್ತಾ ಬಂದಿದ್ದಾರೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕಾಂಗ್ರೆಸ್ ಸರ್ಕಾರ ಮಾಡಿದ್ದ ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾವೇ ಕೊನೆಯದ್ದು, ಅದರ ನಂತರ ಈ ಬ್ಯಾಂಕ್ ಗಳ ಸಾಲ ಮನ್ನಾ ಆಗಿಲ್ಲ. ಈ ಸಾಲಮನ್ನಾ ಮಾಡಿದ್ದರೆ ಸಂಕಷ್ಟದಲ್ಲಿರುವ ರೈತರು ಸ್ವಲ್ಪ ನಿರಾಳವಾಗುತ್ತಿದ್ದರು.

      * ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ಚಾಲನೆ ನೀಡಿರುವುದು ರೈತರು ಸೇರಿದಂತೆ ಎಲ್ಲ ಜನವರ್ಗಗಳ ಮೇಲೆ ಇನ್ನೊಂದು ಹೊಡೆತ. ಖಾಸಗಿಕರಣಗೊಂಡರೆ ರೈತರಿಗೆ ಈಗ ಲಭ್ಯ ಇರುವ ಉಚಿತ ವಿದ್ಯುತ್ ಖಂಡಿತ ಕಡಿತ ಆಗಲಿದೆ. ಇದರ ಜೊತೆಗೆ ಸಾಮಾನ್ಯ ಜನರ ಮನೆ ಬಳಕೆಯ ವಿದ್ಯುತ್ ಕೂಡಾ ದುಬಾರಿಯಾಗಲಿದೆ. ಉದ್ಯಮಿಗಳ ಮೇಲೆಯೂ ಹೆಚ್ಚಿನ ಹೊರೆ.

      * ವಿಮಾ ಕ್ಷೇತ್ರದಲ್ಲಿ 74% ಖಾಸಗಿ ಬಂಡವಾಳ ಹೂಡಿಕೆಗೆ ಅವಕಾಶ ಅಪಾಯಕಾರಿಯಾದ ಬೆಳವಣಿಗೆ. ನಮ್ಮಲ್ಲಿ ಬಹಳ ದುರ್ಬಲವಾದ ಸಾಮಾಜಿಕ ಭದ್ರತಾ ವ್ಯವಸ್ಥೆಯಿದೆ. ವಯಸ್ಸಾದವರು ಮತ್ತು ನಿವೃತ್ತರು ತಮ್ಮ ಆರೋಗ್ಯ ಭದ್ರತೆಗಾಗಿ ವಿಮೆಯನ್ನು ನಂಬಿದ್ದಾರೆ. ಈ ಕ್ಷೇತ್ರದ ಖಾಸಗೀಕರಣದಿಂದಾಗಿ ವಿಮೆಯಿಂದಲೂ ಭದ್ರತೆ ಇಲ್ಲದಂತಾಗುವ ದಿನ ದೂರ ಇಲ್ಲ.

      * ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಸಂಸದರಾಗಿದ್ದರೂ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಮೆಟ್ರೋ ಮತ್ತು ಬೆಂಗಳೂರು-ಚೆನ್ನೈ ಕಾರಿಡಾರ್ ಗೆ ನೀಡಿರುವ ಅನುದಾನ ಹೊಸದೇನಲ್ಲ. ಉಳಿದಂತೆ ಹಣಕಾಸು ಸಚಿವರು ಒಮ್ಮೆಯೂ ಕರ್ನಾಟಕದ ಹೆಸರನ್ನೂ ಕೂಡಾ ಎತ್ತಿಲ್ಲ.

      * ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಯಾವುದೇ ಪರಿಹಾರ ಬಜೆಟ್ನಿಂದ ಸಿಕ್ಕಿಲ್ಲ. ಚುನಾವಣೆ ನಡೆಯುವ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಅಸ್ಸಾಂ ರಾಜ್ಯಗಳಿಗೆ ಹೆಚ್ಚು ಹಣ ನೀಡಲಾಗಿದೆ. ಪ್ರತಿ ವರ್ಷ ಚುನಾವಣೆ ನಡೆಸಿದರೆ ನಮಗೂ ಹೆಚ್ಚಿನ ಅನುದಾನ ನೀಡಬಹುದು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+