ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಹೊಸ ವರ್ಷಾಚರಣೆ ಇಲ್ಲ

Posted By: Gururaj
Subscribe to Oneindia Kannada

ಬೆಂಗಳೂರು, ಡಿಸೆಂಬರ್ 28 : ಬಂಡೀಪುರ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಹೊಸ ವರ್ಷಾರಣೆ ಮಾಡುವಂತಿಲ್ಲ. ಅರಣ್ಯದೊಳಗಿನ ವಸತಿ ಗೃಹದ ಬುಕ್ಕಿಂಗ್ ಸ್ಥಗಿತಗೊಳಿಸಲಾಗಿದೆ.

ಅರಣ್ಯ ಇಲಾಖೆ ಡಿ.31ರಂದು ಅರಣ್ಯದೊಳಗಿನ ವಸತಿಗೃಹ, ಡಾರ್ಮೆಟರಿಗಳಲ್ಲಿ ಪ್ರವಾಸಿಗರಿಗೆ ವಾಸ್ತವ್ಯ ಹೂಡಲು ಬುಕ್ಕಿಂಗ್ ಮಾಡಿಕೊಳ್ಳುತ್ತಿಲ್ಲ. ಅಬ್ಬರದ ಸಂಗೀತ, ಪಟಾಕಿ ಸಿಡಿಸಿ ಹೊಸ ವರ್ಷಾಚಾರಣೆ ಮಾಡುವುದರಿಂದ ವನ್ಯಜೀವಿಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ, ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ 15 ಸಾವಿರ ಪೊಲೀಸರ ಪಹರೆ!

No new year celebration in Bandipur reserve forest

ಉದ್ಯಾನದ ವ್ಯಾಪ್ತಿಯ ಖಾಸಗಿ ರೆಸಾರ್ಟ್, ಹೋಟೆಲ್, ಹೋಮ್ ಸ್ಟೇಗಳಲ್ಲಿ ವಾಸ್ತವ್ಯ ಹೂಡುವ ಜನರು, ಅಬ್ಬರ ಸಂಗೀತ, ಪಟಾಕಿಗಳಿಲ್ಲದೇ ಹೊಸ ವರ್ಷಾಚರಣೆ ಮಾಡಬೇಕು ಎಂದು ಸೂಚನೆ ನೀಡಿದೆ.

ಹೊಸ ವರ್ಷಕ್ಕೆ ನಿಮ್ಮ ಸಂಕಲ್ಪವೇನು? ನಮ್ಮ 5 ಸಲಹೆ

ಅರಣ್ಯ ವ್ಯಾಪ್ತಿಯಲ್ಲಿರುವ ರೆಸಾರ್ಟ್, ಪಾರ್ಟಿ ಹಾಲ್, ಹೋಮ್‌ ಸ್ಟೇಗಳ ಮಾಹಿತಿಯನ್ನು ಸಂಗ್ರಹಣೆ ಮಾಡುತ್ತಿದ್ದೇವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಬಂಡೀಪುರ ರಾಷ್ಟ್ರೀಯ ಉದ್ಯಾನದ ಸುತ್ತಮುತ್ತಲಿನ ವಸತಿಗೃಹಗಳಲ್ಲಿ ಹೆಚ್ಚು ಸದ್ದು ಹೊರಡಿಸುವ ಮ್ಯೂಸಿಕ್ ಸಿಸ್ಟಂ ಬಳಸದಂತೆ ಸೂಚಿಸಲಾಗಿದೆ. ಇದಕ್ಕೂ ಮೀರಿ ಧ್ವನಿವರ್ಧಕ, ಡಿಜೆ ಬಳಕೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಕಳೆದ ವರ್ಷವೂ ಬಂಡೀಪುರ ವ್ಯಾಪ್ತಿಯಲ್ಲಿ ಹೊಸವರ್ಷಾಚರಣೆ ನಿಷೇಧಿಸಬೇಕು ಎಂಬ ಪ್ರಸ್ತಾಪ ಕೇಳಿಬಂದಿತ್ತು. ಈ ವರ್ಷ ಬುಕ್ಕಿಂಗ್ ನಿಲ್ಲಿಸುವ ಮೂಲಕ ಅರಣ್ಯ ಇಲಾಖೆ ಇದನ್ನು ಜಾರಿಗೆ ತರಲು ಮುಂದಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Forest department banned New Year celebration in Bandipur reserve forest, stopped booking in dormitory on December 31, 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ