ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ನಿಪಾಹ್ ಇಲ್ಲ ನಿಶ್ಚಿಂತೆಯಿಂದಿರಿ: ಇಲಾಖೆ ಅಭಯ

By Nayana
|
Google Oneindia Kannada News

ಬೆಂಗಳೂರು, ಜೂನ್ 1: ಬೆಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಕೇರಳ ಮೂಲದ ಮೂವರಲ್ಲಿ ಜ್ವರ ಕಾಣಿಸಿಕೊಂಡಿತ್ತು, ಆದರೆ ಅದು ನಿಪಾಹ್ ವೈರಸ್ ಅಲ್ಲ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಶ್ರೂಶಕರಾಗಿರುವ ಈ ಮೂವರಲ್ಲಿ ಜ್ವರ, ತಲೆನೋವು ಸೇರಿದಂತೆ ನಿಪಾಹ್ ರೋಗದ ಲಕ್ಷಣಗಳು ಕಂಡುಬಂದಿದ್ದವು. ಅಲ್ಲದೆ ಇವರು ಕೇರಳ ಮೂಲದವರಾಗಿದ್ದರಿಂದ ಹದಿನೈದು ದಿನಗಳ ಹಿಂದೆ ಕೇರಳಕ್ಕೆ ಹೋಗಿ ಬಂದಿದ್ದರು.

ಬೆಂಗಳೂರಿನಲ್ಲಿ ಮೂರು ಶಂಕಿತ ನಿಪಾಹ್ ಪ್ರಕರಣ ಪತ್ತೆಬೆಂಗಳೂರಿನಲ್ಲಿ ಮೂರು ಶಂಕಿತ ನಿಪಾಹ್ ಪ್ರಕರಣ ಪತ್ತೆ

ಗಂಟಲು ಮತ್ತು ಮೂಗಿನ ದ್ರವವನ್ನು ಮಣಿಪಾಲ್ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಇದೀಗ ಪರೀಕ್ಷಾ ವರದಿ ಬಂದಿದ್ದು ನಿಪಾಹ್ ಅಲ್ಲ ಎನ್ನುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

No Nipah virus found in Karnataka

ರಾಜ್ಯದಲ್ಲಿ ನಿಪಾಹ್ ಭೀತಿ ಇಲ್ಲ ಮಂಗಳೂರು, ಚಿಂತಾಮಣಿ ಸೇರಿದಂತೆ ಶಂಕಿತ ಪ್ರಕಟಣಗಳ ವರದಿಯಿಂದ ನಿಪಾಹ್ ವೈರಸ್ ಅಲ್ಲ ಎಂಬುದು ಸಾಬೀತಾಗಿದೆ. ಒಂದು ವೇಳೆ ವರದಿಯಲ್ಲಿ ನಿಪಾಹ್ ಎಂದು ಬಂದಿದ್ದರೆ ಅದನ್ನು ಖಚಿತಪಡಿಸಿಕೊಳ್ಳಲು ಪುನಃ ಪೂನಾದ ಪ್ರಯೋಗಾಲಯಕ್ಕೆ ಮಾದರಿಯನ್ನು ಕಳುಹಿಸಬೇಕಿತ್ತು. ಆದರೆ ಇದೀಗ ಅದರ ಅಗತ್ಯವಿಲ್ಲ. ಹೀಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

English summary
Department of health and family welfare has clarified that there was no Nipah virus found in three suspected in the state and also issued some tips to general public to educate how to avoid diseases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X