ನಮ್ಮ ಸರ್ಕಾರವನ್ನು ಯಾರೂ ತೆಗೆಯಲು ಸಾಧ್ಯವಿಲ್ಲ: ಹೆಚ್ಡಿಕೆಗೆ ತಿರುಗೇಟು ನೀಡಿದ ಡಿ ಕೆ ಶಿವಕುಮಾರ್
ಬೆಂಗಳೂರು, ಆಗಸ್ಟ್ 30: ಕುಮಾರಸ್ವಾಮಿ ಅವರು ಶಾಸಕರಾಗಿದ್ದಾಗ ಈ ರೀತಿ ಕೆಲಸಗಳನ್ನು ಮಾಡಬೇಡಿ ಎಂದು ನಾವು ಹೇಳಿದ್ದೆವಾ? ಯಾರನ್ನೂ ನಾವು ತಡೆದಿರಲಿಲ್ಲ. ಅವರಿಗೆ ಕೆಲಸ ಮಾಡಲು ಅವಕಾಶ ಸಿಕ್ಕಿತ್ತು. ಆದರೂ ಮಾಡಲಿಲ್ಲ. ಈಗ ಇಲ್ಲಿ ಕುರ್ಚಿ ಖಾಲಿ ಇದೆ. ನಾವು ಬಂದು ಕೆಲಸ ಮಾಡುತ್ತಿದ್ದೇವೆ. ಖಾಲಿ ಇರುವ ಚೇರಿನಲ್ಲಿ ನಾವು ಕೂರಬೇಕೋ ಬೇಡವೋ? ನಮ್ಮ ಸರ್ಕಾರವನ್ನು ಯಾರೂ ತೆಗೆಯಲು ಸಾಧ್ಯವಿಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೆಳಕೆರೆ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣದ ಶಂಕುಸ್ಥಾಪನೆ ಬಳಿಕ ಗ್ರಾಮಸ್ಥರನ್ನು ಉದ್ದೇಶಿಸಿ ಶಿವಕುಮಾರ್, ನಾವು ನಿಮ್ಮ ಕೆಲಸ ಮಾಡಿಕೊಡುತ್ತೇವೆ. ದೇವರ ಸನ್ನಿಧಿಯಲ್ಲಿ ಈ ಮಾತು ನೀಡುತ್ತಿದ್ದೇವೆ. ಚುನಾವಣೆ ಸಮಯದಲ್ಲಿ ಯಾರೋ ಬಂದರು ಏನೋ ಹೇಳಿದರು ಎಂಬುದನ್ನು ಕೇಳದೆ, ನೀವು ನಮಗೆ ಬೆಂಬಲ ನೀಡಿ. ನಾವು ನಿಮ್ಮ ಜತೆ ಇರುತ್ತೇವೆ ಎಂದು ಭರವಸೆ ನೀಡಿದರು.

ನಾವು ನಿಮ್ಮನ್ನು ಬಿಟ್ಟು ಓಡಿ ಹೋಗುವುದಿಲ್ಲ. ನಾವೆಲ್ಲರೂ ಮೂಲತಃ ಬೆಂಗಳೂರಿನವರು. ಈ ಹಿಂದೆ ನಾವು ಬೆಂಗಳೂರು ಗ್ರಾಮಾಂತರ ಜಿಲ್ಲೆಯವರಾಗಿದ್ದವರು ಈಗ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿದರೆ ತಪ್ಪೇನು? ನಿಮ್ಮ ಮನೆಯಲ್ಲಿರುವ ಹಳೇ ದಾಖಲೆಗಳನ್ನು ನೋಡಿ ಇದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂದು ಇದೆ. ಈ ಹೆಸರನ್ನು ಉಳಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ಇದರಿಂದ ಈ ಭಾಗದಲ್ಲಿ ಅಭಿವೃದ್ಧಿಯಾಗುತ್ತದೆ. ಈ ಭಾಗದಲ್ಲಿ ಕೈಗಾರಿಕೆ ಬಂದರೆ ಇಲ್ಲಿಂದಲೇ ಬೆಳಗ್ಗೆ ಕೆಲಸಕ್ಕೆ ಹೋಗುತ್ತಾರೆ, ಸಂಜೆ ವಾಪಸ್ ಬರುತ್ತಾರೆ. ಉದ್ಯೋಗ ಹಾಗೂ ಶಿಕ್ಷಣಕ್ಕಾಗಿ ಬೆಂಗಳೂರು ನಗರಕ್ಕೆ ವಲಸೆ ಹೋಗುವುದನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ತಿಳಿಸಿದರು.
ನೀವು ನಮ್ಮ ಕೈ ಬಲಪಡಿಸಿ, ನಾವು ನಿಮ್ಮ ಋಣ ತೀರಿಸುತ್ತೇವೆ. ನಾವು ನಿಮ್ಮನ್ನು ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲನಾವು ಮಾತು ಕೊಟ್ಟರೆ ಅದನ್ನು ಉಳಿಸಿಕೊಳ್ಳುತ್ತೇವೆ. ನಾವು ನುಡಿದಂತೆ ನಡೆಯುತ್ತೇವೆ ಎಂಬ ಕಾರಣಕ್ಕೆ ರಾಜ್ಯದ ಜನ ನಮಗೆ 135 ಸೀಟು ಕೊಟ್ಟು ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ನಿಮ್ಮ ಊರಿನಲ್ಲಿ ಸಣ್ಣಪುಟ್ಟ ಶುಭ ಕಾರ್ಯಕ್ರಮ ನಡೆಸಲು ಸಮುದಾಯಭವನ ಬೇಕು ಎಂದು ಕೇಳಿಕೊಂಡರು. ಅದಕ್ಕಾಗಿ ನಾವು ಬಂದು ಇಂದು ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಮಾಡಿದ್ದೇವೆ. ಈ ಭಾಗದ ನಾಲ್ವರು ವಿಧಾನ ಪರಿಷತ್ ಸದಸ್ಯರು ತಲಾ 15 ಲಕ್ಷ ಆರ್ಥಿಕ ನೆರವು ನೀಡುವುದಾಗಿ ಹೇಳಿದ್ದಾರೆ. ಉಳಿದ ಅನುದಾನದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
.
ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತು. 200 ಯೂನಿಟ್ ವರೆಗೂ ಉಚಿತ ವಿದ್ಯುತ್, ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ, ಬಸ್ ನಲ್ಲಿ ಉಚಿತ ಪ್ರಯಾಣ, ಅನ್ನಭಾಗ್ಯ ಯೋಜನೆ ನೀಡುತ್ತಿದ್ದೇವೆ. ಹೆಣ್ಣು ಕುಟುಂಬದ ಕಣ್ಣು, ಕಷ್ಟವೋ ಸುಖವೋ ಹೆಣ್ಣು ಕುಟುಂಬವನ್ನು ಸಮರ್ಥವಾಗಿ ನಿಭಾಯಿಸುತ್ತಾಳೆ. ಈ ಕಾರಣಕ್ಕೆ ನಾವು ಮಹಿಳೆಯರಿಗೆ ಹೆಚ್ಚಿನ ನೆರವಾಗುವ ಯೋಜನೆ ಜಾರಿ ಮಾಡಿದ್ದೇವೆ ಎಂದರು.
ಸಧ್ಯದಲ್ಲೇ ಚುನಾವಣೆ ಬರಲಿದೆ. ಇಲ್ಲಿ ಶಾಸಕ ಸ್ಥಾನ ಖಾಲಿ ಇದೆ. ನಾವು ಯಾರನ್ನೇ ಇಲ್ಲಿ ನಿಲ್ಲಿಸಿದರೂ ನಾನೇ ಅಭ್ಯರ್ಥಿ. ಕಾರಣ ನಾನೇ ಟಿಕೆಟ್ ಕೊಟ್ಟು ಚುನಾವಣೆಗೆ ನಿಲ್ಲಿಸುತ್ತೇನೆ. ನಿಮ್ಮ ಮತ ನನಗೆ ಬೀಳಲಿದೆ. ಇಂದು ನಡೆದ ಉದ್ಯೋಗ ಮೇಳದಲ್ಲಿ 8 ಸಾವಿರ ಯುವಕರು ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ. ತಾಲೂಕಿನ ಎಲ್ಲಾ ಊರುಗಳಲ್ಲಿ ಯಾವ ಯಾವ ಕೆಲಸಗಳಾಗಬೇಕು ಎಂದು ಕೇಳಿದ್ದೇವೆ. 22 ಸಾವಿರ ಮಂದಿ ತಮ್ಮ ಸಮಸ್ಯೆಗಳ ನಿವಾರಣೆಗೆ ಅರ್ಜಿ ನೀಡಿದ್ದು, ಆ ಪೈಕಿ 9 ಸಾವಿರ ಜನ ನಿವೇಶನ ಹಾಗೂ ಮನೆ ಬೇಕು ಎಂದು ಕೇಳಿದ್ದಾರೆ" ಎಂದು ತಿಳಿಸಿದರು.
ಪಕ್ಕದ ಊರುಗಳಲ್ಲಿ, ಚನ್ನಪಟ್ಟಣದ ಸುತ್ತಮುತ್ತ ಅನೇಕ ಜಮೀನುಗಳನ್ನು ಖರೀದಿ ಮಾಡಿ ಲೇಔಟ್ ಮಾಡಿ ಬಡವರಿಗೆ ನಿವೇಶನ ನೀಡಲಾಗುವುದು. ಇಲ್ಲೂ ಜಾಗ ಇದ್ದರೆ ಹೇಳಿ, ಇಲ್ಲೂ ಖರೀದಿ ಮಾಡಿ ನಿವೇಶನ ನೀಡುತ್ತೇವೆ. ಇನ್ನು ವಸತಿ ಇಲಾಖೆಯಿಂದ ಈ ತಾಲೂಕಿನ 5 ಸಾವಿರ ಬಡವರಿಗೆ ಮನೆ ನೀಡಲಾಗುವುದು. ಈ ತಾಲೂಕಿನ ಅಭಿವೃದ್ಧಿಗೆ ನಮ್ಮ ಸರ್ಕಾರ 150 ಕೋಟಿ ರೂ. ಅನುದಾನ ನೀಡಿದೆ. ನೀರಾವರಿ ಯೋಜನೆಗಳಿಗೂ ಅನುದಾನ ನೀಡಲಾಗಿದೆ. ಸರಿಸುಮಾರು 500 ಕೋಟಿಯಷ್ಟು ಅನುದಾನದ ಯೋಜನೆಗಳನ್ನು ಈ ತಾಲೂಕಿಗೆ ನೀಡಿದ್ದೇವೆ ಎಂದು ತಿಳಿಸಿದರು.
-
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Vijay: ಇದು ತಲೆಮಾರಿನ ಬದಲಾವಣೆಗಾಗಿ ನಡೆಯುತ್ತಿರುವ ಚುನಾವಣೆ: ಕಾರ್ಯಕರ್ತರಿಗೆ ದಳಪತಿ ವಿಜಯ್ ವಿಶೇಷ ಕರೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ











Click it and Unblock the Notifications