Darshan: ದರ್ಶನ ಪ್ರಕರಣ ಮುಚ್ಚಿಹಾಕಲು ಡಿ ಕೆ ಶಿವಕುಮಾರ್‌ ಸಂಪರ್ಕ: ಕನಕಪುರ ಬಂಡೆ ಹೇಳಿದ್ದೇನು?

ಬೆಂಗಳೂರು,ಜೂನ್‌ 14: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿ ಜೈಲು ಸೇರಿದ್ದು, ರೇಣುಕಾ ಸ್ವಾಮಿ ಕೊಲೆ ಕೇಸ್‌ ನಿಂದ ಬಚಾವ್ ಆಗುವ ನಿಟ್ಟಿನಲ್ಲಿ ದರ್ಶನ್ ಪ್ರಭಾವಿ ರಾಜಕಾರಣಿಗಳಾದ ಡಿ ಕೆ ಶಿವಕುಮಾರ್‌ ಅವರು ಕರೆ ಮಾಡಿ ಮಾಡಿದ್ದಾರೆ ಎನ್ನುವ ಚರ್ಚೆ ನಡೆಯುತ್ತಿದೆ.

ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯನ್ನು ಶಾಮಿಯಾನ ಮೂಲಕ ಮುಚ್ಚಲಾಗಿದೆ. ಈ ಪ್ರಕರಣದಲ್ಲಿ ಸತ್ಯಾಂಶ ಮರೆಮಾಚುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ ಮಾಧ್ಯಮಗಳ ಜೊತೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಮಾತನಾಡಿ,ನನ್ನ ಪ್ರಕರಣದ ಅನುಭವದಲ್ಲೇ ಹೇಳುವುದಾದರೆ, ಅಧಿಕಾರಿಗಳು ನನ್ನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವಾಗ ಜನರಿಗೆ ಮರೆಮಾಚಿ ಕರೆದುಕೊಂಡು ಹೋಗುವರು.

No One Has Contacted Me To Close The Darshan Case Says DK Shivakumar

ಕೆಲವು ಬಾರಿ ಅಭಿಮಾನಿಗಳು ಅಡ್ಡಬರುವುದು, ಜೈಕಾರ ಕೂಗುವುದು ಅಥವಾ ಯಾರಾದರೂ ಕಲ್ಲು ಎಸೆಯಬಹುದು ಎಂಬ ಕಾರಣಕ್ಕೆ ಪೊಲೀಸ್ ಅಧಿಕಾರಿಗಳು ಆ ರೀತಿ ಮಾಡುತ್ತಾರೆ. ಈ ಪ್ರಕರಣದಲ್ಲಿ ಪೊಲೀಸರು ಇದೇ ರೀತಿ ಮುನ್ನಚ್ಚರಿಕೆ ಕ್ರಮ ತೆಗೆದುಕೊಂಡಿರಬಹುದು. ನನಗೆ ಮಾಹಿತಿ ಇಲ್ಲ ಎಂದು ಡಿ ಕೆ ಶಿವಕುಮಾರ್‌ ಹೇಳಿದರು.

ಸಾರ್ವಜನಿಕರು ಹೋಗಿ ದೂರು ನೀಡಲು ಆಗುತ್ತಿಲ್ಲ ಎಂಬ ಪ್ರಶ್ನೆಗೆ ಮಾತನಾಡಿ, ಈ ವಿಚಾರವಾಗಿ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಇದೆಲ್ಲವೂ ನನಗೆ ಹೊಸ ಮಾಹಿತಿ ಎಂದು ಹೇಳಿದರು. ದರ್ಶನ ಪ್ರಕರಣ ಮುಚ್ಚಿಹಾಕಲು ನಿಮ್ಮ ಸಚಿವರು ಯಾರಾದರೂ ಒತ್ತಡ ಹಾಕಿದ್ದಾರಾ ಎಂಬ ಕುರಿತು ಈ ವಿಚಾರವಾಗಿ ನನ್ನ ಬಳಿ ಯಾರೂ ಮಾತನಾಡಿಲ್ಲ. ನನಗೆ ಅಷ್ಟಾಗಿ ಸಂಪರ್ಕವಿಲ್ಲ. ಸಚಿವರ ಪ್ರಯತ್ನದ ಬಗ್ಗೆ ನಿಮ್ಮಿಂದ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸುತ್ತೇನೆ ಎಂದು ಹೇಳಿದರು.

ಈ ಪ್ರಕರಣ ರಾಜ್ಯ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸಿದರೆ ನಾನು ಮಧ್ಯಪ್ರವೇಶಿಸಬೇಕಾಗುತ್ತದೆ ಎಂಬ ಕುಮಾರಸ್ವಾಮಿ ಅವರ ಎಚ್ಚರಿಕೆ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು, ಈಗಲೂ ಅವರು ಮಧ್ಯಪ್ರವೇಶಿಸಲಿ. ಯಾರು ಬೇಕಾದರೂ ಮಧ್ಯಪ್ರವೇಶ ಮಾಡಲಿ ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಕೆಲಸ ತ್ವರಿತ ಗತಿಯಲ್ಲಿ ನಡೆಸಲು ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ದೆಹಲಿ ಪ್ರತಿನಿಧಿ ಟಿ.ಬಿ ಜಯಚಂದ್ರ, ಕಂದಾಯ, ಅರಣ್ಯ, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಇಂದು ಚರ್ಚೆ ಮಾಡಿದ್ದೇವೆ.

ಈ ಯೋಜನೆಗೆ ಅಗತ್ಯವಿರುವ ಜಾಗವನ್ನು ಅರಣ್ಯ ಇಲಾಖೆ ನೀಡುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ಅರಣ್ಯ ಇಲಾಖೆಗೆ 500 ಎಕರೆ ಜಾಗ ನೀಡಲಿದೆ. ಈ ಪ್ರಕ್ರಿಯೆಯನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸುತ್ತೇವೆ.

ಈ ಯೋಜನೆಗಳ ಕಾಮಗಾರಿಗೆ ಎದುರಾಗಿರುವ ಸಮಸ್ಯೆಗಳನ್ನು ಅಧಿಕಾರಿಗಳು ಗುರುತಿಸಿದ್ದು, ಅವುಗಳಿಗೆ ಪರಿಹಾರ ಹುಡುಕಲು ಸಭೆಯಲ್ಲಿ ಚರ್ಚಿಸಿದ್ದೇವೆ.

260 ಕಿ.ಮೀ ಉದ್ಧದ 20 ಸ್ಥಳಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಇವೆ. ಈ ಯೋಜನೆಗೆ ಅರಣ್ಯ ಇಲಾಖೆ ಅನುಮತಿ ಅಗತ್ಯವಿದ್ದ ಕಾರಣ ನಮ್ಮ ಅರಣ್ಯ ಸಚಿವರು ಹಾಗೂ ಇಲಾಖೆ ಸಚಿವರ ಜತೆ ಚರ್ಚೆ ಮಾಡಿದ್ದೇವೆ. ಈ ವಿಚಾರವಾಗಿ ಕಂದಾಯ, ನೀರಾವರಿ ಹಾಗೂ ಅರಣ್ಯ ಇಲಾಖೆ ಸೇರಿ ಒಟ್ಟಾಗಿ ಜಂಟಿ ಸರ್ವೇ ಮಾಡುತ್ತಿದ್ದೇವೆ. ಅರಣ್ಯ ಇಲಾಖೆಗೆ ಬದಲಿ ಜಮೀನು ನೀಡಲು ಕಂದಾಯ ಇಲಾಖೆ ಒಪ್ಪಿದೆ. ಕೂಡಲೇ ಈ ಕಾಮಗಾರಿ ನಡೆಸಲು ಮನವಿ ಮಾಡಿದ್ದೇವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+