Eggs Controversy: ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಏನಂದ್ರು?
ಬೆಂಗಳೂರು, ಡಿಸೆಂಬರ್ 16: ಸಹಜವಾಗಿ ಕೆಲವರಿಗೆ ಮೊಟ್ಟೆ ಅಂದ್ರೆ ಇಷ್ಟ. ವೆಜಿಟೇರಿಯನ್ಸ್ ಹಾಗೂ ನಾನ್ ವೆಜಿಟೇರಿಯನ್ಸ್ ಕೂಡ ಪ್ರೋಟಿನ್ ಫುಡ್ ವಿಚಾರಕ್ಕೆ ಬಂದಾಗ ಅವರ ಮೊದಲ ಆಯ್ಕೆಯೇ ಮೊಟ್ಟೆಯಾಗಿರುತ್ತದೆ. ಆದರೆ, ಇತ್ತೀಚಿಗಷ್ಟೇ ಬೆಳಕಿಗೆ ಬಂದ ವಿಚಾರ ಸದ್ಯ ಭಾರೀ ಸದ್ದಯ ಮಾಡುತ್ತಿದ್ದು, ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂಬ ಆರೋಪದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಸದ್ಯ ಮೊಟ್ಟೆ ಪ್ರಿಯರಿಗೆ ಬಿಗ್ ಶಾಕಿಂಗ್ ನ್ಯೂಸ್ ಎದುರಾಗಿದೆ.
ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ಆರೋಪದ ಕುರಿತು ಸಚಿವ ದಿನೇಶ್ ಗುಂಡೂರಾವ್ ಅವರು ಮಾತನಾಡಿ, ಮೊಟ್ಟೆಯಲ್ಲಿ ಕ್ಯಾನ್ಸರ್ ಉಂಟುಮಾಡುವ ಅಂಶಗಳು ಕಂಡುಬಂದಿವೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ವದಂತಿಗೆ ಜನರು ಭಯಪಡುವ ಅಗತ್ಯ ಇಲ್ಲ. ರಾಜ್ಯಾದ್ಯಂತ ಉಂಟಾಗಿರುವ ಆತಂಕವನ್ನು ಗಂಭೀರವಾಗಿ ಪರಿಗಣಿಸಿ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆ ನಡೆಸಲು ನಿರ್ದೇಶನ ನೀಡಲಾಗಿದೆ.

ಮೊಟ್ಟೆಗಳ ಬಗೆಗೆ ಉಂಟಾಗಿರುವ ಸಂಶಯಕ್ಕೆ ಅನುಸಾರವಾಗಿ ಪರೀಕ್ಷೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಸಂಬಂಧಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಇದೇ ರೀತಿಯಲ್ಲಿ ಈ ಹಿಂದೆ ಮೊಟ್ಟೆ ವಿಚಾರದಲ್ಲಿ ವದಂತಿ ಹರಡಿದಾಗ ನಡೆಸಿದ್ದ ಪರೀಕ್ಷೆಗಳಲ್ಲಿ ಮೊಟ್ಟೆಯಲ್ಲಿ ಯಾವುದೇ ರೀತಿಯ ಹಾನಿಕಾರಕ ಅಂಶಗಳು ಕಂಡುಬಂದಿರಲಿಲ್ಲ ಹಾಗಾಗಿ ಯಾವುದೇ ರೀತಿಯ ಸಮಸ್ಯೆ ಆಗುವುದಿಲ್ಲ ಎಂಬ ಭರವಸೆಯಿದೆ. ನಾಗರೀಕರು ನಿರ್ಭೀತಿಯಿಂದ ಇರುವಂತೆ ಕೋರುತ್ತೇನೆ.
ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಜಾಲತಾಣಗಳಲ್ಲಿ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ಪರೀಕ್ಷೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆ ನಡೆಸಿದ ಪರೀಕ್ಷೆಗಳಲ್ಲಿ ಮೊಟ್ಟೆ ಹಾನಿಕಾರಕ ಅಂಶಗಳು ಕಂಡುಬಂದಿಲ್ಲ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕ್ಯಾನ್ಸರ್ ಕಾರಕ ಅಂಶದ ವರದಿಯ ಕುರಿತು ಯಾರು ಆತಂಕ ಪಡುವ ಅಗತ್ಯವಿಲ್ಲ. ಮೊನ್ನೆ ಕಂಪನಿಯೊಂದರ ಮೊಟ್ಟೆಯ ಉಪಯೋಗ ಮಾಡಬಾರದು ಅಂತ ವಿಡಿಯೋವೊಂದು ವೈರಲ್ ಆಗಿತ್ತು. ಕಂಪನಿಯ ಮೊಟ್ಟೆಯಲ್ಲಿ ಉಪಯೋಗ ಮಾಡಬಾರದು, ಆ್ಯಂಟಿ ಬಯೋಟೆಕ್ ಅಂಶ ಇದೆ ಎಂಬ ಬಗ್ಗೆ ಮಾಹಿತಿ ಬಂದಿತ್ತು. ಇದರ ಕುರಿತಂತೆ ಸ್ಪಷ್ಟವಾದ ವಿಚಾರ ತಿಳಿದುಕೊಳ್ಳಲು ನಮ್ಮ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದರು.












Click it and Unblock the Notifications