ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಭಿಮಾನಿಗಳ ಸಂಘ ಕಟ್ಟಬೇಡಿ; ಡಿ. ಕೆ. ಶಿವಕುಮಾರ್ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಆಗಸ್ಟ್ 11 : "ನನ್ನ ಹೆಸರು ಬಳಸಿಕೊಂಡು ಯಾರೂ ಕೂಡ ಅಭಿಮಾನಿಗಳ ಸಂಘ, ಟ್ರಸ್ಟ್, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳುವಂತಿಲ್ಲ" ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಫೇಸ್‌ಬುಕ್ ಪೋಸ್ಟ್ ಮೂಲಕ ಈ ಕುರಿತು ಮನವಿ ಮಾಡಿದ್ದಾರೆ. "ನನ್ನ ಹೆಸರಿನ ಅಭಿಮಾನಿ ಸಂಘ, ಸಂಸ್ಥೆಗಳನ್ನು ತಕ್ಷಣದಿಂದಲೇ ವಿಸರ್ಜಿಸಬೇಕು" ಎಂದು ಸೂಚನೆ ನೀಡಿದ್ದಾರೆ.

ಬಿಜೆಪಿ ಸರ್ಕಾರ ಟಿಪ್ಪು ಇತಿಹಾಸ ತಿರುಚಲು ಬಿಡಲ್ಲ: ಡಿ.ಕೆ ಶಿವಕುಮಾರ್ ಬಿಜೆಪಿ ಸರ್ಕಾರ ಟಿಪ್ಪು ಇತಿಹಾಸ ತಿರುಚಲು ಬಿಡಲ್ಲ: ಡಿ.ಕೆ ಶಿವಕುಮಾರ್

"ಒಂದೊಮ್ಮೆ ಯಾರಾದರೂ ನನ್ನ ಹಾಗೂ ನನ್ನ ಸಹೋದರ ಡಿ. ಕೆ. ಸುರೇಶ್ ಹೆಸರಿನ ಸಂಘ ಸಂಸ್ಥೆಗಳ ಮೂಲಕ ಚಟುವಟಿಕೆ ನಡೆಸಿದರೆ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು" ಎಂದು ಎಚ್ಚರಿಸಿದ್ದಾರೆ.

ಹೋಟೆಲ್ ಉದ್ಯಮಿಗಳ ಸಂಕಷ್ಟ; ಸಿಎಂಗೆ ಡಿ. ಕೆ. ಶಿವಕುಮಾರ್ ಪತ್ರ ಹೋಟೆಲ್ ಉದ್ಯಮಿಗಳ ಸಂಕಷ್ಟ; ಸಿಎಂಗೆ ಡಿ. ಕೆ. ಶಿವಕುಮಾರ್ ಪತ್ರ

No One Should Start Fans Association Trust Says DK Shivakumar

ಡಿ. ಕೆ. ಶಿವಕುಮಾರ್ ಅವರು ಈಗಾಗಲೇ ಅಸ್ತಿತ್ವದಲ್ಲಿರುವ ಎಂ. ಎಸ್. ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘವನ್ನು ಹೊರತುಪಡಿಸಿ ನನ್ನ ಹೆಸರಿನ ಅಭಿಮಾನಿ ಸಂಘ, ಸಂಸ್ಥೆಗಳನ್ನು ತಕ್ಷಣದಿಂದಲೇ ವಿಸರ್ಜಿಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

ರಾಹುಲ್ ಗಾಂಧಿ ಜೊತೆ ಡಿ. ಕೆ. ಶಿವಕುಮಾರ್ ಮಹತ್ವದ ಸಭೆ ರಾಹುಲ್ ಗಾಂಧಿ ಜೊತೆ ಡಿ. ಕೆ. ಶಿವಕುಮಾರ್ ಮಹತ್ವದ ಸಭೆ

ಕೆಪಿಸಿಸಿ ಅಧ್ಯಕ್ಷರಾಗಿ ಡಿ. ಕೆ. ಶಿವಕುಮಾರ್ ನೇಮಕವಾಗುತ್ತಿದ್ದಂತೆ ಅವರ ಅಭಿಮಾನಿಗಳ ಹೆಸರಿನಲ್ಲಿ ಹಲವು ಅಭಿಮಾನಿ ಸಂಘಗಳು ಹುಟ್ಟಿಕೊಂಡಿವೆ. ಆದ್ದರಿಂದ, ಅವರು ಫೇಸ್‌ ಬುಕ್ ಮೂಲಕ ಈ ಕುರಿತು ಸೂಚನೆಗಳನ್ನು ಕೊಟ್ಟಿದ್ದಾರೆ.

English summary
In a face book post KPCC president D. K. Shivakumar said that no one should start fans association, trust or any organisation in his name. Akhila Karnataka DK Shivakumar Abhimanigala Sangha founded by M.S. Angadi is the only official association.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X