ಆನ್‌ಲೈನ್ ಮೂಲಕ 2 ದಿನ ವಿದ್ಯುತ್ ಬಿಲ್ ಪಾವತಿ ಮಾಡುವಂತಿಲ್ಲ
ಬೆಂಗಳೂರು, ಡಿಸೆಂಬರ್ 12 : ಎರಡು ದಿನಗಳ ಕಾಲ ಆನ್‌ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕ ಸೇವೆ ಸೇರಿದಂತೆ ವಿವಿಧ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕಾರ ನೀಡಬೇಕು ಎಂದು ಜನರಲ್ಲಿ ಮನವಿ ಮಾಡಲಾಗಿದೆ.
ಡಿಸೆಂಬರ್ 13 ರಿಂದ 15ರ ಸಂಜೆ 6 ಗಂಟೆಯ ತನಕ ಆನ್‌ಲೈನ್ ಸೇವೆ ಲಭ್ಯವಿರುವುದಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತುರ್ತು ನಿರ್ವಹಣಾ ಕಾರ್ಯ ನಿಮಿತ್ತ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳು ಆನ್‌ಲೈನ್ ಸೇವೆಗಳನ್ನು ಸ್ಥಗಿತಗೊಳಿಸಲಿವೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ, ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಮತ್ತು ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳ ಆನ್‌ಲೈನ್ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ.

ಬೆಂಗಳೂರು ವಿದ್ಯುತ್ ಸರಬರಾಜು (ಬೆಸ್ಕಾಂ) ಕಂಪನಿಯು ಈ ಕೆಳಕಂಡ ನಗರ ಉಪ ವಿಭಾಗದ ಗ್ರಾಹಕರಿಗೆ ಕೆಳಗೆ ತಿಳಿಸಿರುವ ಆನ್‌ಲೈನ್ ಸೇವೆಗಳು ಸದರಿ ಅವಧಿಯಲ್ಲಿ ಲಭ್ಯವಿರುವುದಿಲ್ಲ ಎಂದು ಪ್ರಕಟಣೆ ಹೇಳಿದೆ.
ಬೆಂಗಳೂರು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು -1, ತುಮಕೂರು-2, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ. ಜಿ. ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು.
ಆನ್‌ಲೈನ್ ಸೇವೆಗಳು ಸ್ಥಗಿತಗೊಳ್ಳುವುದರಿಂದ ಜನರಿಗೆ ಆಗುವ ಅನಾನುಕೂಲಕ್ಕಾಗಿ ವಿಷಾದ ವ್ಯಕ್ತಪಡಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.












Click it and Unblock the Notifications